DBCDC Shemes Karnatakagov : 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ (D Devaraj Urs Backward Classes Development Corporation) ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ, ಶಿಕ್ಷಣ ಸಾಲ, ಸ್ವಯಂ ಉದ್ಯೋಗ ಸಾಲ, ವಿದೇಶಿ ವ್ಯಾಸಂಗ ಸಾಲ ಯೋಜನೆಗಳ ವಿವರ, ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
ಯಾವೆಲ್ಲ ಯೋಜನೆಗಳಿಗೆ ಅರ್ಜಿ ಆಹ್ವಾನ?
- ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
- ಗಂಗಾಕಲ್ಯಾಣ ಯೋಜನೆ
- ಅರಿವು – ಶೈಕ್ಷಣಿಕ ಸಾಲ ಯೋಜನೆ
- ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆÀ
- ಸ್ವಾವಲಂಭಿ ಸಾರಥಿ ಯೋಜನೆ
- ಸ್ವಯಂ ಉದ್ಯೋಗ ಸಾಲ ಯೋಜನೆ
- ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
- ಹೊಲಿಗೆ ಯಂತ್ರ ವಿತರಣೆ ಯೋಜನೆ
[ez-toc]
1. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂಪಾಯಿಗಳ ವರೆಗೆ ಆರ್ಥಿಕ ನೆರವು ಸಿಗುತ್ತದೆ.
ಇದರಲ್ಲಿ ಕನಿಷ್ಟ 1 ಲಕ್ಷ ರೂಪಾಯಿಗಳ ವರೆಗಿನ ಸಾಲದಲ್ಲಿ ಶೇ.20ರಷ್ಟು ಅಂದರೆ ಗರಿಷ್ಟ 20,000 ರೂಪಾಯಿಗಳ ಸಹಾಯಧನ ಲಭ್ಯವಿದೆ. 2 ಲಕ್ಷದ ವರೆಗೆ ಸಾಲಕ್ಕೆ ಶೇ.15 ರಷ್ಟು ಅಂದರೆ 30,000 ರೂಪಾಯಿ ಸಹಾಯಧನ ಸಿಗುತ್ತದೆ. ಉಳಿಕೆ ಸಾಲದ ಮೊತ್ತಕ್ಕೆ ಶೇ.4ರ ಬಡ್ಡಿದರದಲ್ಲಿ ನಿಗಮದಿಂದ ನೇರ ಸಾಲ ಸೌಲಭ್ಯ ಸಿಗುತ್ತದೆ.
ಇದನ್ನೂ ಓದಿ: ವಿಶೇಷ ವೈಯಕ್ತಿಕ ಸಾಲ ಯೋಜನೆಗಳು | ಯಾವುದಕ್ಕೆಲ್ಲ ಸಾಲ ಸಿಗುತ್ತೆ ಗೊತ್ತಾ? Personal Loans Schemes
2. ಗಂಗಾಕಲ್ಯಾಣ ಯೋಜನೆ
ಹಿಂದುಳಿದ ವರ್ಗಗಳ ರೈತರ ಜಮೀನುಗಳಿಗೆ ನೀರಾವರಿ ಸೌಕರ್ಯ ಕಲ್ಪಿಸುವ ವಿಶೇಷ ಯೋಜನೆ ಇದು. ವೈಯಕ್ತಿಕ ಕೊಳವ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ 4.75 ಲಕ್ಷ ರೂಪಾಯಿ. ಇದರಲ್ಲಿ ವಿದ್ಯುತ್ ಸಂಪರ್ಕ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000 ರೂಪಾಯಿಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.
ಇನ್ನುಳಿದ ಜಿಲ್ಲೆಗಳಿಗೆ 3.75 ಲಕ್ಷ ರೂಪಾಯಿ ಘಟಕ ವೆಚ್ಚವಿದ್ದು; ಇದರಲ್ಲಿ ವಿದ್ಯುತ್ ಸಂಪರ್ಕ ವೆಚ್ಚವಾಗಿ ಪ್ರತಿ ಕೊಳವೆ ಬಾವಿಗೆ 75,000 ರೂಪಾಯಿಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂಪಾಯಿ ಸಾಲವನ್ನು ಶೇ.1ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಕನಿಷ್ಟ 1 ಎಕರೆ, ಉಳಿದ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಇರಬೇಕು.
3. ಅರಿವು – ಶೈಕ್ಷಣಿಕ ಸಾಲ ಯೋಜನೆ
ಈ ಯೋಜನೆಯಡಿ ಸಿಇಟಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳಾದ ಇಂಜಿನಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್’ಗಳ ವ್ಯಾಸಂಗಕ್ಕೆ ಸಾಲ ಮತ್ತು ಸಹಾಯಧನ ಪಡೆಯಬಹುದಾಗಿದೆ.
ವಾರ್ಷಿಕ 1 ಲಕ್ಷ ರೂಪಾಯಿಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ 4 ಲಕ್ಷ ರೂಪಾಯಿಂದ 5 ಲಕ್ಷ ರೂಪಾಯಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು 3.50 ರೂಪಾಯಿ ಲಕ್ಷಗಳ ಮಿತಿಯಲ್ಲಿರಬೇಕು.
4. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ., ಪೋಸ್ಟ್ ಡಾಕ್ಟಲ್ ಮತ್ತು ಮಾಸ್ಟರ್ ಡಿಗ್ರಿ (ಎಂಜಿನಿಯರಿ೦ಗ್ – ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ ಟೆಕ್ನಾಲಜಿ, ಅಗ್ರಿಕಲ್ಟರ್ & ಅಲೈಡ್ ಸೈನ್ಸಸ್ ಟೆಕ್ನಾಲಜಿ, ಮೆಡಿಸಿನ್, ಹ್ಯಾಮ್ಯಾನಿಟಿಸ್ & ಸೋಸಿಯಲ್ ಸೈನ್ಸಸ್) ಶಿಕ್ಷಣಕ್ಕೆ ಪ್ರವೇಶಾತಿ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8 ಲಕ್ಷ ರೂಪಾಯಿಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.
QS World Ranking 500ರೊಳಗೆ ಬರುವ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಟ 10 ಲಕ್ಷ ಹಾಗೂ ಪೂರ್ಣ ಕೋರ್ಸ್ನ ಅವಧಿಗೆ 20 ಲಕ್ಷ ರೂಪಾಯಿಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವವಿದ್ಯಾಲಯದ ಪ್ರವೇಶ ಪತ್ರ (Offer Letter) ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.
5. ಸ್ವಾವಲಂಭಿ ಸಾರಥಿ ಯೋಜನೆ
ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್‌ಗಳಿAದ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಂದರೆ ಗರಿಷ್ಠ 3 ಲಕ್ಷ ರೂಪಾಯಿಗಳ ಸಹಾಯಧನ ಮಂಜೂರು ಮಾಡಲಾಗುವುದು.
ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರುವ, 21 ರಿಂದ 45 ವರ್ಷ ವಯಸ್ಸಿನೊಳಗಿರುವವರು ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಅರ್ಜಿ ಸಲ್ಲಿಸಬಹುದು.
6. ಸ್ವಯಂ ಉದ್ಯೋಗ ಸಾಲ ಯೋಜನೆ
ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಸಿಗುತ್ತದೆ.
ಈ ಸಾಲಕ್ಕೆ ನಿಗಮದಿಂದ ಶೇ.20ರಷ್ಟು ಅಂದರೆ ಗರಿಷ್ಠ 1 ಲಕ್ಷ ರೂಪಾಯಿಗಳ ಸಹಾಯಧನ ಸಿಗುತ್ತದೆ. 18 ರಿಂದ 55 ವರ್ಷ ವಯಸ್ಸಿನೊಳಗಿರುವವರು ಈ ಯೋಜನೆಯ ಸೌಲಭ್ಯ ಪಡೆಯಬಹುದು.
7. ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIS, GTTC, KGTTI ATDCಗಳ ಮೂಲಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸಿ ಉದ್ಯೋಗಿಗಳನ್ನಾಗಿ ರೂಪಿಸುವುದು ಈ ಯೋಜನೆ ಉದ್ದೇಶವಾಗಿದೆ.
ಇದರ ಪ್ರಯೋಜನ ಪಡೆಯಲು 10ನೇ ತರಗತಿ, ದ್ವಿತೀಯ ಪಿ.ಯು.ಸಿ, ಡಿಪ್ಲೋಮ, ಪದವಿ, ಇಂಜಿನಿಯರಿAಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. 18 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು. ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ.6.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ಪ್ರವರ್ಗ-1ರ ಅಭ್ಯರ್ಥಿಗಳಿಗೆ ಆದಾಯ ಮಿತಿ ಇಲ್ಲ. ಅರ್ಜಿದಾರರು https://www.kaushalkar.com/ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: SBI ಬ್ಯಾಂಕ್ 1000+ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಾರ್ಷಿಕ 66 ಲಕ್ಷ ರೂಪಾಯಿ ವರೆಗೂ ಸಂಬಳ SBI Bank SCO Recruitment 2024
8. ಹೊಲಿಗೆ ಯಂತ್ರ ವಿತರಣೆ ಯೋಜನೆ
ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಹೇಗೆ?
ಈ ಎಲ್ಲ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಜನ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:
31-08-2024
ಹೆಚ್ಚಿನ ಮಾಹಿತಿಗೆ ವಿವಿಧ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳಿಗೆ ಇಲ್ಲಿ ಒತ್ತಿ…
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತ ಪ್ರಕಟಣೆ (Download)
ಇದನ್ನೂ ಓದಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ | ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ನೆರವು Pradhan Mantri Awas Yojana 2024