Ration Card Correction Karnataka: ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್’ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಪಡಿತರ ಚೀಟಿದಾರರು ಮತ್ತೆ ತಿದ್ದುಪಡಿಗೆ (Ration Card Updates) ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಂಚಿಕೊ೦ಡಿದೆ. ರೇಷನ್ ಕಾರ್ಡ್’ದಾರರು ಈ ಅವಕಾಶ ಬಳಸಿಕೊಳ್ಳಲು ಕೋರಲಾಗಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ವರ್ಷಗಳಿಂದ ಅವಕಾಶ ಕಲ್ಪಿಸಿಲ್ಲ. ಕೊನೆ ಪಕ್ಷ ತಿದ್ದುಪಡಿಗಾದರೂ ಹೆಚ್ಚಿನ ಸಮಯಾವಕಾಶ ನೀಡುವಂತೆ ಜನರಿಂದ ಆಕ್ರೋಶ ವ್ಯಕ್ತವಾಗುತ್ತ ಬಂದಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಎಪಿಎಲ್ (APL Card), ಬಿಪಿಎಲ್ (BPL Card) ಹಾಗೂ ಅಂತ್ಯೋದಯ ಪಡಿತರ ಕಾರ್ಡ್ (Anthyodaya Card) ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ.
ಇದನ್ನೂ ಓದಿ: ಮಹಿಳೆಯರಿಗೆ ಉಜ್ವಲ ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ… Pradhan Mantri Ujjwala Yojana
ತಿದ್ದುಪಡಿ ಸಮಯ
ಇಂದಿನಿ೦ದ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಬೆಳಗ್ಗೆ 10 ಗಂಟೆಯಿ೦ದ ಸಂಜೆ 5 ಗಂಟೆಯ ವರೆಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಬೆಂಗಳೂರು ಒನ್ (Bangalore One), ಕರ್ನಾಟಕ ಒನ್ (karnataka One) ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ (Grama One Center) ಪಡಿತರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.
ಏನೆಲ್ಲ ತಿದ್ದುಪಡಿ ಮಾಡಬಹುದು?
- ರೇಷನ್ ಕಾರ್ಡ್ನಲ್ಲಿರುವ ಫಲಾನುಭವಿಗಳ ಮಾಹಿತಿ
- ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆ
- ಮೃತಪಟ್ಟ ಕುಟುಂಬ ಸದಸ್ಯರ ಹೆಸರು ತೆಗೆದು ಹಾಕುವುದು
- ಐದು ವರ್ಷದೊಳಗಿನ ಮಕ್ಕಳ ಹೆಸರು ಸೇರ್ಪಡೆ
- ಹೊಸದಾಗಿ ಮದುವೆಯಾಗಿ ಬಂದ ಸೊಸೆಯ ಹೆಸರು ಸೇರ್ಪಡೆ
- ನ್ಯಾಯಬೆಲೆ ಅಂಗಡಿ ಬದಲಾವಣೆ
- ಬೇರೆ ಜಿಲ್ಲೆಗೆ ವರ್ಗಾವಣೆ ಸೇರಿದಂತೆ ವಿವಿಧ ತಾಂತ್ರಿಕ ದೋಷಗಳ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ತಿದ್ದುಪಡಿಗೆ ಬೇಕಾದ ದಾಖಲೆಗಳೇನು?
- ಪ್ರಸ್ತುತ ಇರುವ ರೇಷನ್ ಕಾರ್ಡ್ ಪ್ರತಿ
- ಕುಟುಂಬ ಸದಸ್ಯರ ಆಧಾರ್ ಕಾರ್ಡ್
- ಹೊಸ ಹೆಸರು ಸೇರ್ಪಡೆಗೆ ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ
- ತೀರಿಹೋದ ಹಿರಿಯರ ಮರಣ ಪ್ರಮಾಣ ಪತ್ರ
- ಮೊಬೈಲ್ ನಂಬರ್
ತಿದ್ದುಪಡಿ ಎಲ್ಲಿ ಮಾಡಿಸಬೇಕು?
ರೇಷನ್ ಕಾರ್ಡ್ನಲ್ಲಿನ ತಿದ್ದುಪಡಿಗಾಗಿ ಗ್ರಾಮ ಒನ್, ಕಾಮನ್ ಸರ್ವೀಸ್ ಸೆಂಟರ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇಂದಿನಿAದ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ವರೆಗೆ ಅರ್ಜಿದಾರರು ತಿದ್ದುಪಡಿ ಕೇಂದ್ರಗಳಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಬಹುದಾಗಿದೆ.
ಇದನ್ನೂ ಓದಿ: 10ನೇ ತರಗತಿ ಪಾಸಾದವರಿಂದ ಹೋಮ್ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ Home Guard Recruitment Belagavi 2024