ಸ್ವಯಂ ಉದ್ಯೋಗಕ್ಕೆ ಸರ್ಕಾರವೇ ಕೊಡುತ್ತೆ ₹2 ಲಕ್ಷ ಸಾಲ, ₹30,000 ಸಬ್ಸಿಡಿ | ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಿ… DBCDC Self Employed Loan Scheme 2024

Spread the love

DBCDC Self Employed Loan Scheme 2024 : ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗ (Self Employed) ಆರಂಭಿಸಲು ರಾಜ್ಯ ಸರಕಾರವು ಸಾಲ ಒದಗಿಸುತ್ತಿದೆ. ಈ ಸಾಲಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸಬ್ಸಿಡಿ ಎಷ್ಟು ಸಿಗಲಿದೆ? ಸಾಲ ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಆರಂಭಿಸಲು ಸರಕಾರ ಹಲವು ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಪೈಕಿ ವಿವಿಧ ನಿಗಮಗಳ ಮೂಲಕ ಈ ಸಾಲ ಮತ್ತು ಸಬ್ಸಿಡಿ ಸೌಲಭ್ಯವನ್ನು ನೀಡುತ್ತಿದ್ದು; ನಿರುದ್ಯೋಗಿ ಯುವಕರು ಈ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ: 2024-25ನೇ ಸಾಲಿನ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ DBCDC Shemes Karnatakagov

ಸಾಲ ಮತ್ತು ಸಬ್ಸಿಡಿ ಎಷ್ಟು?

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ’ಯಡಿ ಸ್ವಯಂ ಉದ್ಯೋಗ ಘಟಕ ವೆಚ್ಚಕ್ಕೆ ಅನುಗುಣವಾಗಿ 50,000 ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಆರ್ಥಿಕ ನೆರವು ಸಿಗಲಿದೆ.

ಇದರಲ್ಲಿ ಗರಿಷ್ಠ ಶೇ.15ರಷ್ಟು ಸಹಾಯಧನ ಸಿಗಲಿದೆ. ಕನಿಷ್ಟ 1 ಲಕ್ಷ ರೂಪಾಯಿ ಸಾಲಕ್ಕೆ 20,000 ಹಾಗೂ ಗರಿಷ್ಟ 2 ಲಕ್ಷ ರೂಪಾಯಿ ಸಾಲಕ್ಕೆ 30,000 ಸಬ್ಸಿಡಿ ಇದೆ. ಉಳಿದ ಮೊತ್ತವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ 3 ವರ್ಷಗಳ ಅವಧಿಯಲ್ಲಿ ಸಾಲ ಮರುಪಾವತಿಸಲು ಅವಕಾಶವಿದೆ.

ಇದನ್ನೂ ಓದಿ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ : ವಾಹನ ಖರೀದಿ, ಸ್ವಯಂ ಉದ್ಯೋಗ, ಶಿಕ್ಷಣ ಸಾಲ, ಉಚಿತ ಬೋರ್‌ವೆಲ್ ಸಬ್ಸಿಡಿಗೆ ಅರ್ಜಿ ಆಹ್ವಾನ KVLDCL Karnataka Schemes 2024

ಈ ಸೌಲಭ್ಯಕ್ಕೆ ಯಾರೆಲ್ಲ ಅರ್ಹರು?

ಈ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯು ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಮೀಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರು ಈ ಯೋಜನೆಯಡಿ ಸಾಲ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿದಾರರು ಈ ಹಿಂದೆ ಈಗಾಗಲೇ ಅರಸು ನಿಗಮದ ಯೋಜನೆಗಳ ಸೌಲಭ್ಯ ಪಡೆದಿರಬಾರದು. ಈ ಯೋಜನೆಯಡಿ ಸಾಲ ಪಡೆಯಲು ವಾರ್ಷಿಕ ಆದಾಯ ಪಟ್ಟಣ ಪ್ರದೇಶದವರಿಗೆ ರೂ.1,20,000 ಹಾಗೂ ಗ್ರಾಮಾಂತರ ಪ್ರದೇಶದವರಿಗೆ ರೂ.98,000ಗಳ ಮಿತಿಯಲ್ಲಿರಬೇಕು.

ಮೇಲ್ಕಾಣಿಸಿದ ಪ್ರವರ್ಗ ಹಾಗೂ ವಾರ್ಷಿಕ ವರಮಾನವುಳ್ಳ 18 ರಿಂದ 55 ವರ್ಷಗಳ ವಯೋಮಿತಿಯ ಅಭ್ಯರ್ಥಿಗಳು ಈ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.

DBCDC Self Employed Loan Scheme 2024

ಇದನ್ನೂ ಓದಿ: ಬ್ಯಾಂಕುಗಳಿಂದ ಕಡಿಮೆ ಬಡ್ಡಿ ಸಾಲ ಪಡೆಯಲು ಇಲ್ಲಿದೆ ಸರಳ ಮಾರ್ಗ | ಮೊಬೈಲ್‌ನಲ್ಲೇ ಚೆಕ್ ಮಾಡಿ ನಿಮ್ಮ ಸಾಲ ಪಡೆಯುವ ಅರ್ಹತೆ CIBIL Score Complete Details

ಅರ್ಜಿ ಸಲ್ಲಿಕೆ ಎಲ್ಲಿ?

ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾ೦ಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಜನ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್’ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್’ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು, ಎರಡಕ್ಕೂ ಹೊಂದಾಣಿಕೆಯಾಗಬೇಕು.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 31-08-2024

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಛೇರಿಗಳ ದೂರವಾಣಿ ಸಂಖ್ಯೆಗಳಿಗೆ ಇಲ್ಲಿ ಒತ್ತಿ…

ಇದನ್ನೂ ಓದಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ | ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ನೆರವು Pradhan Mantri Awas Yojana 2024


Spread the love
WhatsApp Group Join Now
Telegram Group Join Now

2 thoughts on “ಸ್ವಯಂ ಉದ್ಯೋಗಕ್ಕೆ ಸರ್ಕಾರವೇ ಕೊಡುತ್ತೆ ₹2 ಲಕ್ಷ ಸಾಲ, ₹30,000 ಸಬ್ಸಿಡಿ | ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಿ… DBCDC Self Employed Loan Scheme 2024”

Leave a Comment

error: Content is protected !!