ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನಿಷ್ಠ 19 ವರ್ಷದವರಾಗಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.
ಇದನ್ನೂ ಓದಿ: 8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಿರಿ...
ಹುದ್ದೆಗಳ ವಿವರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಭಟ್ಕಳ, ದಾಂಡೇಲಿ, ಹೊನ್ನಾವರ, ಕಾರವಾರ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ, ಜೊಯಿಡಾ, ಯಲ್ಲಾಪುರ, ಹಳಿಯಾಳ ತಾಲ್ಲೂಕುಗಳಲ್ಲಿ ಖಾಲಿ ಇರುವ 376 ಅಂಗನವಾಡಿ ಸಹಾಯಕಿಯರು ಹಾಗೂ 115 ಅಂಗನವಾಡಿ ಕಾರ್ಯಕರ್ತೆಯರು ಸೇರಿ ಒಟ್ಟು 491 ಹುದ್ದೆಗಳ ನೇಮಕಾತಿ ನಡೆಯಲಿದೆ.
ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆ: ಮೊದಲೇ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಹೊಂದಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಜೆ ಅನ್ವಯವಾಗಲಿದೆ.
ಇದನ್ನೂ ಓದಿ: ಸಣ್ಣ ಉದ್ಯಮ ಆರಂಭಿಸಲು ಸಿಗುತ್ತೆ ₹20 ಲಕ್ಷ ಮುದ್ರಾ ತರುಣ್ ಲೋನ್ | ಈಗಲೇ ಅರ್ಜಿ ಸಲ್ಲಿಸಿ...
ಆಯ್ಕೆ ಪ್ರಕ್ರಿಯೆ ಹೇಗೆ?: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡAತೆ ಪಡೆದ ಒಟ್ಟು ಅಂಕ ಮತ್ತು ಮೆರಿಟ್ ಪಟ್ಟಿ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು karnemakaone.kar.nic.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಸೀಲ್ದಾರ್/ಉಪ ತಹಸೀಲ್ದಾರ್‌ರಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಿಬೇಕು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-04-2025
ಅಧಿಸೂಚನೆ : Download
ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : Click here
ಇದನ್ನೂ ಓದಿ: ಗ್ರಾಮ ಪಂಚಾಯತಿ ಸಮಸ್ಯೆಗಳಿಗೆ ವಾಟ್ಸಾಪ್’ನಲ್ಲೇ ಪರಿಹಾರ ಪಡೆಯಿರಿ | ಈ ವಾಟ್ಸಾಪ್ ನಂಬರ್‌ಗೆ ಮೆಸೇಜ್ ಮಾಡಿದರೆ ಪರಿಹಾರ ಗ್ಯಾರಂಟಿ