ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆ ಸಿಹಿಸುದ್ದಿ ನೀಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ರಾಜ್ಯದ ಎಲ್ಲ ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ವಿದ್ಯಾರ್ಥಿಯ ವಾಸ ಸ್ಥಳದಿಂದ ಶಾಲೆ, ಕಾಲೇಜಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ವಿದ್ಯಾರ್ಥಿಗಳಿಗೂ ಉಚಿತ ಬಸ್: ಈಗಾಗಲೇ ರಾಜ್ಯ ಸರ್ಕಾರ ‘ಶಕ್ತಿ’ ಯೋಜನೆ ಹೆಸರಿನಲ್ಲಿ ರಾಜ್ಯಾದ್ಯಂತ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಎಲ್ಲಾ ವರ್ಗದ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳ ನಿಮಿತ್ತ ಉಚಿತ ಪ್ರಯಾಣದ ಅನುಕೂಲ ನೀಡಿದೆ.
ಇದನ್ನೂ ಓದಿ: ಕೊನೆಗೂ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಘೋಷಣೆ | ಒಪ್ಪಿಗೆ ಸೂಚಿಸಿದ ರಾಜ್ಯ ಸರ್ಕಾರ
2024-25ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ಮಾರ್ಚ್ 1ರಿಂದ ಮಾರ್ಚ್ 20ರ ವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ರಾಜ್ಯ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದೆ.
ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಲು ಅವಕಾಶ : ವಿದ್ಯಾರ್ಥಿಗಳ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಇದರ ಜೊತೆಗೆ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆ ದಿನಾಂಕಗಳAದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳ ಸುತ್ತುವಳಿ ಬಸ್‌ಗಳನ್ನು ಕಾರ್ಯಾಚರu ಮಾಡಲಾಗುವುದು. ಅಲ್ಲದೆ ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ: ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ...