NewsSchemes

Farmers Loan Waiver : ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ | ಹೊಸ ಗ್ಯಾರಂಟಿ ಯೋಜನೆ

WhatsApp Group Join Now
Telegram Group Join Now

Farmers Loan Waiver  : ದೇಶಾದ್ಯಂತ ಲೋಕಸಭಾ ಚುನಾವಣೆ (Lok Sabha Elections 2024) ಕಾವು ದಿನೇದಿನೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳು ಬರಗಾಲದಿಂದ (drought) ತತ್ತರಿಸಿದ್ದು; ರೈತರ ಸಂಕಷ್ಟಗಳು ಹೇಳತೀರದಾಗಿದೆ. ಮಳೆ ಕೊರತೆಯಿಂದ ಬೆಳೆನಷ್ಟಕ್ಕೀಡಾಗಿರುವ ರೈತರು ಬರ ಪರಿಹಾರ, ಬೆಳೆನಷ್ಟ ಪರಿಹಾರಕ್ಕಾಗಿ ಅಂಗಲಾಚುವ೦ತಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲೇ ಚುನಾವಣೆ ನಿಮಿತ್ತ ರಾಜಕೀಯ ಪಕ್ಷಗಳು ಹೊಸ ಹೊಸ ಭರವಸೆಗಳನ್ನು ಬಿತ್ತರಿಸುತ್ತಿವೆ.

ಈಗಾಗಲೇ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಪಕ್ಷವು (Congress party) ಘೋಷಿಸಿದೆ. ಜತೆಗೆ ರೈತರ ರಕ್ಷಣೆಗಾಗಿ ಹೊಸ ಕಾಯ್ದೆ ಜಾರಿ, ಜಿಎಸ್‌ಟಿ ವ್ಯಾಪ್ತಿಯಿಂದ ಕೃಷಿ ಹೊರಗೆ, ಬೆಳೆ ವಿಮೆ ಯೋಜನೆಯ ಸ್ವರೂಪ ಬದಲಾವಣೆ, ರೈತರ ಉತ್ಪನ್ನಗಳಿಗೆ ಬೆಲೆಯ ರಕ್ಷಣೆ, ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತ್ರಿ ನೀಡಲು ಸ್ವಾಮಿನಾಥನ್ ಸಮಿತಿಯ ವರದಿ ಜಾರಿಯಂತಹ ಭರವಸೆಗಳನ್ನು ನೀಡಿದೆ.

ಇದನ್ನೂ ಓದಿ: Farmers Loan Waiver : ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ

2 ಲಕ್ಷ ರೂಪಾಯಿ ರೈತರ ಸಾಲಮನ್ನಾ Farmers Loan Waiver

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಳಿ ಬರುತ್ತಿರುವ ಘೋಷಣೆಗಳು ಒಂದೆಡೆಯಾದರೆ, ಮತ್ತೊಂದು ಕಡೆ ಮೇ 13ರಂದು ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರೈತರ ಸಾಲಮನ್ನಾ ಕುರಿತು ಮತ್ತಷ್ಟು ಘೋಷಣೆಗಳು ಮೊಳಗುತ್ತಿವೆ. ಕರ್ನಾಟಕ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ‘ಗ್ಯಾರಂಟಿ ಯೋಜನೆ’ಗಳ (Guarantee schemes) ಮೂಲಕ ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ತಂತ್ರವನ್ನು ಪ್ರಯೋಗಿಸುತ್ತಿದೆ.

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ಬಡ ಕುಟುಂಬಕ್ಕೆ ವಾರ್ಷಿಕ 1 ಲಕ್ಷ ರೂಪಾಯಿ ಪ್ರೋತ್ಸಾಹಧನ, ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ (Farmers Loan Waiver) ಸೇರಿದಂತೆ ಒಟ್ಟು 9 ಗ್ಯಾರಂಟಿಗಳನ್ನು ಘೋಷಿಸಿದೆ. ಕಳೆದ ಮಾರ್ಚ್ 30ರಂದು ಆಂಧ್ರಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ (Y S Sharmila) ಹಲವು ಗ್ಯಾರಂಟಿ ಯೋಜನೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ.

ಇದನ್ನೂ ಓದಿ: 7th Pay Commission Basic Salary Increment Details : ಸರಕಾರಿ ನೌಕರರ ಸಂಬಳ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಮಹಿಳೆಯರಿಗೆ ‘ಮಹಾಲಕ್ಷ್ಮಿ’ ಯೋಗ

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಪ್ರತಿ ಮಹಿಳೆಯರಿಗೆ ಮಾಸಿಕ 2000 ರೂಪಾಯಿ ಪ್ರೋತ್ಸಾಹಧನ ನೀಡುವ ಗೃಹಲಕ್ಷ್ಮಿ ಯೋಜನೆಯಂತೆ (Gruhalakshmi Yojana) ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶದಲ್ಲಿ ಮಹಿಳೆಯರಿಗೆ ಮಹಾಲಕ್ಷ್ಮಿ ಯೋಜನೆಯನ್ನು ((Mahalakshmi Yojana) ಘೋಷಿಸಿದೆ. ಈ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ 8,500 ರಂತೆ ವಾರ್ಷಿಕ 1 ಲಕ್ಷ ರೂಪಾಯಿ ನೀಡಲಾಗುವುದು ಎಂದು ಪಕ್ಷ ಹೇಳಿಕೊಂಡಿದೆ. ಇತರ ಘೋಷಣೆಗಳು ಈ ಕೆಳಗಿನಂತಿವೆ:

  • ರೈತರಿಗೆ ಕನಿಷ್ಠ ಬೆಂಬಲ ಬೆಲೆ (Minimum Support Price- MSP) ಜತೆಗೆ ಶೇ. 50ರಷ್ಟು ಹೆಚ್ಚುವರಿ ಹಣ
  • ಉದ್ಯೋಗ ಖಾತ್ರಿ ಯೋಜನೆಯಡಿ ದಿನದ ಕನಿಷ್ಠ ಕೂಲಿ 400 ರೂಪಾಯಿಗೆ ಏರಿಕೆ
  • ಎಲ್.ಕೆ.ಜಿ ಯಿಂದ ಪಿ.ಜಿ ವರೆಗೆ ಉಚಿತ ಶಿಕ್ಷಣ
  • ಪ್ರತಿ ವಸತಿರಹಿತ ಕುಟುಂಬಕ್ಕೆ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆಗಳ ನಿರ್ಮಾಣ
  • ಫಲಾನುಭವಿಗಳಿಗೆ ಮಾಸಿಕ 4 ಸಾವಿರ ರೂಪಾಯಿ ಸಾಮಾಜಿಕ ಭದ್ರತಾ ಪಿಂಚಣಿ
  • ಅಂಗವಿಕಲರಿಗೆ 6,000 ನೀಡಲಾಗುವುದು ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಪಕ್ಷವು ಭರವಸೆ ನೀಡಿದೆ.

ಇದನ್ನೂ ಓದಿ: Pradhan Mantri Awas Yojana 2024 : ಪ್ರಧಾನ ಮಂತ್ರಿ ಆವಾಸ್ ಯೋಜನೆ | ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ನೆರವು

WhatsApp Group Join Now
Telegram Group Join Now

Related Posts

error: Content is protected !!