NewsSchemes

Farmers Loan Waiver : ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ

WhatsApp Group Join Now
Telegram Group Join Now

Farmers Loan Waiver : ರಾಷ್ಟ್ರ ರಾಜಧಾನಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು; ಇತ್ತ ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ರೈತರನ್ನು ಸೆಳೆಯುವ ಘೋಷಣೆಗಳು ಸಾಲು ಸಾಲಾಗಿ ಕೇಳಿ ಬರುತ್ತಿವೆ. ಆಡಳಿತರೂಢ ಬಿಜೆಪಿಗಿಂತ ಒಂದು ಹೆಜ್ಜೆ ಮುಂದಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಇದೀಗ ರೈತರ ಸಾಲ ಮನ್ನಾ ಮಾಡುವ ಮತ್ತೊಂದು ಹೊಸ ಗ್ಯಾರಂಟಿಯನ್ನು ಘೋಷಿಸಿದೆ.

‘ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಭಾರತ್ ಜೋಡೋ ನ್ಯಾಯ ಯಾತ್ರೆಯ ಅಂಗವಾಗಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಚಂದವಾಡದಲ್ಲಿ ರೈತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ರೈತ ಸಾಲ ಮನ್ನಾ ಗ್ಯಾರಂಟಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಗೃಹಲಕ್ಷ್ಮಿ 7ನೇ ಕಂತಿನ ಹಣಕ್ಕೆ ಕುತ್ತು ತರುತ್ತಾ? ನಿಮ್ಮ ಹಣ ಜಮಾ ವಿವರ ಚೆಕ್ ಮಾಡಿ

ಮಹಿಳೆಯರಿಗೆ 1 ಲಕ್ಷ ರೂಪಾಯಿ ಸಹಾಯಧನ

ದೇಶದ ಮಹಿಳೆಯರಿಗೆ ವಾರ್ಷಿಕವಾಗಿ ತಲಾ ₹1 ಲಕ್ಷ ನೀಡುವುದು, ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50 ಮೀಸಲು ಒದಗಿಸುವುದು ಸೇರಿದಂತೆ ಐದು ಗ್ಯಾರಂಟಿಗಳನ್ನು ಕಳೆದ ಮಾರ್ಚ್ 13ರಂದು ಕಾಂಗ್ರೆಸ್ ಪಕ್ಷ ಘೋಷಿಸಿತ್ತು. ಘೋಷಣೆಯಾದ ಪಂಚ ಗ್ಯಾರಂಟಿಗಳು ಈ ಕೆಳಗಿನಂತಿವೆ:

ಗ್ಯಾರಂಟಿ ನಂ-1 : ‘ಮಹಾಲಕ್ಷ್ಮೀ’ ಹೆಸರಿನ ವಿಶೇಷ ಗ್ಯಾರಂಟಿ ಯೋಜನೆಯನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದು; ಈ ಯೋಜನೆಯ ಅಡಿಯಲ್ಲಿ ಬಡ ಕುಟುಂಬದ ಒಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಹೇಳಿದೆ.

ಗ್ಯಾರಂಟಿ ನಂ-2 : ‘ಆದಿ ಆಬಾಧಿ ಪೂರಾ ಹಕ್​’ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕುಗಳು ನೀಡುವ ಭರವಸೆ ಕೊಡಲಾಗಿದೆ.

ಗ್ಯಾರಂಟಿ ನಂ-3 : ‘ಶಕ್ತಿ ಕಾ ಸಮ್ಮಾನ್’ ಯೋಜನೆಯ ಮೂಲಕ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ಡಬಲ್ ಮಾಡಲಾಗುವುದು.

ಗ್ಯಾರಂಟಿ ನಂ-4 : ಉದ್ಯೋಗಿ ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಕೈಗೆಟುಕುವ ವಸತಿ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಕನಿಷ್ಠ ಒಂದು ‘ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್ ಹಾಸ್ಟೆಲ್’ ನಿರ್ಮಾಣ ಮಾಡಲಾಗುವುದು.

ಗ್ಯಾರಂಟಿ ನಂ-5 : ‘ಅಧಿಕಾರ್ ಮೈತ್ರಿ’ ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಅಧಿಕಾರ ಮೈತ್ರಿಯಾಗಿ ಕಾನೂನು ಸಹಾಯಕರನ್ನು ನೇಮಿಸುವ ಮೂಲಕ ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಅಗತ್ಯ ಸಹಾಯವನ್ನು ಒದಗಿಸಲಾಗುವುದು.

ಇದನ್ನೂ ಓದಿ: Farmers Loan Waiver : ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ

ರೈತರ ಸಾಲಮನ್ನಾ ಗ್ಯಾರಂಟಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ‘ನಾರಿ ನ್ಯಾಯ ಗ್ಯಾರಂಟಿ’ ಹೆಸರಿನಲ್ಲಿ ಬಡ ಮಹಿಳೆಯರಿಗೆ ಪಂಚ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಈ 5 ಗ್ಯಾರಂಟಿಗಳನ್ನು ಘೋಷಿಸಿದ ಮರುದಿನವೇ ಬೃಹತ್ ರೈತ ಸಮುದಾಯಕ್ಕೆ ಮತ್ತಷ್ಟು ಗ್ಯಾರಂಟಿ ಭರವಸೆಗಳನ್ನು ನೀಡಲಾಗಿದೆ.

ಭಾರತ್ ಜೋಡೋ ನ್ಯಾಯ ಯಾತ್ರೆಯ ಅಂಗವಾಗಿ ಮಾರ್ಚ್ 13ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಚಂದವಾಡದಲ್ಲಿ ರೈತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಇಂಡಿಯಾ ಮೈತ್ರಿಕೂಟದ ಸರ್ಕಾರವು ರೈತ ಸಮುದಾಯದ ಧ್ವನಿಯಾಗಲಿದೆ. ರೈತರಿಗಾಗಿ ನಮ್ಮ ಸರ್ಕಾರದ ಬಾಗಿಲು ಯಾವಾಗಲೂ ತೆರೆದಿರುತ್ತದೆ. ಅವರ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದಿದ್ದಾರೆ. ಜತೆಗೆ ರೈತರಿಗೆ ಈ ಕೆಳಗಿನ ಭರವಸೆಗಳನ್ನು ನೀಡಿದ್ದಾರೆ:

  • ರೈತರ ರಕ್ಷಣೆಗಾಗಿ ಹೊಸ ಕಾಯ್ದೆ ಜಾರಿ
  • ಜಿಎಸ್‌ಟಿ ವ್ಯಾಪ್ತಿಯಿಂದ ಕೃಷಿ ಹೊರಗೆ
  • ಬೆಳೆ ವಿಮೆ ಯೋಜನೆಯ ಸ್ವರೂಪ ಬದಲಾವಣೆ
  • ರೈತರ ಉತ್ಪನ್ನಗಳಿಗೆ ಬೆಲೆಯ ರಕ್ಷಣೆ
  • ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತ್ರಿ ನೀಡಲು ಸ್ವಾಮಿನಾಥನ್ ಸಮಿತಿಯ ವರದಿ ಜಾರಿ

ಇದನ್ನೂ ಓದಿ: Karnataka Rain News 2024 : ಮಳೆಭಾಗ್ಯ ತಂದ ಮಾರ್ಚ್ ತಿಂಗಳು | ವಾರದಿಂದ ಈ ಜಿಲ್ಲೆಗಳಲ್ಲಿ ಮಳೆ ಸಂಭ್ರಮ

WhatsApp Group Join Now
Telegram Group Join Now

Related Posts

error: Content is protected !!