Schemes

Horticulture Training-ರೈತರಿಗೆ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ | ತರಬೇತಿ ಜೊತೆಗೆ ₹17,500 ಶಿಷ್ಯವೇತನ

Horticulture Training-ರೈತರಿಗೆ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ | ತರಬೇತಿ ಜೊತೆಗೆ ₹17,500 ಶಿಷ್ಯವೇತನ

ರಾಜ್ಯದ ವಿವಿಧ 11 ಜಿಲ್ಲೆಗಳಲ್ಲಿ ಇರುವ ತೋಟಗಾರಿಕೆ ಇಲಾಖೆಗಳಲ್ಲಿ (Department of Horticulture) 2025-26ನೇ ಸಾಲಿಗೆ ತೋಟಗಾರಿಕೆ ಕ್ಷೇತ್ರದ ಸಮಗ್ರ ಜ್ಞಾನವನ್ನು ಮತ್ತು ವೈಜ್ಞಾನಿಕ ಕ್ರಮ ಅನುಸರಿಸಲು 10 ತಿಂಗಳ ತರಬೇತಿ ನೀಡಲು ತೋಟಗಾರಿಕೆ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಒಂದು ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಮತ್ತು ತರಬೇತಿ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.


ಇದನ್ನೂ ಓದಿ: 8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಿರಿ...


ತೋಟಗಾರಿಕೆ ತರಬೇತಿ ವಿವರ Training details: ತೋಟಗಾರಿಕೆ ಇಲಾಖೆಯಿಂದ ಈ ಉಚಿತ ತರಬೇತಿಯನ್ನು 02-05-2025 ರಿಂದ 28-02-2026ರ ಒಳಗಾಗಿ ಒಟ್ಟು 10 ತಿಂಗಳ ಅವಧಿಗೆ ನೀಡಲಾಗುತ್ತದೆ. ಯುವ ಜನರು ತೋಟಗಾರಿಕೆಯ ಸಮಗ್ರ ವೈಜ್ಞಾನಿಕ ಬೇಸಾಯ (Scientific method) ಪದ್ಧತಿಯನ್ನು ಅಳವಡಿಸಿಕೊಂಡು ತಮ್ಮ ಸ್ವಂತ ತೋಟಗಳನ್ನು ಅಭಿವೃದ್ಧಿಪಡಿಸಿ (Development) ಹೆಚ್ಚಿನ ಇಳುವರಿ ಪಡೆಯುವಲ್ಲಿ ಸಫಲರಾಗಬೇಕೆಂಬುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ.


10 ತಿಂಗಳ ಉಚಿತ ತರಬೇತಿಯ ನಂತರ, ತರಬೇತಿ ಪಡೆದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಹಾಜರಾಗಲು ಅಭ್ಯರ್ಥಿಯ ಶೇಕಡ 75% ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. ಆರೋಗ್ಯ ಸಮಸ್ಯೆಗಳಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಆಧಾರದ ಮೇಲೆ 30 ದಿನಗಳ ವಿನಾಯಿತಿ ಪಡೆಯಬಹುದು.


ಇದನ್ನೂ ಓದಿ: ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ...


ಅರ್ಜಿ ಸಲ್ಲಿಸಲು ಯಾರು ಅರ್ಹರು Eligibility Criteria : Free horticulture training with stipend ತೋಟಗಾರಿಕೆ ಇಲಾಖೆಯ ಈ ಒಂದು ಉಚಿತ ತರಬೇತಿಯನ್ನು ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಈ ತರಬೇತಿಯನ್ನು ಮುಖ್ಯವಾಗಿ ರೈತರ ಮಕ್ಕಳಿಗಾಗಿಯೇ ನಡೆಸುತ್ತಿರುವುದರಿಂದ, ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಸ್ವಂತ ಜಮೀನನ್ನು ಹೊಂದಿರಬೇಕು. ಉಚಿತ ತರಬೇತಿ ಪಡೆದು ತಮ್ಮ ಸ್ವಂತ ತೋಟಗಳನ್ನು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.


ವಯೋಮಿತಿ ಎಷ್ಟು?: ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ವರ್ಗಗಳ ಅನುಸಾರ ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 30 ವರ್ಷ, ಪ.ಜಾತಿ ಮತ್ತು ಪ.ಪಂಗಡ ಅಭ್ಯರ್ಥಿಗಳು 33 ವರ್ಷ ಹಾಗೂ ಮಾಜಿ ಸೈನಿಕರಿಗೆ 65 ವರ್ಷ ನಿಗದಿಪಡಿಸಲಾಗಿದೆ.


17,500 ರೂಪಾಯಿ ಶಿಷ್ಯವೇತನ: ಉಚಿತ ತೋಟಗಾರಿಕೆ ತರಬೇತಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತರಬೇತಿಯ ಜೊತೆಗೆ ಪ್ರತಿ ತಿಂಗಳು 1,750 ರೂಪಾಯಿಯ ಶಿಷ್ಯ ವೇತನವನ್ನು ನೀಡಲಾಗಿವುದು. ಅಂದರೆ 10 ತಿಂಗಳ ತರಬೇತಿಗೆ ಒಟ್ಟು 17,500 ರೂಪಾಯಿ ನೀಡಲಾಗುವುದು.


ಇದನ್ನೂ ಓದಿ: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಪಡೆಯುವ ಸರಳ ವಿಧಾನ | ಸರಳ ಬಡ್ಡಿಯಲ್ಲಿ ಗೃಹಸಾಲ ನೀಡುವ ಬ್ಯಾಂಕ್‌ಗಳ ಪಟ್ಟಿ


ಅರ್ಜಿ ಸಲ್ಲಿಸುವುದು ಹೇಗೆ?: ಹತ್ತು ತಿಂಗಳ ತೋಟಗಾರಿಕೆ ತರಬೇತಿಯ ಅರ್ಜಿಗಳನ್ನು ಕೆಳಗೆ ನೀಡಿರುವ ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಇವರ ಕಚೇರಿಯಲ್ಲಿ 01-04-2025ರ ಸಾಯಂಕಾಲ 5.30ರ ಒಳಗಾಗಿ ಸಲ್ಲಿಸಬೇಕು.


 ಅರ್ಜಿಯ ಜೊತೆಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 30 ಮತ್ತು SC/ST ವರ್ಗದ ಅಭ್ಯರ್ಥಿಗಳು ರೂ. 15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಬ್ಯಾಂಕ್ ಡಿಮಾಂಡ್ ಡ್ರಾಫ್ಟ್ ಅನ್ನು ತೋಟಗಾರಿಕೆ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಅವರ ಹೆಸರಿನಲ್ಲಿ ಪಡೆದು ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ ಅರ್ಜಿ ಸಲ್ಲಿಸಬೇಕು.


ಅಧಿಸೂಚನೆ ಹಾಗೂ ಅರ್ಜಿ ನಮೂನೆ : Download