BMTC Uchita Vahana Chalana Tarbeti : ಚಾಲಕರಾಗುವ ಬಯಕೆ ಇರುವವರಿಗೆ ಸರ್ಕಾರ ಉಚಿತ ಚಾಲನಾ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಅವಧಿಯಲ್ಲಿ ವಸತಿ, ಊಟೋಪಚಾರ ಕೂಡ ಉಚಿತವಾಗಿದ್ದು; ಅರ್ಹ, ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (Bengaluru Metropolitan Transport Corporation – BMTC) ಈ ಯೋಜನೆ ಹಮ್ಮಿಕೊಂಡಿದ್ದು; 30 ದಿನಗಳ ಲಘು/ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ಇದೆ. ಹೀಗಾಗಿ ಈಗಲೇ ಸೇವಾ ಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶ ಗಿಟ್ಟಿಸಿಕೊಳ್ಳಬಹುದಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಕೆ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಟ 18 ವರ್ಷ ಹಾಗೂ ಗರಿಷ್ಟ 45 ವರ್ಷ ವಯೋಮಿತಿಯಲ್ಲಿರಬೇಕು. ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು.
ಅರ್ಜಿ ಸಲ್ಲಿಕೆ ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ.
- ಪಾಸ್ಪೋರ್ಟ್ ಅಳತೆಯ 5 ಭಾವಚಿತ್ರ
ಅರ್ಜಿ ಸಲ್ಲಿಕೆ ಹೇಗೆ?
ಈ ವಿಶೇಷ ತರಬೇತಿ ಕಾರ್ಯಕ್ರಮಕ್ಕೆ ಅರ್ಹತೆಯುಳ್ಳ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಿಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ತರಬೇತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್ಸೈಟ್ https://mybmtc.karnataka.gov.in/ನಿಂದ ಅಥವಾ ಕಛೇರಿಯ ವೇಳೆಯಲ್ಲಿ ದೂರವಾಣಿ ಸಂಖ್ಯೆ: 6364858520 / 7760991085 ಮುಖಾಂತರ ಪಡೆಯಬಹುದಾಗಿದೆ.