Karnataka Anganwadi Recruitment 2024 : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು (Anganwadi worker) ಮತ್ತು ಅಂಗನವಾಡಿ ಸಹಾಯಕಿಯರ (Anganwadi Assistant) ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Department of women and child development karnataka) ಅರ್ಜಿ ಆಹ್ವಾನಿಸಿದೆ. ಈ ಸಂಬ೦ಧ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ನೇಮಕ ಪ್ರಕ್ರಿಯೆ ಮುಕ್ತಾಯವಾಗಿದೆ.
ಇದೀಗ ಹಾಸ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 1,112 ಹುದ್ದೆಗಳ ಭರ್ತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಾದ ಅರ್ಹ ಮಹಿಳೆಯರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.
ಹಾಸನ ಜಿಲ್ಲೆ ಅಂಗನವಾಡಿ ನೇಮಕಾತಿ
ಹಾಸನ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು 168 ಮತ್ತು ಸಹಾಯಕಿಯರ 566 ಹುದ್ದೆಗಳು ಸೇರಿ ಒಟ್ಟು 734 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಅರ್ಹರು ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 04-09-2024ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ದಾವಣಗೆರೆ ಜಿಲ್ಲೆ ಅಂಗನವಾಡಿ ನೇಮಕಾತಿ
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 39 ಅಂಗನವಾಡಿ ಕಾರ್ಯಕರ್ತೆಯರು ಮತ್ತು 198 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು 06-09-2024ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಬಳ್ಳಾರಿ ಜಿಲ್ಲೆ ಅಂಗನವಾಡಿ ನೇಮಕಾತಿ
ಬಳ್ಳಾರಿ ಜಿಲ್ಲೆಯಲ್ಲಿ 22 ಅಂಗನವಾಡಿ ಕಾರ್ಯಕರ್ತೆಯರು ಮತ್ತು 119 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಮಹಿಳೆಯರು 10-09-2024ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಯೋಮಿತಿ, ವೇತನದ ವಿವರ
ಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋ ಸಡಿಕೆ ಇದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಾನುಸಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವ ಧನ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ ಏನಿರಬೇಕು?
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಪಿಯುಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಮಹಿಳೆಯರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಿರ್ಣರಾಗಿರಬೇಕು. ಮೆರಿಟ್ ಪಟ್ಟಿಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ಅರ್ಹ ಮಹಿಳಾ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮಹಿಳಾ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸರಿಯಾದ ಇ ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ. ಗುರುತಿನ ಚೀಟಿ, ವಿದ್ಯಾರ್ಹತೆ, ವಯಸ್ಸು, ಸ್ವವಿವರ ಇನ್ನಿತರ ಅಗತ್ಯ ಮಾಹಿತಿಗಳಿಗೆ ಸಂಬAಧಿಸಿದAತೆ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿರಬೇಕು.
ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸುವ ವೇಳೆ ಅಪ್‌ಲೋಡ್ ಮಾಡಬೇಕು. ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದು.