JobsNews

ಸುಪ್ರೀಂ ಕೋರ್ಟ್ 107 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅಪೂರ್ವ ಅವಕಾಶ Supreme Court Recruitment 2024

WhatsApp Group Join Now
Telegram Group Join Now

Supreme Court Recruitment 2024 : ಭಾರತದ ಸವೋಚ್ಛ ನ್ಯಾಯಾಲಯ ಸುಪ್ರೀಂ ಕೋರ್ಟ್’ನ (Supreme Court of India) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು; ಪದವೀಧರರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ‘ಕೋರ್ಟ್ ಮಾಸ್ಟರ್’ ಸೇರಿದಂತೆ 100ಕ್ಕೂ ಹೆಚ್ಚು ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ.

ಹುದ್ದೆಗಳ ವಿವರ

  • ಕೋರ್ಟ್ ಮಾಸ್ಟರ್ : 31
  • ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ : 33
  • ಪರ್ಸನಲ್ ಅಸಿಸ್ಟೆಂಟ್ : 43
  • ಒಟ್ಟು ಹುದ್ದೆಗಳು : 107

ಇದನ್ನೂ ಓದಿ: ನಿಮ್ಮ ಮನೆಗೆ ಸೋಲಾರ್ ಕರೆಂಟ್ ಪಡೆಯಲು ಕೇವಲ ಐದೇ ನಿಮಿಷದಲ್ಲಿ ಅರ್ಜಿ ಹಾಕಿ | ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್… PM Surya Ghar Scheme

ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು?

ಕಾನೂನು ಪದವಿ ಪಡೆದಿದ್ದು, ಕನಿಷ್ಠ ಐದು ವರ್ಷ ಪ್ರೆöÊವೇಟ್ ಸೆಕ್ರೆಟರಿ/ ಸೀನಿಯರ್ ಪಿಎ/ಸೀನಿಯರ್ ಸ್ಟೆನೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಸರಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವುಳ್ಳವರಿಂದ ಅರ್ಜಿಗಳನ್ನು ನಿರೀಕ್ಷಿಸಲಾಗಿದೆ. ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

Supreme Court Recruitment 2024

ವಯೋಮಿತಿ ಎಷ್ಟಿರಬೇಕು?

ಕೋರ್ಟ್ ಮಾಸ್ಟರ್ ಹುದ್ದೆಗಳಿಗೆ 30ರಿಂದ 45 ವರ್ಷದೊಳಗಿನವರು, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ Karnataka Legislative Council Ministry Recruitment

ಅರ್ಜಿ ಶುಲ್ಕವೆಷ್ಟು?

ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ ಅಭ್ಯರ್ಥಿಗಳು, ವಿಶೇಷಚೇತನರು ಮತ್ತು ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬದವರು ಅರ್ಜಿ ಸಲ್ಲಿಸುವುದಾದರೆ 250 ರೂ. ಹಾಗೂ ಉಳಿದ ವರ್ಗದವರಿಗೆ 1,000 ರೂ. ಶುಲ್ಕ ನಿಗದಿಪಡಿಸಲಾಗಿದೆ.

ನೇಮಕ ಹೇಗೆ?

ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ರಾಜ್ಯದಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ. ಪ್ರತಿ ಹುದ್ದೆಗಳಿಗೂ ಪ್ರತ್ಯೇಕ ಪಠ್ಯಕ್ರಮವನ್ನು ಆಧರಿಸಿ ಪರೀಕ್ಷೆ ನಡೆಯಲಿದೆ. ವಸ್ತುನಿಷ್ಠ ಮಾದರಿ ಬಹು ಆಯ್ಕೆಯ 100 ಪ್ರಶ್ನೆಗಳಿಗೆ ಅಭ್ಯರ್ಥಿಗಳು ಉತ್ತರಿಸಬೇಕಾಗುತ್ತದೆ.

ಇದನ್ನೂ ಓದಿ: 2,400 ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ ನೇಮಕಾತಿ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಭರ್ಜರಿ ಅವಕಾಶ KSRP IRB Constable Recruitment 2025

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-12-2024

  • ಅಧಿಸೂಚನೆ : Download
  • ಅರ್ಜಿ ಸಲ್ಲಿಕೆ ಲಿಂಕ್ : Apply Now
  • ಅಧಿಕೃತ ವೆಬ್‌ಸೈಟ್ : www.sci.gov.in

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ Karnataka Bank Customer Service Associate Clerk Recruitment 2024

WhatsApp Group Join Now
Telegram Group Join Now

Related Posts