ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿ ಇದ್ದುದ್ದರಿಂದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಸಂದಾಯವಾಗಲು ವಿಳಂಬವಾಗಿದೆ. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಈತನಕ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.
ಇದನ್ನೂ ಓದಿ: ವಿಶೇಷ ವೈಯಕ್ತಿಕ ಸಾಲ ಯೋಜನೆಗಳು | ಯಾವುದಕ್ಕೆಲ್ಲ ಸಾಲ ಸಿಗುತ್ತೆ ಗೊತ್ತಾ?
ಇನ್ನೊಂದು ವಾರದಲ್ಲಿ ತಾಲೂಕು ಪಂಚಾಯಿತಿ ಮುಖಾಂತರ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಇದೇ ಸಮಯದಲ್ಲಿ ಪ್ರತಿಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೆ ಏನೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡೇ ನಮ್ಮ ಯೋಜನೆಗಳನ್ನು ಕಾಪಿ ಮಾಡಿಕೊಂಡು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಳರ್ ಅವರು ಹೇಳಿದರು.
ಇದನ್ನೂ ಓದಿ: 8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಿರಿ...