Jobs

indian coast guard navik recruitment - ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ | ಕರಾವಳಿ ರಕ್ಷಣಾ ಪಡೆಯ 300 ಹುದ್ದೆಗಳಿಗೆ ಅರ್ಜಿ ಆಹ್ವಾನ

indian coast guard navik recruitment - ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ | ಕರಾವಳಿ ರಕ್ಷಣಾ ಪಡೆಯ 300 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ರಕ್ಷಣಾ ಸಚಿವಾಲಯದ (Ministry of Defence) ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಕರಾವಳಿ ರಕ್ಷಣಾಪಡೆಯು (Indian Coast Guard) ಭಾರತದ ಕಡಲ ತೀರದಲ್ಲಿ ಕಾನೂನು ಸುವ್ಯವಸ್ಥೆಯ ಪಾಲನೆ ಹಾಗೂ ರಕ್ಷಣಾ ಕಾರ್ಯಾಚರಣೆಯ ನಡೆಸುವ ಪ್ರಮುಖ ಸಂಸ್ಥೆಯಾಗಿದೆ. 


ಸದರಿ ಇಂಡಿಯನ್ ಕೋಸ್ಟ್ ಗಾರ್ಡ್’ನಲ್ಲಿ ಖಾಲಿ ಇರುವ 300 ‘ನಾವಿಕ್’ (Navik Posts) ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 25ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ


ಹುದ್ದೆಗಳ ವಿವರ : ಇಂಡಿಯನ್ ಕೋಸ್ಟ್ ಗಾರ್ಡ್’ನ ನಾವಿಕ್ (ಜನರಲ್ ಡ್ಯೂಟಿ) 260 ಹುದ್ದೆಗಳು ಹಾಗೂ ನಾವಿಕ್ (ಡೊಮೆಸ್ಟಿಕ್ ಬ್ರಾಂಚ್) ಸೇರಿ ಒಟ್ಟು ಹುದ್ದೆಗಳು 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 


ವಿದ್ಯಾರ್ಹತೆ : ಇಂಡಿಯನ್ ಕೋಸ್ಟ್ ಗಾರ್ಡ್ ‘ನಾವಿಕ್’ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ, 12ನೇ ತರಗತಿಯನ್ನು ಗಣಿತ, ಭೌತಶಾಸ್ತ್ರದ ವಿಷಯದೊಂದಿಗೆ ಪೂರ್ಣಗೊಳಿಸಿರಬೇಕು.


ವಯೋಮಿತಿ : ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 22 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ.


ಇದನ್ನೂ ಓದಿ: ಸೂರ್ಯ ಘರ್ ಯೋಜನೆಯಡಿ ರಾಜ್ಯದಲ್ಲಿ 4,407 ಮನೆಗಳಿಗೆ ಸಹಾಯಧನ


ವೇತನವೆಷ್ಟು : ಇಂಡಿಯನ್ ಕೋಸ್ಟ್ ಗಾರ್ಡ್ ‘ನಾವಿಕ್’ ಹುದ್ದೆಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700 ರೂ. ವೇತನ ನಿಗದಿಪಡಿಸಲಾಗಿದ್ದು; ಕೇಂದ್ರ ಸರ್ಕಾರದ ಇರೆ ಸವಲತ್ತುಗಳು ಅನ್ವಯವಾಗಲಿವೆ.


ಆಯ್ಕೆ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ, ದೈಹಿಕ ಸಾಮರ್ಥ್ಯದ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಜಿ ಶುಲ್ಕ : ಎಸಿ/ಎಸ್ಪಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಈ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇತರ ಎಲ್ಲ ವರ್ಗದ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.


ಅರ್ಜಿ ಸಲ್ಲಿಕೆ ಹೇಗೆ? : ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 25ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್  joinindiancoastguard.cdac.inಗೆ ಭೇಟಿ ನೀಡಬಹುದು. 


ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ : 25-02-2025


ಇದನ್ನೂ ಓದಿ: ಇಂಟರ್‌ನೆಟ್ ಇಲ್ಲದೇ ಮೊಬೈಲ್‌ನಲ್ಲಿ ಹಣ ಕಳಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ...