News

ZP TP Election - ಕೊನೆಗೂ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಘೋಷಣೆ | ಒಪ್ಪಿಗೆ ಸೂಚಿಸಿದ ರಾಜ್ಯ ಸರ್ಕಾರ

ZP TP Election - ಕೊನೆಗೂ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಘೋಷಣೆ | ಒಪ್ಪಿಗೆ ಸೂಚಿಸಿದ ರಾಜ್ಯ ಸರ್ಕಾರ

ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯದ ಜಿಲ್ಲಾ ಪಂಚಾಯತಿ (Zilla Panchayat) ಹಾಗೂ ತಾಲ್ಲೂಕು ಪಂಚಾಯತಿ (Taluk Panchayat) ಚುನಾವಣೆ ಗ್ರಹಣ ಮೋಕ್ಷವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬರಲಿರುವ ಜೂನ್ ಅಥವಾ ಜುಲೈನಲ್ಲಿ ಜಿಪಂ, ತಾಪಂ ಚುನಾವಣೆ (TP ZP Election) ಘೋಷಣೆಯಾಗಲಿದ್ದು; ರಾಜ್ಯ ರಾಜಕೀಯ ಚುರುಕು ಪಡೆದುಕೊಂಡಿದೆ.


ಹೌದು, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಸಂಬ೦ಧ ರಾಜ್ಯ ಚುನಾವಣೆ ಆಯೋಗವು ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬ೦ಧ ಹೈಕೋರ್ಟ್’ನಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಫೆಬ್ರವರಿ 17ರಂದು ನಡೆದಿದ್ದು, ಕೋರ್ಟ್ ಮುಂದೆ ಚುನಾವಣೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.


ಇದನ್ನೂ ಓದಿ: ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ...


ಜೂನ್ ಅಥವಾ ಜುಲೈನಲ್ಲಿ ಚುನಾವಣೆ: ಇದೇ ಮೇ ತಿಂಗಳು ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೋರ್ಟ್’ಗೆ ತಿಳಿಸಿದ್ದು; ಆನಂತರ ರಾಜ್ಯ ಚುನಾವಣೆ ಆಯೋಗವು ಜೂನ್ ಅಥವಾ ಜುಲೈ ತಿಂಗಳಲ್ಲಿ  ಚುನಾವಣೆಗಳನ್ನು ನಡೆಸಬಹುದು ಎಂದರು.


ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಈ ಹೇಳಿಕೆಯನ್ನು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ವಕೀಲರು ತಿಳಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಅಂಚೆ ವೃತ್ತ ನೇಮಕಾತಿ 2025: 10ನೇ ತರಗತಿ ಪಾಸಾದವರಿಗೆ ಪೋಸ್ಟಾಫೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ 


ಬಿಬಿಎಂಪಿ ಚುನಾವಣೆ ಯಾವಾಗ? : ಕಳೆದ ನಾಲ್ಕೂವರೆ ವರ್ಷದಿಂದ ಬಿಬಿಎಂಪಿಗೆ ಚುನಾವಣೆ ನಡೆಸಿಲ್ಲ. ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೆ ನಾಗರಿಕರು ತಮ್ಮ ಸಮಸ್ಯೆಗಳನ್ನು ತಿಳಿಸಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಸರ್ಕಾರ ಯಾವಾಗ ಚುನಾವಣೆ ನಡೆಸಲಿದೆ ಎಂಬ ಪ್ರಶ್ನೆ ಕಾಡುತ್ತಿದೆ.


ಫೆಬ್ರವರಿ 25ರಂದು ಸುಪ್ರೀಂ ಕೋರ್ಟ್ನಲ್ಲಿ ಬಿಬಿಎಂಪಿ ಚುನಾವಣೆ ವಿಚಾರಣೆಗೆ ಬರಲಿದೆ. ಇದಕ್ಕೆ ಸರ್ಕಾರದ ಉತ್ತರ ಏನಿದೆ ಎಂಬುದು ಕಾದು ನೋಡಬೇಕು. ಚುನಾಯಿತ ಪ್ರತಿನಿಧಿಗಳಿದ್ದರೆ ಜನರ ಕೆಲಸ ಸರಾಗವಾಗುವ ಸಾಧ್ಯತೆಗಳಿರುವುದರಿಂದ ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕಿದೆ.


ಇದನ್ನೂ ಓದಿ: 8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಿರಿ...