Rain in Karnataka Fungal Cyclone effect : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಫಂಗಲ್’ ಚಂಡಮಾರುತ (Fungal Cyclone) ತಮಿಳುನಾಡಿಗೆ ಅಪ್ಪಳಿಸಿದ್ದು; ಅದರ ಪರಿಣಾಮ ಕರ್ನಾಟಕಕ್ಕೂ ತಟ್ಟಿದೆ. ತತ್ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಡಿಸೆಂಬರ್ 2 ಮತ್ತು 3ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಆರೆಂಜ್’ ಮತ್ತು ‘ಯಲ್ಲೋ’ ಅಲರ್ಟ್ ನೀಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಇದನ್ನೂ ಓದಿ: ಮನೆಮನೆಗೂ ಸೋಲಾರ್ ವಿದ್ಯುತ್ | ಬೆಸ್ಕಾಂ ಸೂಪರ್ ಸ್ಕೀಮ್ | ಕೂತಲ್ಲೇ ಗಳಿಸಿ ಭರ್ಜರಿ ಆದಾಯ Bescom Solar Rooftop Scheme
ಆರೆಂಜ್ ಅಲರ್ಟ್
- ಶಿವಮೊಗ್ಗ
- ಚಿಕ್ಕಮಗಳೂರು
- ಹಾಸನ
- ಕೊಡಗು
- ಮೈಸೂರು
- ಮಂಡ್ಯ
- ಚಾಮರಾಜನಗರ
ಯಲ್ಲೋ ಅಲರ್ಟ್
- ಉಡುಪಿ
- ದಕ್ಷಿಣ ಕನ್ನಡ
- ರಾಮನಗರ
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
- ಚಿಕ್ಕಬಳ್ಳಾಪುರ
- ಕೋಲಾರ
ಡಿಸೆ೦ಬರ್ 3ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಡಿಸೆಂಬರ್ 4ರ ಬೂದವಾರ ಮಂಡ್ಯ, ಮೈಸೂರು, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದ್ದು; ‘ಯಲ್ಲೋ’ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಹೈನುಗಾರಿಕೆಗೆ ₹10 ಲಕ್ಷದ ವರೆಗೂ ಮೇಲಾಧಾರ ಮುಕ್ತ ಸಾಲ ಸೌಲಭ್ಯ HDFC Bank Agriculture and Animal Husbandry Loan