Jobs

Home Guard Recruitment-ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ಹೋಮ್‌ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Home Guard Recruitment-ಎಸ್‌ಎಸ್‌ಎಲ್‌ಸಿ ಪಾಸಾದವರಿಂದ  ಹೋಮ್‌ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಹೋಮ್ ಗಾರ್ಡ್ (Home Guard) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಛೆಯುಳ್ಳ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ನೇಮಕಾತಿ ಕುರಿತ ಸಂಕ್ಷಿಪ್ತ ವಿವರ : ಗೃಹರಕ್ಷಕ ದಳ, ಹಾವೇರಿ ಜಿಲ್ಲೆಯ ಗೃಹರಕ್ಷಕ ಹಾಗೂ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಆಫ್‌ಲೈನ್ ಮುಖಾಂತರ ಅರ್ಜಿ ಕರೆಯಲಾಗಿದೆ. ಹಾವೇರಿ ಜಿಲ್ಲೆಯ ಹಾವೇರಿ, ರಾಣಿಬೆನ್ನೂರು, ಹಿರೇಕೆರೂರು, ಶಿಗ್ಗಾಂವಿ, ಬ್ಯಾಡಗಿ, ಹಾನಗಲ್ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಉದ್ಯೋಗ ನಿರ್ವಹಿಸಲು ಬಯಸುವವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.


ಇದನ್ನೂ ಓದಿ: ವಿಶೇಷ ವೈಯಕ್ತಿಕ ಸಾಲ ಯೋಜನೆಗಳು | ಯಾವುದಕ್ಕೆಲ್ಲ ಸಾಲ ಸಿಗುತ್ತೆ ಗೊತ್ತಾ? 


ವಯೋಮಿತಿ ಮತ್ತು ವಿದ್ಯಾರ್ಹತೆ : ಗೃಹರಕ್ಷಕ ಹುದ್ದೆಗಳಿಗೆ 18 ರಿಂದ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು; ಈ ವಯಸ್ಸಿನೊಳಗಿರುವ 10ನೇ ತರಗತಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಿರುದ್ಧ ಯಾವುದೇ ಪೊಲೀಸ್ ಪ್ರಕರಣ ಇರಬಾರದು ಮತ್ತು ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷ-ಸಂಘ ಸಂಸ್ಥೆಗಳ ಸದಸ್ಯರು, ಕಾರ್ಯಕರ್ತರು ಆಗಿರಬಾರದು.


ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ವಿಶೇಷ ವೃತ್ತಿ ಕೌಶಲ್ಯ ಹೊಂದಿದವರಿಗೆ ಪ್ರಮುಖ ಆದ್ಯತೆ ನೀಡಲಾಗುವುದು. ನೆರೆ ರಕ್ಷಣೆ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ, ರೈಫಲ್ ಟ್ರೈನಿಂಗ್, ಸಂಚಾರ ನಿಯಂತ್ರಣ, ಶಸ್ತ್ರಾಸ್ತ್ರ ತರಬೇತಿ ಮೊದಲಾದ ತರಬೇತಿ ನೀಡಿ ತುರ್ತು ಸಂದರ್ಭಗಳಲ್ಲಿ ಅವರನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ.


ಇದನ್ನೂ ಓದಿ: ಮನೆಗೆ ಉಚಿತ ಸೋಲಾರ್ ಕರೆಂಟ್ ಪಡೆಯಲು ಈಗಲೇ ಅರ್ಜಿ ಹಾಕಿ | ಕರ್ನಾಟಕದಲ್ಲಿ 5,14 ಲಕ್ಷ ಕುಟುಂಬಗಳು ನೋಂದಣಿ


ಅರ್ಜಿ ಸಲ್ಲಿಕೆ ಹೇಗೆ?: ಆಸಕ್ತ ಅಭ್ಯರ್ಥಿಗಳು ಹಾವೇರಿ ಜಿಲ್ಲಾ ಗೃಹರಕ್ಷಕದಳದ ಕಚೇರಿ ವೇಳೆಯಲ್ಲಿ ಉಚಿತವಾಗಿ ಅರ್ಜಿ ನಮೂನೆ ಪಡೆದುಕೊಳ್ಳಬಹುದು. ಮಾಹಿತಿಗಾಗಿ ಕಮಾಂಡೆ೦ಟ್, ಜಿಲ್ಲಾ ಗೃಹರಕ್ಷಕದಳದ ಕಾರ್ಯಾಲಯ, ವಿದ್ಯಾನಗರ, ಪಿ.ಬಿ. ರಸ್ತೆ-581110, ಹೆಚ್ಚಿನ ಮಾಹಿತಿಗೆ ದೂರವಾಣಿ: 08375-236160 ಸಂಪರ್ಕಿಸಲು ಕೋರಲಾಗಿದೆ.


ಇದನ್ನೂ ಓದಿ: ಸೋಲಾರ್ ಕರೆಂಟ್ ಕೃಷಿ | ಬೆಸ್ಕಾಂ ಸೋಲಾರ್ ಸ್ಕೀಮ್ | ನಿಮ್ಮ ಮನೆ ಮೇಲೆಯೇ ವಿದ್ಯುತ್ ಉತ್ಪಾದಿಸಿ ಮಾರಾಟ ಮಾಡಿ...