552 ಅಂಗನವಾಡಿ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದ ಮಹಿಳೆಯರಿಂದ ಅರ್ಜಿ ಆಹ್ವಾನ Anganwadi Workers and Helpers New Recruitment 2024

WhatsApp
Telegram
Facebook
Twitter
LinkedIn

Anganwadi Workers and Helpers New Recruitment 2024 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of women and child development) ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ (Anganwadi Worker), ಮಿನಿ ಕಾರ್ಯಕರ್ತೆ (Mini Anganwadi Worker) ಹಾಗೂ ಸಹಾಯಕಿ (Anganwadi Helper) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸುತ್ತಿದೆ.

ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿದಿದ್ದು; ಇದೀಗ ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆದಿದೆ. ಈ ಜಿಲ್ಲೆಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಕನಿಷ್ಠ 19 ವರ್ಷದೊಳಗಿನ ಮಹಿಳಾ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಹುದ್ದೆಗಳ ವಿವರ

ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿ ನಡೆಯಲಿದ್ದು; ಜಿಲ್ಲಾವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಚಿಕ್ಕಮಗಳೂರು : 267
  • ಚಿಕ್ಕಬಳ್ಳಾಪುರ : 285
  • ಒಟ್ಟು ಹುದ್ದೆಗಳು : 552
ವಿದ್ಯಾರ್ಹತೆ ಎಷ್ಟಿರಬೇಕು?

ಮೊದಲೇ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಲಿತಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ, ವೇತನ ವಿವರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷದೊಳಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ಗೌರವ ಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ https://karnemakaone.kar.nic.in/abcd/ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ವೇಳೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಅಪಲೋಡ್ ಮಾಡಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗೆ ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ
  • ಚಿಕ್ಕಮಗಳೂರು ಜಿಲ್ಲೆ :
    12-10-2024
  • ಚಿಕ್ಕಬಳ್ಳಾಪುರ ಜಿಲ್ಲೆ :
    19-10-2024
ಅರ್ಜಿ ಸಲ್ಲಿಕೆ ಲಿಂಕ್ : Apply ಮಾಡಿ

Samagra Krushi   About Us
Samagra Krushi samagrakrushi.com - Comprehensive Kannada website for govt scheme, education, jobs information Read More
For Feedback - [email protected]

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon