Schemes

PM Surya Ghar Rooftop Scheme : ಮನೆಗೆ ಉಚಿತ ಸೋಲಾರ್ ಕರೆಂಟ್ ಪಡೆಯಲು ಈಗಲೇ ಅರ್ಜಿ ಹಾಕಿ | ಕರ್ನಾಟಕದಲ್ಲಿ 5,14 ಲಕ್ಷ ಕುಟುಂಬಗಳು ನೋಂದಣಿ

PM Surya Ghar Rooftop Scheme : ಮನೆಗೆ ಉಚಿತ ಸೋಲಾರ್ ಕರೆಂಟ್ ಪಡೆಯಲು ಈಗಲೇ ಅರ್ಜಿ ಹಾಕಿ | ಕರ್ನಾಟಕದಲ್ಲಿ 5,14 ಲಕ್ಷ ಕುಟುಂಬಗಳು ನೋಂದಣಿ
‘ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತಿ ಬಿಜ್ಲಿ (PM Surya Ghar Muft Bijli Yojana) ಯೋಜನೆಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು; ಕರ್ನಾಟಕದಲ್ಲಿ ಈತನಕ ಒಟ್ಟು 5,14,000 ಕುಟುಂಬಗಳು ನೋಂದಣಿ ಮಾಡಿಕೊಂಡಿವೆ. ಇದರಲ್ಲಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಬೆಂಗಳೂರಿನ ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಸೂರ್ಯ ಘರ್ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಂಎನ್‌ಆರ್ ಇ-ಪೋರ್ಟಲ್’ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ ಎಂದು ವಿವರಿಸಿದರು.


ಏನಿದು ಸೂರ್ಯ ಘರ್ ಯೋಜನೆ?

ಹೆಸರೇ ಹೇಳುವಂತೆ ಇದೊಂದು ಮನೆ ಮೇಲ್ಛಾವಣಿ ಸೋಲಾರ್ ವಿದ್ಯುತ್ ಯೋಜನೆ. ಈ ಯೋಜನೆಯಡಿ ಮನೆಗೆ ಸೋಲಾರ್ ಘಟಕ ಅಳವಡಿಸಿಕೊಂಡರೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಪಡೆಯಬಹುದಾಗಿದೆ. ಮ£ಗೆ ಬಳಸಿ ಮಿಕ್ಕುವ ವಿದ್ಯುತ್ ಅನ್ನು ಮಾರಾಟ ಮಾಡಿ ಕೂಡ ಆದಾಯ ಗಳಿಸಬಹುದಾಗಿದೆ.

ಈ ಯೋಜನೆಯು ನವೀಕರಿಸಬಹುದಾದ ಇಂಧನದ ರಾಷ್ಟ್ರೀಯ ಗುರಿ ಸಾಧಿಸಲು ಹಾಗೂ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಯೋಜನೆಯಡಿ ಸೋಲಾರ್ ವಿದ್ಯುತ್ ಘಟಕ ಅಳವಡಿಸಿಕೊಂಡ ಮನೆಗಳಿಗೆ 15 ದಿನಗಳಲ್ಲೇ ಸಬ್ಸಿಡಿ ಸಿಗುತ್ತಿದೆ ಎಂದು ಈಚೆಗಷ್ಟೇ ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯ ಮಾಹಿತಿ ನೀಡಿತ್ತು. 


ಸಹಾಯಧನ ಮತ್ತು ಸಾಲ ಸೌಲಭ್ಯ

ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯಡಿ ಮೇಲ್ಛಾವಣಿ ಘಟಕ ಸ್ಥಾಪನೆಗೆ 30,000 ರೂ. ರಿಂದ 78,000 ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ. ರಾಜ್ಯದಲ್ಲಿ ಸುಮಾರು 37 ಲಕ್ಷ ಗೃಹ ಜ್ಯೋತಿಯೇತರ ಗ್ರಾಹಕರಿಗೆ ಯೋಜನೆಯನ್ನು ತಲುಪಿಸುವ ಉದ್ದೇಶದೊಂದಿಗೆ ರಾಜ್ಯದ ನೋಡಲ್ ಏಜೆನ್ಸಿಯಾದ ಬೆಸ್ಕಾಂ ಇದರ ತ್ವರಿತ ಅನುಷ್ಠಾನಕ್ಕೆ ಮುಂದಾಗಿದೆ.

ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸೂರ್ಯ ಘರ್ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ. ಹೂಡಿಯಲ್ಲಿ ನಡೆದ ಕಾರ್ಯಾಗಾರದಲ್ಲಿ ಬೆಂಗಳೂರಿನ ವಿವಿಧ ಅಪಾರ್ಟ್ಮೆಂಟ್ ಫೆಡರೇಷನ್ ಪ್ರತಿನಿಧಿಗಳು, ನೋಂದಾಯಿತ ಖಾಸಗಿ ಏಜೆನ್ಸಿಗಳ ಪ್ರತಿನಿಧಿಗಳು, ಬೆಸ್ಕಾಂನ ತಾಂತ್ರಿಕ ನಿರ್ದೇಶಕರು ಮತ್ತು ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ