NewsSchemes

ಕೇಂದ್ರ ಬರ ಪರಿಹಾರ ರೈತರ ಖಾತೆಗೆ ನೇರ ಜಮೆ | ಯಾವ ರೈತರಿಗೆ ಎಷ್ಟು ಸಿಗಲಿದೆ ಪರಿಹಾರ? ಕಂದಾಯ ಸಚಿವರ ಮಾಹಿತಿ Direct Deposit to Central Drought Relief Farmers Account

WhatsApp Group Join Now
Telegram Group Join Now

Direct Deposit to Central Drought Relief Farmers Account : ಈಚೆಗೆ ಸುಪ್ರೀಂ ಕೋರ್ಟ್ (Supreme Court) ಸೂಚನೆಯ ಮೇರೆಗೆ ಕೇಂದ್ರ ಸರಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಸಂಪೂರ್ಣ ಫಲಾನುಭವಿ ರೈತರ ಖಾತೆಗೆ ಜಮಾ ಮಾಡುವುದಾಗಿ ಕಂದಾಯ ಸಚಿವ ಕೃಷ ಭೈರೇಗೌಡ ಅವರು ತಿಳಿಸಿದ್ದಾರೆ.

ಕೇಂದ್ರದಿ೦ದ ಬಂದಿರುವ ಪರಿಹಾರ ಹಣವನ್ನು ರೈತರ ಅಕೌಂಟ್‌ಗೆ (Farmers Bank Account) ಶೀಘ್ರ ಜಮೆ ಮಾಡಲಾಗುವುದು. ಅದೇ ರೀತಿ, ಕೇಂದ್ರ ಸರ್ಕಾರದಿಂದ ಬರಬೇಕಿರುವ ಬಾಕಿ ಹಣಕ್ಕಾಗಿ ಹೋರಾಟವನ್ನೂ ಮುಂದುವರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಒಂದೇ ಕಂತಿನಲ್ಲಿ ಹಣ ಜಮಾ

ಈಚೆಗೆ ಗದಗದಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಚಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಕೇಳಿದ್ದು 18,172 ಕೋಟಿ ರೂ., ಕೇಂದ್ರ ಸರ್ಕಾರ ಕೊಟ್ಟಿದ್ದು 3,454 ಕೋಟಿ ರೂ. ಅಂದರೆ, ನಾವು ಕೇಳಿದ್ದರಲ್ಲಿ ಶೇ.19ರಷ್ಟು ಹಣವನ್ನು ಮಾತ್ರ ಕೊಟ್ಟಿದೆ. ಇದು ಅನ್ಯಾಯ ಎಂದು ನಮ್ಮ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ವಾದಿಸಿದ್ದಾರೆ.

ಇದಕ್ಕೆ ಕೇಂದ್ರ ಸರ್ಕಾರವನ್ನು (Central Govt) ಮತ್ತೆ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ ಬರ ಪರಿಹಾರಕ್ಕೆ ಸಂಬ೦ಧಪಟ್ಟ ಎಲ್ಲ ವರದಿಗಳನ್ನು ಒಪ್ಪಿಸುವಂತೆ ಸೂಚಿಸಿದೆ. ರಾಜ್ಯ ಸರಕಾರವು ಈಗಾಗಲೇ ಒಟ್ಟು 33.60 ಲಕ್ಷ ಮಂದಿ ರೈತರಿಗೆ ಮೊದಲ ಕಂತಿನ ಬರ ಪರಿಹಾರವನ್ನು ನೀಡಿದೆ. ಈಗ ಕೇಂದ್ರದಿ೦ದ ಬಂದಿರುವ ಹಣದಲ್ಲಿ ಅವರಿಗೆ ನೀಡಬೇಕಿರುವ ಬಾಕಿ ಹಣವನ್ನು ಒಂದೇ ಕಂತಿನಲ್ಲಿ ಹಾಕುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Farmers Loan Waiver : ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ

ಸಂಪೂರ್ಣ ಹಣ ರೈತರ ಖಾತೆಗೆ ಜಮಾ

ಈಗ ಕೇಂದ್ರದಿ೦ದ ಬಂದಿರುವ ಸಂಪೂರ್ಣ ಹಣವನ್ನು ರೈತರಿಗೆ ಕೊಡಲಾಗುವುದು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಇದಾವುದಕ್ಕೂ ಒಂದು ನಯಾಪೈಸೆ ಬಳಸುವುದಿಲ್ಲ. ಇದನ್ನೆಲ್ಲಾ ರಾಜ್ಯದ ಬೊಕ್ಕಸದಿಂದಲೇ ನಿಭಾಯಿಸಲಾಗುವುದು.

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರವನ್ನು ಕೋರ್ಟ್ಗೆ ಎಳೆದು, ರಾಜ್ಯಕ್ಕೆ ಬರಬೇಕಿದ್ದ ಬರ ಪರಿಹಾರವನ್ನು ನ್ಯಾಯಾಲಯದ ಮಧ್ಯಸ್ಥಿಕೆಯಲ್ಲಿ ಪಡೆದುಕೊಂಡಿದೆ ಎಂದು ಕಂದಾಯ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬರದಿಂದಾದ ನಷ್ಟವೆಷ್ಟು?

ಕರ್ನಾಟಕದ ಕೆಲವೇ ತಾಲ್ಲೂಕುಗಳನ್ನು ಹೊರತುಪಡಿಸಿ ಇಡೀ ರಾಜವೇ ಬರಪೀಡಿತವೆಂದು (The entire state is drought prone) ಘೋಷಿಸಲ್ಪಟ್ಟಿವೆ. ಒಟ್ಟು 223 ತಾಲ್ಲೂಕುಗಳು ಬರಪೀಡಿತವೆಂದು ಘೋಷಿಸಲ್ಪಟ್ಟಿದ್ದು; ಇದರಲ್ಲಿ 196 ತಾಲ್ಲೂಕುಗಳು ತೀವ್ರ ಬರ ಎದುರಿಸುತ್ತಿವೆ. ಒಟ್ಟಾರೆ ಮಳೆ ಕೊರತೆಯಿಂದಾಗಿ ರಾಜ್ಯಾದ್ಯಂತ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿವೆ.

ಮಳೆ ಕೊರತೆಯಿಂದಾದ ಹಾನಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಸಂಕಷ್ಟಕ್ಕೀಡಾದವರು ಸಣ್ಣ ಮತ್ತು ಅತಿ ಸಣ್ಣ ರೈತರೇ ಆಗಿದ್ದಾರೆ. ‘ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ’ಯಿಂದ (ಎನ್‌ಡಿಆರ್‌ಎಫ್) ಶೀಘ್ರವೇ 18,177.44 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು.

ಇದನ್ನೂ ಓದಿ: Gruhalakshmi Scheme Money : ಒಂದೇ ತಿಂಗಳಲ್ಲಿ ಎರಡು ಬಾರಿ ಜಮಾ ಆಯಿತು ಗೃಹಲಕ್ಷ್ಮಿ ಹಣ

ಯಾವ ರೈತರಿಗೆ ಎಷ್ಟು ಪರಿಹಾರ?

ಕೇಂದ್ರದ ನೀತಿ ಪ್ರಕಾರ ಗರಿಷ್ಠ ಎರಡು ಹೆಕ್ಟೇರ್‌ಗೆ, ಅಂದರೆ ಐದು ಎಕರೆಗೆ ಮಾತ್ರ ಬರ ಪರಿಹಾರ ನೀಡಲಾಗುತ್ತದೆ. ಮಳೆಯಾಶ್ರಿತ ಬೆಳೆ, ನೀರಾವರಿ ಬೆಳೆ ಹಾಗೂ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ಒಂದೊAದು ರೀತಿಯ ಪರಿಹಾರ ಮೊತ್ತ ನಿಗಧಿ ಮಾಡಿದೆ.

ಮಳೆಯಾಶ್ರಿತ ಜಮೀನಿಗೆ ಒಟ್ಟು ಎರಡು ಹೆಕ್ಟೇರ್‌ಗೆ 17,000 ರೂಪಾಯಿ, ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ ಒಟ್ಟು ಎರಡು ಹೆಕ್ಟೇರ್‌ಗೆ 34,000 ರೂಪಾಯಿ ಹಾಗೂ ಬಹುವಾರ್ಷಿಕ ಬೆಳೆಯಾದ ತೋಟಗಾರಿಕೆ ಬೆಳೆಗಳಿಗೆ ಒಟ್ಟು ಎರಡು ಹೆಕ್ಟೇರ್‌ಗೆ 45,000 ರೂಪಾಯಿ ಪರಿಹಾರ ಸಿಗಲಿದೆ.

WhatsApp Group Join Now
Telegram Group Join Now

Related Posts

error: Content is protected !!