JobsNews

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವೀಧರರಿಂದ ಪಶುಪಾಲನಾ ನಿಗಮದ 5,250 ಹುದ್ದೆಗಳಿಗೆ ಅರ್ಜಿ ಆಹ್ವಾನ BPNL Recruitment 2024 bharatiyapashupalan

WhatsApp Group Join Now
Telegram Group Join Now

BPNL Recruitment 2024 bharatiyapashupalan : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ (BPNL Recruitment 2024). ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (Bhartiya Pashupalan Nigam Ltd -BPNL) 2009ರಲ್ಲಿ ಸ್ಥಾಪನೆಗೊಂಡಿದ್ದು, ಇದು ಒಂದು ಸರ್ಕಾರೇತರ ಪ್ರತಿಷ್ಠಿತ ಸಂಸ್ಥೆಯಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪಶುಪಾಲಕ ಜ್ಞಾನ ಕೇಂದ್ರಗಳನ್ನು ಸ್ಥಾಪನೆ ಮಾಡಿ ಜನರಲ್ಲಿ ಪಶುಪಾಲನೆಯ ಕುರಿತು ಜನರಲ್ಲಿ ಅರಿವು ಮೂಡಿಸುವ ಮೂಲಕ ದೇಶದಲ್ಲಿ ಕ್ಷೀರ ಕ್ರಾಂತಿಯನ್ನು ತರುವುದು BPNLನ ಮುಖ್ಯ ಉದ್ದೇಶವಾಗಿದೆ.

ಇದೀಗ ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್’ನಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ನೇಮಕಾತಿಗಾಗಿ ಸಂಸ್ಥೆಯು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸದರಿ ಹುದ್ದೆಗಳ ನೇಮಕಾತಿಯ ವಿವರ, ಅರ್ಜಿ ಸಲ್ಲಿಸುವ ವಿವರ, ವಯೋಮಿತಿ ಮತ್ತು ವೇತನ ವಿವರ ಸೇರಿದಂತೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಈ ಲೇಖನದಲ್ಲಿದೆ.

ಇದನ್ನೂ ಓದಿ: ಪಿಯುಸಿ ಪಾಸಾದವರಿಗೆ ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗಳು | 11,250 ಹುದ್ದೆಗಳಿಗೆ ಅರ್ಜಿ ಆಹ್ವಾನ Railway Ticket Collector (TC) Recruitment 2024

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಕೃಷಿ ನಿರ್ವಹಣಾ ಅಧಿಕಾರಿ (Farming Management Officer) : ಒಟ್ಟು 250 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಕೃಷಿ ಅಭಿವೃದ್ಧಿ ಅಧಿಕಾರಿ (Farming Development Officer) : 1,250 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಈ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಕೃಷಿ ಸ್ಫೂರ್ತಿ (Farming Inspiration) : ಒಟ್ಟು 3,750 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗಳಿಗೆ ಕೇವಲ 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ.

BPNL Recruitment 2024 bharatiyapashupalan

ಇದನ್ನೂ ಓದಿ: ಮೇ 31ರೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡದಿದ್ದರೆ ಬೀಳಲಿದೆ ದುಪ್ಪಟ್ಟು ತೆರಿಗೆ | ಮೊಬೈಲ್’ನಲ್ಲೇ ಲಿಂಕ್ ಮಾಡಿ… PAN Aadhaar Link Status Check Online

ವಯೋಮಿತಿ ವಿವರ

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್’ನ ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗಳಿಗೆ 25-45 ವರ್ಷ, ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ 21-40 ವರ್ಷ ಹಾಗೂ ಕೃಷಿ ಸ್ಫೂರ್ತಿ ಹುದ್ದೆಗಳಿಗೆ 18-40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದ್ದು; ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಕೆ ಇದೆ.

ಇದನ್ನೂ ಓದಿ: 2024ನೇ ಸಾಲಿನ ಮುಂಗಾರು ಬೆಳೆವಿಮೆ ಅರ್ಜಿ | ಜಿಲ್ಲೆ, ಬೆಳೆವಾರು ಕೊನೆಯ ದಿನಾಂಕಗಳ ಪಟ್ಟಿ ಇಲ್ಲಿದೆ… Kharif Crop Insurance 2024-25 PMFBY Scheme

ಅರ್ಜಿ ಶುಲ್ಕದ ವಿವರ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು; ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದೆ. ಈ ಪೈಕಿ ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗಳಿಗೆ 944 ರೂಪಾಯಿ, ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ 826 ರೂಪಾಯಿ ಹಾಗೂ ಕೃಷಿ ಸ್ಫೂರ್ತಿ ಹುದ್ದೆಗಳಿಗೆ 708 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಮಾಸಿಕ ಸಂಬಳ ಹಾಗೂ ನೇಮಕಾತಿ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಸಂಬಳ ನಿಗದಿಪಡಿಸಲಾಗಿದ್ದು; ಈ ಪೈಕಿ ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗಳಿಗೆ 50,000 ರೂಪಾಯಿ, ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ 40,000 ರೂಪಾಯಿ ಹಾಗೂ ಕೃಷಿ ಸ್ಫೂರ್ತಿ ಹುದ್ದೆಗಳಿಗೆ 25,000 ರೂಪಾಯಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಇನ್ನು ಆಯ್ಕೆ ವಿಧಾನದ ಬಗ್ಗೆ ನೋಡುವುದಾದರೆ, ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 02-06-2024

ಅಧಿಸೂಚನೆ : Download
ಅರ್ಜಿ ಸಲ್ಲಿಕೆ ಲಿಂಕ್ : Apply Now

ಇದನ್ನೂ ಓದಿ: ನಿಮ್ಮ ಜಮೀನು ಒತ್ತುವರಿಯಾದರೆ ತಗಾದೆ ಇಲ್ಲದೇ ಹದ್ದುಬಸ್ತು ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ತಜ್ಞರ ಸರಳ ಸಲಹೆ… Haddubastu land survey

WhatsApp Group Join Now
Telegram Group Join Now

Related Posts

error: Content is protected !!