Education

Alvas free education scheme admission application 2025 : ಉಚಿತ ಶಿಕ್ಷಣಕ್ಕಾಗಿ ಆಳ್ವಾಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ | ವಸತಿ, ಊಟೋಪಚಾರ ಸಂಪೂರ್ಣ ಉಚಿತ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

Alvas free education scheme admission application 2025 : ಉಚಿತ ಶಿಕ್ಷಣಕ್ಕಾಗಿ ಆಳ್ವಾಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ | ವಸತಿ, ಊಟೋಪಚಾರ ಸಂಪೂರ್ಣ ಉಚಿತ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ...

ಕರ್ನಾಟಕ ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಸೌಲಭ್ಯದ ಅಡಿಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  

ಉಚಿತ ಶಿಕ್ಷಣ ಸೌಲಭ್ಯ ಪಡೆಯಲು ಅರ್ಹತೆ (Alvas free education scheme eligibility)

ಆಳ್ವಾಸ್ ಶಿಕ್ಷಣ ಸಂಸ್ಥೆಯು ‘ಉಚಿತ ಶಿಕ್ಷಣ ಸೌಲಭ್ಯ’ದ ಅಡಿಯಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ 5ನೇ, 6ನೇ, 7ನೇ ಮತ್ತು 8ನೇ ತರಗತಿಯಲ್ಲಿ ಶಿಕ್ಷಣ ಪಡೆಯುತ್ತಿರಬೇಕು. ಅಂದರೆ 2025-26ನೇ ಶೈಕ್ಷಣಿಕ ವರ್ಷದ 6ನೇ, 7ನೇ, 8ನೇ ಮತ್ತು 9ನೇ ತರಗತಿಯಲ್ಲಿ ಶಿಕ್ಷಣ ಪಡೆಯಲು ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು

* SATS - ID

* ಆಧಾರ್ ಕಾರ್ಡ್

* ಇತ್ತೀಚಿನ ಭಾವಚಿತ್ರ

* ಮೊಬೈಲ್ ನಂಬರ್

* ಇಮೇಲ್

* ಇತರೆ ಅಗತ್ಯ ದಾಖಲೆಗಳು


ಆಯ್ಕೆ ಪ್ರಕ್ರಿಯೆ ಹೇಗೆ? (Selection procedure)

Alvas free education scheme ಆಳ್ವಾಸ್ ಉಚಿತ ಶಿಕ್ಷಣ ಸೌಲಭ್ಯದ ಪಡೆಯಲು ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಮೂರು ಹಂತದಲ್ಲಿ ಪರೀಕ್ಷೆ ನಡೆಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಮೊದಲನೇ ಹಂತದಲ್ಲಿ ಓ.ಎಂ.ಆರ್ ಮಾದರಿಯಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಇದರಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2ನೇ ಹಂತದಲ್ಲಿ ಬರವಣಿಗೆ ಆಧಾರಿತ ಚಟುವಟಿಕೆಗಳನ್ನು ನಡೆಸಲಾಗುವುದು.

2ನೇ ಹಂತದಲ್ಲಿ 6 ಮತ್ತು 7ನೇ ತರಗತಿ ಪ್ರವೇಶಾತಿಗೆ 120 ಅಂಕ ಹಾಗೂ 8 ಮತ್ತು 9ನೇ ತರಗತಿ ಪ್ರವೇಶಾತಿಗೆ 150 ಅಂಕಗಳ ಆಧಾರದಲ್ಲಿ ಚಟುವಟಿಕೆಗಳನ್ನು ನಡೆಸಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ಮರುದಿನವೇ ನೇರ ಸಂದರ್ಶನ ನಡೆಸಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.

ಆಯ್ಕೆ ಪರೀಕ್ಷೆಯ ನಡೆಸುವ ಸ್ಥಳ : ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ಆವರಣದಲ್ಲಿ ಆಯ್ಕೆ ಪರೀಕ್ಷೆ ನಡೆಸಲಾಗುತ್ತದೆ. 

ಹೇಗೆ ಅರ್ಜಿ ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ನಾವು ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ನಿಖರ ಮಾಹಿತಿಗಳನ್ನು ಭರ್ತಿ ಮಾಡಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅರ್ಜಿ ಫಾರ್ಮ್’ನ (Application form) ಎರಡು ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬೇಕು. ಒಂದು ಪ್ರತಿಯನ್ನು ನಿಮ್ಮ ಹತ್ತಿರ ಇಟ್ಟುಕೊಂಡು ಇನ್ನೊಂದು ಪ್ರತಿಯನ್ನು ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಕಳುಹಿಸಿಕೊಡಬೇಕು.

ವಿಳಾಸ : ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ), ಮೂಡುಬಿದಿರೆ, ದಕ್ಷಿಣ ಕನ್ನಡ -574227

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 15-01-2025

* ಪ್ರವೇಶಾತಿ ಪರೀಕ್ಷೆ ನಡೆಸುವ ದಿನಾಂಕ : 02-03-2025


ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Apply ಮಾಡಿ
ಹೆಚ್ಚಿನ ಮಾಹಿತಿಗೆ ಸಹಾಯವಾಣಿ : 7026530137 / 7026530263 / 9071705131