Jobs

BMTC Conductor Recruitment 2024 : BMTC ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | KEA ಯಿಂದ ಹೊಸ ಅಧಿಸೂಚನೆ ಬಿಡುಗಡೆ

WhatsApp Group Join Now
Telegram Group Join Now

BMTC Conductor Recruitment 2024 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕಗಳನ್ನು ಬದಲಾವಣೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ…

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (Bangalore Metropolitan Transport Corporation) ಖಾಲಿ ಇರುವಂತಹ ಬಸ್ ಕಂಡಕ್ಟ್ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ಬದಲಾವಣೆ ಮಾಡಲಾಗಿದೆ. ಈ ಸಂಬ೦ಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಗಾಗಿ ಸಂಬAಧಿಸಿದ ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಸಂಬಳ ಹಾಗೂ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಮತ್ತು ಅಧಿಕೃತ ಅಧಿಸೂಚನೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: Grama Panchayat PDO recruitment 2024 karnataka : ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ | ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ

ಅರ್ಜಿ ಸಲ್ಲಿಕೆ ದಿನಾಂಕಗಳ ಬದಲಾವಣೆಯ ಮಾಹಿತಿ

ಈ ಮೊದಲು ಹೊರಡಿಸಲಾದ ಅಧಿಸೂಚನೆಯಲ್ಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ 2024ರ ಮಾರ್ಚ್ 9-10 ರಿಂದ ಏಪ್ರಿಲ್-10ರ ವರೆಗೆ ದಿನಾಂಕ ನಿಗಧಿಪಡಿಸಲಾಗಿತ್ತು. ಹಲವು ಕಾರಣಗಳಿಂದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದ್ದು; ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಏಪ್ರಿಲ್ 19, 2024 ರಿಂದ ಮೇ 18, 2024ರ ವರೆಗೆ ಅವಕಾಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಕೆಳಗಡೆ ನೀಡಲಾಗಿದೆ.

BMTC Conductor Recruitment 2024 ಸಂಕ್ಷಿಪ್ತ ವಿವರ

  • ನೇಮಕಾತಿ ಇಲಾಖೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
  • ಒಟ್ಟು ಖಾಲಿ ಹುದ್ದೆಗಳು : 2,500 ಹುದ್ದೆಗಳು
  • ಹುದ್ದೆಗಳ ಹೆಸರು : ಬಸ್ ನಿರ್ವಾಹಕ (Bus Conductor)
  • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಬೆಂಗಳೂರು

ಖಾಲಿ ಹುದ್ದೆಗಳ ವಿವರ 

  • ಮಿಕ್ಕುಳಿದ ವೃಂದದ ಹುದ್ದೆಗಳು : 2286
  • ಸ್ಥಳೀಯ ವೃಂದದ ಹುದ್ದೆಗಳು : 214

ಇದನ್ನೂ ಓದಿ: RTE Karnataka Admission 2024-25 Apply Online : ನಿಮ್ಮ ಮಗುವಿಗೆ ನಿಮಗಿಷ್ಟದ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ಬಸ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿAದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಮಾಸಿಕ ಸಂಬಳ ಎಷ್ಟು?

ಬೆಂಗಳೂರು ಮಹಾನರ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 18,660 ರೂ. ಯಿಂದ 25,300 ರೂ . ವರೆಗೆ ಮಾಸಿಕ ಸಂಬಳವನ್ನು ನೀಡಲಾಗುವುದು.

ವಯೋಮಿತಿ ವಿವರ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತ ಬಸ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಹಾಗೂ ವರ್ಗಗಳ ಅನುಸಾರ ಗರಿಷ್ಠ ವಯಸ್ಸಿನ ಮಿತಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
  • 2a, 2b, 3a, 3b ಅಭ್ಯರ್ಥಿಗಳಿಗೆ : 38 ವರ್ಷ
  • ಎಸ್‌ಸಿ/ಎಸ್‌ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ : 40 ವರ್ಷ
  • ಮಾಜಿ ಸೈನಿರಿಗೆ : 45 ವರ್ಷ

ಇದನ್ನೂ ಓದಿ: KPSC Recruitement 2024 : ಕೆಪಿಎಸ್‌ಸಿ ನೇಮಕಾತಿ ಹಂಗಾಮ | ವಿವಿಧ ಇಲಾಖೆಗಳಲ್ಲಿ 2500ಕ್ಕೂ ಹೆಚ್ಚು ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕದ ವಿವರ

  •  2a, 2b, 3a, 3b ಮತ್ತು ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : ರೂ. 750
  • SC/ ST, ಪ್ರವರ್ಗ 1, ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 500

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 19-04-2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18-05-2024

ಅಧಿಸೂಚನೆ (RPC) : Download
ಅಧಿಸೂಚನೆ (KK) : Download 
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://kea.kar.nic.in

ಇದನ್ನೂ ಓದಿ: 7th Pay Commission Basic Salary Increment Details : ಸರಕಾರಿ ನೌಕರರ ಸಂಬಳ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

WhatsApp Group Join Now
Telegram Group Join Now

Related Posts

error: Content is protected !!