News

ಕರ್ನಾಟಕದಲ್ಲಿ ಮುಂದುವರೆದ ಮಳೆ | ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ Continued rains in Karnataka

WhatsApp Group Join Now
Telegram Group Join Now

Continued rains in Karnataka : ಚಳಿಗಾಲ ಆರಂಭವಾದರೂ ಕರ್ನಾಟಕದಲ್ಲಿ ಮಳೆ ಆಟ ಮುಂದುವರೆದಿದೆ. ಫೆಂಗಲ್ ಚಂಡಮಾರುತ ಮರೆಯಾಗುತ್ತಿದ್ದಂತೆಯೇ ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological department) ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಡಿಸೆಂಬರ್ 12ರಂದು ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

SSLC ಪಾಸಾದ ಮಹಿಳೆಯರಿಗೆ LIC ಬಿಮಾ ಸಖಿ ನೇಮಕಾತಿಗೆ ಅರ್ಜಿ ಆಹ್ವಾನ | ಕೇಂದ್ರ ಸರ್ಕಾರದ ಹೊಸ ಯೋಜನೆ LIC BIMA SAKHI Scheme

Continued rains in Karnataka

ಬೆಂಗಳೂರು ನಗರದಲ್ಲಿ ಮಳೆ

ರಾಜಧಾನಿ ಬೆಂಗಳೂರು ನಗರ ಮತ್ತು ಸುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 18 ಡಿಗ್ರಿ ತಾಪಮಾನ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ.

ಡಿಸೆಂಬರ್ 13 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಹಾಗೂ ಡಿಸೆಂಬರ್ 14ರಂದು ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತೆ ಚಿಕ್ಕಮಗಳೂರು ಜಿಲ್ಲೆಗಳಿಗೆ ಗುಡುಗು ಸಹಿತ ಧಾರಾಕಾರ ಮಳೆಯ ಸಂಭವವಿದೆ.

ಮನೆಗೆ ಉಚಿತ ಸೋಲಾರ್ ಕರೆಂಟ್ ಪಡೆಯಲು ಈಗಲೇ ಅರ್ಜಿ ಹಾಕಿ | ಕರ್ನಾಟಕದಲ್ಲಿ 5,14 ಲಕ್ಷ ಕುಟುಂಬಗಳು ನೋಂದಣಿ PM Surya Ghar Rooftop Scheme

WhatsApp Group Join Now
Telegram Group Join Now

Related Posts