ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.
ಚಾಮರಾಜನಗರ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನಿಷ್ಠ 19 ವರ್ಷದವರಾಗಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.
ಇದನ್ನೂ ಓದಿ: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಪಡೆಯುವ ಸರಳ ವಿಧಾನ | ಸರಳ ಬಡ್ಡಿಯಲ್ಲಿ ಗೃಹಸಾಲ ನೀಡುವ ಬ್ಯಾಂಕ್‌ಗಳ ಪಟ್ಟಿ
ಹುದ್ದೆಗಳ ವಿವರ
* ಅಂಗನವಾಡಿ ಕಾರ್ಯಕರ್ತೆ : 77
* ಅಂಗನವಾಡಿ ಸಹಾಯಕಿ : 142
* ಒಟ್ಟು ಹುದ್ದೆಗಳು : 219
ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆ
ಮೊದಲೇ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಹೊಂದಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಜೆ ಅನ್ವಯವಾಗಲಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡ೦ತೆ ಪಡೆದ ಒಟ್ಟು ಅಂಕ ಮತ್ತು ಮೆರಿಟ್ ಪಟ್ಟಿ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು karnemakaone.kar.nic.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಸೀಲ್ದಾರ್/ ಉಪ ತಹಸೀಲ್ದಾರ್‌ರಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಿಬೇಕು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-02-2025
ಅಧಿಸೂಚನೆ : Download
ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : ಇಲ್ಲಿ ಒತ್ತಿ
ಇದನ್ನೂ ಓದಿ: ಹಸು, ಎಮ್ಮೆ ಶೆಡ್ ನಿರ್ಮಾಣಕ್ಕೆ ₹57,000 ಆರ್ಥಿಕ ನೆರವು | ಹೀಗೆ ಅರ್ಜಿ ಸಲ್ಲಿಸಿ... Cow shed Mgnrega subsidy