Education

SSLC PUC Exam - ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗೆ ಬಿಗಿ ಭದ್ರತೆ | ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

SSLC PUC Exam  - ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗೆ ಬಿಗಿ ಭದ್ರತೆ | ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 (SSLC Exam-1) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ (Second PU Exam 2025) ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಭಯವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ಇಲಾಖೆ ಮನವಿ ಮಾಡಿದೆ.


ಹೆಚ್ಚುವರಿ ಗ್ರೇಸ್ ಅಂಕಕ್ಕೆ ಕತ್ತರಿ: ವೆಬ್‌ಕಾಸ್ಟಿಂಗ್ ಕಣ್ಣಾವಲು ವ್ಯವಸ್ಥೆ ಜಾರಿಯಿಂದ ಕಳೆದ ಬಾರಿ ತೀವ್ರವಾಗಿ ಕುಸಿದಿದ್ದ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಹೆಚ್ಚುವರಿ ಗ್ರೇಸ್ ನೀಡುವ ಪದ್ಧತಿ ಈ ಬಾರಿ ಈ ಇರುವುದಿಲ್ಲ. ಆದರೆ, ಕೆಲವೇ ಅಂಕಗಳಿ೦ದ ಉತ್ತೀರ್ಣ ಅವಕಾಶ ತಪ್ಪುವ ಮಕ್ಕಳನ್ನು ಮೇಲೆತ್ತಲು ಈ ಹಿಂದೆ ಇದ್ದಂತೆ ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಗ್ರೇಸ್ ಅಂಕ ನೀಡುವ ಪದ್ಧತಿ ಮುಂದುವರೆಯಲಿದೆ. ಇದರಿಂದ ಕಳೆದ ಬಾರಿ ಒಟ್ಟಾರೆ ಶೇ.20ರಷ್ಟು ಗ್ರೇಸ್ ಅಂಕ ನೀಡಲು ಇದ್ದ ಅವಕಾಶ ಈಗ ಶೇ.10ಕ್ಕೆ ಸೀಮಿತವಾಗಲಿದೆ.


ಈ ಬಾರಿ ಎಸ್ಸೆಸ್ಸೆಲ್ಸಿ ಮಾತ್ರವಲ್ಲದೆ ದ್ವಿತೀಯ ಪಿಯು ಪರೀಕ್ಷೆಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಇರಲಿದ್ದು ಅಲ್ಲಿನ ಚಿತ್ರಣವನ್ನು ಆಯಾ ಜಿಲ್ಲಾ ಮಟ್ಟದ ನಿಯಂತ್ರಣ ಕೊಠಡಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಸೇರಿದಂತೆ ಉನ್ನತ ಅಧಿಕಾರಿಗಳು ಕೂತು ಪರಿಶೀಲಿಸಬಹುದು.


ದ್ವಿತೀಯ ಪಿಯು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗಳಿಗೆ ಬಿಗಿ ಭದ್ರತೆ ವ್ಯವಸ್ಥೆಗೊಳಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಪರಿಗಣಿಸಿ ಅಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.


ಇದನ್ನೂ ಓದಿ: 8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಿರಿ... 


ದ್ವಿತೀಯ ಪಿಯು ಪರೀಕ್ಷೆ ಮಾಹಿತಿ: ಮಾರ್ಚ್ 1ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊ೦ಡಿದ್ದಾರೆ. ಈ ಪೈಕಿ 6.61,474 ಹೊಸ ವಿದ್ಯಾರ್ಥಿಗಳಿದ್ದಾರೆ. ಉಳಿದಂತೆ 34,071 ಪುನರಾವರ್ತಿತ ಮತ್ತು 18,317 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಲಕರು 3,35,468, 3,78,389 ಪರೀಕ್ಷೆ ಬರೆಯಲಿದ್ದಾರೆ. ಐವರು ತೃತೀಯ ಲಿಂಗಿಗಳು ಪರೀಕ್ಷೆಗೆ ನೋಂದಾಯಿಸಿಕೊ೦ಡಿದ್ದಾರೆ.


ಉಳಿದ೦ತೆ 2,91,959 ವಿದ್ಯಾರ್ಥಿಗಳು ವಿಜ್ಞಾನ, 2,29,308 ವಿದ್ಯಾರ್ಥಿಗಳು ವಾಣಿಜ್ಯ ಮತ್ತು 1,92,595 ವಿದ್ಯಾರ್ಥಿಗಳು ಕಲಾ ಸಂಯೋಜನೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. 5,050 ಪಿಯು ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 1,171 ಪರೀಕ್ಷಾ ಕೇಂದ್ರಗಳಿರಲಿವೆ. ಪರೀಕ್ಷೆ ನಂತರ ಒಟ್ಟು 76 ಮೌಲ್ಯ ಮಾಪನ ಕೇಂದ್ರದಲ್ಲಿ 31,000 ಮೌಲ್ಯಮಾಪಕರು ಮೌಲ್ಯಮಾಪನ ಮಾಡಲಿದ್ದಾರೆ.


ಇದನ್ನೂ ಓದಿ: ಪಿಯು ಕಾಲೇಜ್ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಶ್ರೀ ಅನ್ನದಾನೇಶ್ವರ ಪಿಯು ಕಾಲೇಜ್ ನೇಮಕಾತಿ 


ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾಹಿತಿ: ರಾಜ್ಯದಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 04ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಗೆ ಈ ಬಾರಿ ಒಟ್ಟು 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊ೦ಡು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ 2021ರಲ್ಲಿ 8.76 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊ೦ಡಿದ್ದು ದಾಖಲೆಯಾಗಿತ್ತು. ಈ ಬಾರಿ 8,42,917 ಹೊಸ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊ೦ಡಿದ್ದಾರೆ. 


ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 38,091 ಮತ್ತು ಖಾಸಗಿ ಅಭ್ಯರ್ಥಿಗಳ ಸಂಖ್ಯೆ 15,539ರಷ್ಟಿದೆ. 4,61,563 ಬಾಲಕರು ಮತ್ತು 4,34,884 ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ. ಒಟ್ಟು 15,881 ಪ್ರೌಢ ಶಾಲೆಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 240 ಮೌಲ್ಯಮಾಪನ ಕೇಂದ್ರಗಳಲ್ಲಿ 65,000 ಶಿಕ್ಷಕರು ಮೌಲ್ಯಮಾಪನ ಮಾಡಲಿದ್ದಾರೆ.


ಇದನ್ನೂ ಓದಿ: ಸೂರ್ಯ ಘರ್ ಯೋಜನೆಯಡಿ ರಾಜ್ಯದಲ್ಲಿ 4,407 ಮನೆಗಳಿಗೆ ಸಹಾಯಧನ