Anganwadi Huddegala Nemakti 2024 : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (WCD Karnataka) ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ (Anganwadi Recruitment 2024) 10ನೇ ತರಗತಿ ಹಾಗೂ ಪಿಯುಸಿ ಪಾಸಾದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳ ವಿವಿಧ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಖಾಲಿ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು; ಇದೀಗ ವಿಜಯಪುರ (Vijayapura District Anganwadi Jobs) ಹಾಗೂ ಬಾಗಲಕೋಟೆ (Bagalkot District Anganwadi Jobs) ಜಿಲ್ಲೆಗಳ ಅಂಗವಾಡಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಅಂಗನವಾಡಿ ಹುದ್ದೆಗಳ ವಿವರ
ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ತಾಲ್ಲೂಕು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳ ನೇಮಕಾತಿ ನಡೆಯಲಿದ್ದು; ಜಿಲ್ಲಾವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ಬಾಗಲಕೋಟೆ ಜಿಲ್ಲೆ
ಅಂಗನವಾಡಿ ಕಾರ್ಯಕರ್ತೆ : 106
ಅಂಗನವಾಡಿ ಸಹಾಯಕಿ : 471
ಒಟ್ಟು ಖಾಲಿ ಹುದ್ದೆಗಳು : 577 - ವಿಜಯಪುರ ಜಿಲ್ಲೆ
ಅಂಗನವಾಡಿ ಕಾರ್ಯಕರ್ತೆ : 42
ಅಂಗನವಾಡಿ ಸಹಾಯಕಿ : 105
ಒಟ್ಟು ಖಾಲಿ ಹುದ್ದೆಗಳು : 147
ವಿದ್ಯಾರ್ಹತೆ ಎಷ್ಟಿರಬೇಕು?
ಮೊದಲೇ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ PUC ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ SSLCಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಲಿತಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ SSLC ಶಿಕ್ಷಣ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷದೊಳಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ karnemakaone.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ವೇಳೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಅಪ್ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗೆ ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ
- ಬಾಗಲಕೋಟೆ ಜಿಲ್ಲೆ :
15-11-2024 - ವಿಜಯಪುರ ಜಿಲ್ಲೆ :
09-11-2024
ಅರ್ಜಿ ಸಲ್ಲಿಕೆ ಲಿಂಕ್ : https://karnemakaone.kar.nic.in/abcd/