News

ಬಂಗಾಳಕೊಲ್ಲಿಯಲ್ಲಿ ಮತ್ತೆರಡು ವಾಯುಭಾರ ಕುಸಿತ | ರಾಜ್ಯದಲ್ಲಿ ಡಿಸೆಂಬರ್ 18ರ ವರೆಗೂ ಮಳೆ Air Pressure Drop Rain Forecast

WhatsApp Group Join Now
Telegram Group Join Now

Air Pressure Drop Rain Forecast : ಬಂಗಾಳಕೊಲ್ಲಿಯಲ್ಲಿ (Bay of Bengal) ಮತ್ತೆರಡು ವಾಯುವ ಭಾರ ಕುಸಿತ (air pressure drop) ಸಂಭವಿಸಲಿದ್ದು; ಡಿಸೆಂಬರ್ 18ರ ವರೆಗೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Rain Forecast) ನೀಡಿದೆ. ಮುಂದಿನ ಹತ್ತು ದಿನಗಳಲ್ಲಿ ನಡೆಯಲಿರುವ ಈ ಎರಡೂ ವಾಯುಭಾರ ಕುಸಿತಗಳ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಈಚೆಗಷ್ಟೇ ಸಂಭವಿಸಿದ್ದ ‘ಫೆಂಗಲ್’ (Cyclone Fengal) ಚಂಡಮಾರುತದ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಪಾರ ಹಾನಿಯನ್ನುಂಟು ಮಾಡಿತ್ತು. ಈ ನಷ್ಟದಿಂದ ಸುಧಾರಿಸಿಕೊಳ್ಳುವ ಮೊದಲೇ ಪುನಃ ಮತ್ತೆರಡು ವಾಯುಭಾರ ಕುಸಿತ ಸೃಷ್ಟಿಯಾಗುವ ಲಕ್ಷಣ ಬಂಗಾಳಕೊಲ್ಲಿ ಕಂಡು ಬರುತ್ತಿದೆ.

Air Pressure Drop Rain Forecast

ಇದನ್ನೂ ಓದಿ: ನಿಮ್ಮ ಮನೆಗೆ ಸೋಲಾರ್ ಕರೆಂಟ್ ಪಡೆಯಲು ಕೇವಲ ಐದೇ ನಿಮಿಷದಲ್ಲಿ ಅರ್ಜಿ ಹಾಕಿ | ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್… PM Surya Ghar Scheme

ಮೊದಲನೇ ವಾಯುಭಾರ ಕುಸಿತ ಒಂದೆರಡು ದಿನದಲ್ಲಿ ತೀವ್ರ ಸ್ವರೂಪ ಪಡೆದು ಕಾಣಿಸಿಕೊಳ್ಳಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14-15ಕ್ಕೆ ಮಳೆಯಾಗಲಿದೆ.

ಎರಡನೇ ವಾಯುಭಾರ ಕುಸಿತ ಡಿಸೆಂಬರ್ 16ರ ಬಳಿಕ ರೂಪುಗೊಳ್ಳಲಿದ್ದು, ಇದರಿಂದ ಡಿಸೆಂಬರ್ 17-18ಕ್ಕೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಬಹುತೇಕ ಬೆಳೆಗಳು ಕಟಾವಿಗೆ ಬಂದಿದ್ದು, ರೈತರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ಹವಾಮಾನ ತಜ್ಞಶ್ರೀನಿವಾಸ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಉಜ್ವಲ ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ… Pradhan Mantri Ujjwala Yojana

WhatsApp Group Join Now
Telegram Group Join Now

Related Posts