JobsNews

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ Karnataka Legislative Council Ministry Recruitment

WhatsApp Group Join Now
Telegram Group Join Now

Karnataka Legislative Council Ministry Recruitment : ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿನ (Karnataka Legislative Council Ministry) ವಿವಿಧ ವೃಂದಗಳ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಈ ಮೊದಲೇ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಒಂದಷ್ಟು ಮಾರ್ಪಾಡುಗಳೊಂದಿಗೆ ತಿದ್ದುಪಡಿ ಅಧಿಸೂಚನೆ (Amendment Notification) ಪ್ರಕಟಿಸಲಾಗಿದೆ. ಇದರಿಂದಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಕೂಡ ವಿಸ್ತರಿಸಲಾಗಿದೆ.

ಹುದ್ದೆಗಳ ವಿವರ

  • ಸೀನಿಯರ್ ಪ್ರೋಗ್ರಾಮರ್ : 02
  • ಜೂನಿಯರ್ ಪ್ರೋಗ್ರಾಮರ್ : 02
  • ಜೂನಿಯರ್ ಕನ್ಸಲ್ ಆಪರೇಟರ್ : 04
  • ಕಂಪ್ಯೂಟರ್ ಆಪರೇಟರ್ : 04
  • ಸಹಾಯಕರು : 03
  • ದತ್ತಾಂಶ ನಮೂದು ಸಹಾಯಕರು/ಬೆರಳಚ್ಚುಗಾರರ : 05
  • ಒಟ್ಟು ಹುದ್ದೆಗಳು : 28

ಇದನ್ನೂ ಓದಿ: ಮನೆಮನೆಗೂ ಸೋಲಾರ್ ವಿದ್ಯುತ್ | ಬೆಸ್ಕಾಂ ಸೂಪರ್ ಸ್ಕೀಮ್ | ಕೂತಲ್ಲೇ ಗಳಿಸಿ ಭರ್ಜರಿ ಆದಾಯ Bescom Solar Rooftop Scheme 

ವಿದ್ಯಾರ್ಹತೆ ವಿವರ

  • ಸೀನಿಯರ್ ಹಾಗೂ ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸಲ್ ಆಪರೇಟರ್ ಹುದ್ದೆಗೆ ಕಂಪ್ಯೂಟರ್ ಸೈನ್ಸ್, ಇನ್ಫಾರ್ಮೇಷನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಸೈನ್ಸ್’ನಲ್ಲಿ ಇಂಜಿನಿಯರಿ೦ಗ್ ಪದವಿ ಪಡೆದಿರಬೇಕು.
  • ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್’ನಲ್ಲಿ ಬಿಎಸ್‌ಸಿ ಪದವಿ ಹೊಂದಿರಬೇಕು.
  • ಸಹಾಯಕರು ಹಾಗೂ ಕಿರಿಯ ಸಹಾಯಕರ ಹುದ್ದೆಗಳಿಗೆ ಪದವೀಧರರಾಗಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ.
  • ದತ್ತಾಂಶ ನಮೂದು ಸಹಾಯಕರಾಗಲು ದ್ವಿತೀಯ ಪಿಯು ಉತ್ತೀರ್ಣರಾಗಿದ್ದು, ಕನ್ನಡ ಇಂಗ್ಲಿಷ್ ಹಿರಿಯ ಬೆರಳಚ್ಚುಗಾರ ಪರೀಕ್ಷೆಯಲ್ಲಿ ಪಾಸಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಇದನ್ನೂ ಓದಿ: ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಉದ್ಯೋಗಾವಕಾಶ IDBI Bank Recruitment 2024

ವಯೋಮಿತಿ ವಿವರ

ಈ ಮೊದಲು ಹೊರಡಿಸಾಗಿದ್ದ ಅಧಿಸೂಚನೆಯಲ್ಲಿ ಗರಿಷ್ಠ ವಯೋಮಿತಿಗೆ 2 ವರ್ಷ ಸಡಿಲಿಕೆ ನೀಡಲಾಗಿತ್ತು. ಆದರೆ ಇದೀಗ ಅದನ್ನು ಮೂರು ವರ್ಷಕ್ಕೆ ವಿಸ್ತರಿಸಲಾಗಿದೆ. ಆ ಪ್ರಕಾರ ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟರಿಗೆ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಟ ವಯೋಮಿತಿ ನೀಡಲಾಗಿದೆ.

ಅರ್ಜಿ ಶುಲ್ಕದ ವಿವರ

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟರಿಗೆ 500 ರೂ., ಅಂಗವಿಕಲರಿಗೆ 250 ರೂ., ಸಾಮಾನ್ಯ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ 750 ರೂ., ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಕುರಿತ ಇತರ ವಿವರವಾದ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದ್ದು; ಕೆಳಗೆ ನೀಡಿರುವ ಲಿಂಕ್ ಒತ್ತಿ ಅಧಿಸೂಚನೆ ಡೌನ್‌ಲೋಡ್ ಮಾಡಿಕೊಳ್ಳಿ. ಆಸಕ್ತ, ಅರ್ಹ ಅಭ್ಯರ್ಥಿಗಳು ಈ ಕೆಳಕಂಡ ಪರೀಕ್ಷಾ ಪ್ರಾಧಿಕಾರದ ಜಾಲತಾಣದ ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ:

https://kea.kar.nic.in
https://cetonline.karnataka.gov.in/kea

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03-01-2024

  • ನೇಮಕಾತಿ ಅಧಿಸೂಚನೆ : Download
  • ತಿದ್ದುಪಡಿ ಅಧಿಸೂಚನೆ : Download

ಇದನ್ನೂ ಓದಿ: 1ನೇ ತರಗತಿಯಿಂದ PUC, ಪದವಿ ವಿದ್ಯಾರ್ಥಿಗಳ ವರೆಗೆ HDFC ಬ್ಯಾಂಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 75,000 ವರೆಗೂ ಆರ್ಥಿಕ ನೆರವು HDFC Bank Parivartan ECSS Scholarship 2024

WhatsApp Group Join Now
Telegram Group Join Now

Related Posts