ದೇಶಾದ್ಯಂತ 4,500ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ಕ್ರೆಡಿಟ್ ಆಫೀಸರ್ (Credit Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 1,000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು; ವರ್ಗವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ:
ಎಸ್ಸಿ ಅಭ್ಯರ್ಥಿಗಳಿಗೆ 150 ಹುದ್ದೆಗಳು, ಎಸ್ಪಿ ಅಭ್ಯರ್ಥಿಗಳಿಗೆ 75 ಹುದ್ದೆಗಳು, ಇತರ ವರ್ಗದ ಅಭ್ಯರ್ಥಿಗಳಿಗೆ 270 ಹುದ್ದೆಗಳು, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 100 ಹುದ್ದೆಗಳು ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 405 ಹುದ್ದೆಗಳಿದ್ದು; ಒಟ್ಟು ಹುದ್ದೆಗಳು 1,000 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಇದನ್ನೂ ಓದಿ: ಕರ್ನಾಟಕ ವಿದ್ಯುತ್ ಇಲಾಖೆ ನೇಮಕಾತಿ | 10ನೇ ತರಗತಿ ಪಾಸಾದವರಿಗೆ 3,000 ಲೈನ್‌ಮ್ಯಾನ್ ಹುದ್ದೆಗಳು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಕನಿಷ್ಠ 60 ಅಂಕದೊ೦ದಿಗೆ (ಎಸ್ಸಿ/ಎಸ್ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳು ಶೇ.55 ಅಂಕ) ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯು ಹುದ್ದೆಗೆ ನೋಂದಾಯಿಸಿಕೊಳ್ಳುವ ದಿನದಂದು ತಾನು ಪದವೀಧರನಾಗಿದ್ದೇನೆ ಎಂದು ದೃಢೀಕರಿಸುವ ಮಾನ್ಯ ಅಂಕಪಟ್ಟಿ / ಪದವಿ ಪ್ರಮಾಣಪತ್ರವನ್ನು ಹೊಂದಿರಬೇಕು ಮತ್ತು ಆನ್‌ಲೈನ್‌ನಲ್ಲಿ ನೋಂದಾಯಿಸುವಾಗ ಪದವಿಯಲ್ಲಿ ಪಡೆದ ಅಂಕಗಳ ಶೇಕಡಾವಾರು ಪ್ರಮಾಣವನ್ನು ಸೂಚಿಸಬೇಕು.
ವಯೋಮಿತಿ: ಅಭ್ಯರ್ಥಿಗಳು 2024ರ ನವೆಂಬರ್ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 20 ವರ್ಷದಿಂದ ಗರಿಷ್ಠ 30 ವರ್ಷದೊಳಗಿರಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಇದನ್ನೂ ಓದಿ: ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ 503 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ ಪಾಸಾಗಿದ್ರೆ ಅರ್ಜಿ ಹಾಕಿ...
ವೇತನ ಶ್ರೇಣಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ 48,480 - 85,920 ರೂ. ವೇತನ ಇರಲಿದೆ. ಜೊತೆಗೆ ಇತರ ಸವಲತ್ತುಗಳು ಅನ್ವಯವಾಗಲಿವೆ.
ಆಯ್ಕೆ ಪ್ರಕ್ರಿಯೆ ಹೇಗೆ?: ಆನ್‌ಲೈನ್ ಮೂಲಕ 150 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ವೈಯಕ್ತಿಕ ಸಂದರ್ಶನವನ್ನು 50 ಅಂಕಗಳಿಗೆ ನಡೆಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ದಾಖಲೆ ಪರಿಶೀಲನೆ ಇರಲಿದೆ.
ಆಯ್ಕೆಯಾಗುವ ಅಭ್ಯರ್ಥಿಗಳನ್ನು ಭಾರತದ ಯಾವುದೇ ಶಾಖೆ ಅಥವಾ ಆಡಳಿತ ಕಚೇರಿಗೆ ನಿಯೋಜಿಸಲಾಗುವುದು. ಬ್ಯಾಂಕಿನ ಅವಶ್ಯಕತೆಗೆ ಅನುಗುಣವಾಗಿ ಸ್ಥಳ ಬದಲಾಯಿಸಬಹುದು ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳು ಇರಲಿವೆ.
ಇದನ್ನೂ ಓದಿ: ಪದವೀಧರರಿಗೆ 50,00, ಡಿಪ್ಲೊಮಾದವರಿಗೆ 30,000 ರೂ. ಧನಸಹಾಯ | ‘ಯಶಸ್ವಿ’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ : ಮಹಿಳೆ, ಎಸ್ಸಿ/ಎಸ್ಟಿ, ಅಂಗವಿಕಲ ವರ್ಗದ ಅಭ್ಯರ್ಥಿಗಳು 150 ರೂ., ಇತರ ಎಲ್ಲ ವರ್ಗದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಕೆ ಹೇಗೆ?: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು centralbankofindia.co.inಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ.
ಅರ್ಜಿ ಸಲ್ಲಿಕೆ ಕೊನೇ ದಿನಾಂಕ : 20-02-2025
ಅಧಿಸೂಚನೆ : Download
ಅರ್ಜಿ ಲಿಂಕ್ : Apply Now
ಇದನ್ನೂ ಓದಿ: ಸೂರ್ಯ ಘರ್ ಯೋಜನೆಯಡಿ ರಾಜ್ಯದಲ್ಲಿ 4,407 ಮನೆಗಳಿಗೆ ಸಹಾಯಧನ