ಭಾರತೀಯ ಬಹು ರಾಷ್ಟ್ರೀಯ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ.
ಹುದ್ದೆಗಳ ವಿವರ : ಎಸ್‌ಬಿಐ ವಿವಿಧ ಶಾಖೆಗಳಲ್ಲಿ ಖಾಲಿ ಇರುವ 13 ಮ್ಯಾನೇಜರ್ ಹುದ್ದೆಗಳು 29 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳು ಹಾಗೂ 01 ಚೀಫ್ ಆಫೀಸರ್ ಹುದ್ದೆ ಸೇರಿ ಒಟ್ಟು 43 ಹುದ್ದೆಗಳ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿ೦ದ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್, ಎಂಎ, ಎಂಸಿಎ, ಎಂ.ಎಸ್ಸಿ, ಎಂಬಿಎ, ಎಂ.ಸ್ಟಾö್ಯಟ್, ಪಿಜಿಡಿಎಂ ಪೂರ್ಣಗೊಳಿಸಿರಬೇಕು. ಚೀಫ್ ಆಫೀಸರ್ ಹುದ್ದೆಗೆ ಸಂಸ್ಥೆಯ ನಿಯಮಾನುಸಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹುದ್ದೆಗೆ ಸಂಬ೦ಧಿಸಿದ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ : ಎಸ್‌ಬಿಐ ಮ್ಯಾನೇಜರ್ ಕನಿಷ್ಟ 26 ವರ್ಷ ಹಾಗೂ ಗರಿಷ್ಟ 36 ವರ್ಷ, ಡೆಪ್ಯುಟಿ ಮ್ಯಾನೇಜರ್ 24ರಿಂದ 32 ವರ್ಷ ಹಾಗೂ ಚೀಫ್ ಆಫೀಸರ್ 57 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ : ಮ್ಯಾನೇಜರ್ ಹುದ್ದೆಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ 85,920-1,05,2800, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ 64,820-93,960 ಹಾಗೂ ಚೀಫ್ ಆಫೀಸರ್ ಹುದ್ದೆಗೆ ವಾರ್ಷಿಕವಾಗಿ 31,20,000 ಸಂಬಳ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ? : ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ತಿಳಿಸಲಾಗುತ್ತದೆ. ಸಂದರ್ಶನವನ್ನು 100 ಅಂಕಗಳಿಗೆ ನಡೆಸಲಾಗುತ್ತದೆ.
ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆಗಾಗಿ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ. ಒಂದಕ್ಕಿ೦ತ ಹೆಚ್ಚು ಅಭ್ಯರ್ಥಿಗಳು ಕಟ್-ಆಫ್ ಅಂಕಗಳನ್ನು (ಕಟ್-ಆಫ್ ಪಾಯಿಂಟ್‌ನಲ್ಲಿ ಸಾಮಾನ್ಯ ಅಂಕಗಳು) ಗಳಿಸಿದರೆ, ಅಂತಹ ಅಭ್ಯರ್ಥಿಗಳನ್ನು ವಯಸ್ಸಿನ ಆಧಾರದ ಮೇಲೆ ಅವರೋಹಣ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ | ಕರಾವಳಿ ರಕ್ಷಣಾ ಪಡೆಯ 300 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ : ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಬಿಐ ವೆಬ್‌ಸೈಟ್ sbi.co.inಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳಿಗೆ 750 ರೂ. ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 24-02-2025
ಅಧಿಸೂಚನೆ
* ಮ್ಯಾನೇಜರ್: Download
* ಚೀಪ್ ಆಫೀಸರ್: Download
ಇದನ್ನೂ ಓದಿ: ಆರ್‌ಬಿಐ ರೆಪೊ ದರ ಇಳಿಕೆ | ಇನ್ಮುಂದೆ ಎಲ್ಲಾ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿಗೆ ಸಿಗಲಿದೆ ಸಾಲ ಸೌಲಭ್ಯ RBI Repo Rate Cut