ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಹಾಕಿ… Gram panchayat Library supervisors jobs 2024

Spread the love

Gram panchayat Library supervisors jobs 2024 : ರಾಜ್ಯದ ವಿವಿಧ ಜಿಲ್ಲಾ ಪಂಚಾಯತ್ (Zilla Panchayat) ಅಡಿಯಲ್ಲಿ ಬರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ (ಅರಿವು ಕೇಂದ್ರ Arivu Kendra) ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2022ರ ನಿಯಮಗಳ ಅನ್ವಯ ಚಿಕ್ಕಬಳ್ಳಾಪುರ (chikkaballapur.nic.in) ಹಾಗೂ ಬಾಗಲಕೋಟೆ (bagalkot.nic.in) ಜಿಲ್ಲೆಗಳ ವಿವಿಧ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ Online ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: ಸರ್ಕಾರಿ ಕಾಲೇಜು ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ₹40,000 ವರೆಗೆ ಮಾಸಿಕ ವೇತನ Govt College Guest Lecturer Recruitment 2024

Gram panchayat Library supervisors Recruitment 2024 ಸಂಕ್ಷಿಪ್ತ ವಿವರ
  • ಹುದ್ದೆಗಳ ಹೆಸರು : ಗ್ರಾಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ (ಅರಿವು ಕೇಂದ್ರ) ಮೇಲ್ವಿಚಾರಕರು
  • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  • ಒಟ್ಟು ಹುದ್ದೆಗಳು : 24+04=28 ಹುದ್ದೆಗಳು
  • ಉದ್ಯೋಗ ಸ್ಥಳ : ಚಿಕ್ಕಬಳ್ಳಾಪುರ ಮತ್ತು ಬಾಗಲಕೋಟೆ ಜಿಲ್ಲೆ
ವಿದ್ಯಾರ್ಹತೆ ಮತ್ತು ಆಯ್ಕೆ ಪ್ರಕ್ರಿಯೆ ವಿವರ

ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ) ಉತ್ತೀರ್ಣರಾಗಿರಬೇಕು. ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್’ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್’ನಲ್ಲಿ ಉತ್ತೀರ್ಣರಾಗಿರಬೇಕು.

ಪಿ.ಯು.ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ರೋಸ್ಟರ್ ಬಿಂದುವಿನ೦ತೆ ಆಯ್ಕೆ ಮಾಡಲಾಗುತ್ತದೆ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಿತದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೂ ಅವಕಾಶ KSSFCL Recruitment 2024

Gram panchayat Library supervisors jobs 2024
ವಯೋಮಿತಿ ಅರ್ಹತೆ ಏನು?

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ. ಗರಿಷ್ಠ ವಯೋಮಿತಿಯನ್ನು ವರ್ಗಗಳ ಅನುಸಾರವಾಗಿ ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ, 2ಬಿ, 3ಎ,3ಬಿ ವರ್ಗದವರಿಗೆ 38 ವರ್ಷ ಹಾಗೂ ಪ. ಜಾತಿ, ಪ. ಪಂಗಡ, ಪ್ರವರ್ಗ 1 ವರ್ಗದವರಿಗೆ 40 ವರ್ಷ ಹೊಂದಿರಬೇಕು. ಮಾಜಿ ಸೈನಿಕರು, ವಿಶೇಷ ಚೇತನರು ಹಾಗೂ ವಿಧವೆಯರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಮಾಸಿಕ ಸಂಬಳವೆಷ್ಟು?

ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ (ಅರಿವು ಕೇಂದ್ರ) ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ 15,196 ರೂಪಾಯಿ ಮಾಸಿಕ ಸಂಬಳ ನಿಗದಿಪಡಿಸಲಾಗಿದೆ. ಸಂಬಳದ ಜೊತೆಗೆ ವಿವಿಧ ಸರಕಾರಿ ಸವಲತ್ತುಗಳು ಅನ್ವಯವಾಗುತ್ತವೆ.

ಇದನ್ನೂ ಓದಿ: 1ನೇ ತರಗತಿಯಿಂದ PUC, ಪದವಿ ವಿದ್ಯಾರ್ಥಿಗಳ ವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 75,000 ವರೆಗೂ ಆರ್ಥಿಕ ನೆರವು HDFC Bank Parivartan ECSS Scholarship 2024

ಅರ್ಜಿ ಶುಲ್ಕದ ವಿವರ 

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅದೇ ರೀತಿ ಎಸ್‌ಸಿ/ ಎಸ್‌ಸಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳು 200 ರೂಪಾಯಿ ಹಾಗೂ ಅಂಗವಿಕಲ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕವನ್ನು ಆಯಾ ಜಿಲ್ಲಾ ಪಂಚಾಯತಿ ಬ್ಯಾಂಕ್ ಖಾತೆಗೆ ಪಾವತಿಸಬೇಕು. ಬ್ಯಾಂಕ್ ಖಾತೆಯ ವಿವರ ಆಯಾ ಜಿಲ್ಲಾ ಪಂಚಾಯತಿ ಅಧಿಸೂಚನೆಯಲ್ಲಿ ನೀಡಲಾಗಿದೆ ಗಮನಿಸಿ.

ಇದನ್ನೂ ಓದಿ: SSLC ಪಾಸಾದವರಿಗಾಗಿಯೇ ಇವೆ ರಾಜ್ಯ ಸರ್ಕಾರಿ ಈ ಹುದ್ದೆಗಳು : ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ… Karnataka State GOVT Jobs for SSLC Passed

ಚಿಕ್ಕಬಳ್ಳಾಪುರ ಜಿಲ್ಲೆ ಅರ್ಜಿ ಸಲ್ಲಿಕೆ ವಿವರಗಳು
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
    21-09-2024
  • ಅಧಿಸೂಚನೆ : Download
  • ಅರ್ಜಿ ಸಲ್ಲಿಸುವ ಲಿಂಕ್ : Apply ಮಾಡಿ
ಬಾಗಲಕೋಟೆ ಜಿಲ್ಲೆ ಅರ್ಜಿ ಸಲ್ಲಿಕೆ ವಿವರಗಳು
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
    06-09-2024
  • ಅಧಿಸೂಚನೆ : Download
  • ಅರ್ಜಿ ಸಲ್ಲಿಸುವ ಲಿಂಕ್ : Apply ಮಾಡಿ

ಇದನ್ನೂ ಓದಿ: ಅಂಗನವಾಡಿ 1,112 ಹುದ್ದೆಗಳಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ | SSLC, PUC ಪಾಸಾಗಿದ್ದರೆ ಅರ್ಜಿ ಹಾಕಿ Karnataka Anganwadi Recruitment 2024


Spread the love
WhatsApp Group Join Now
Telegram Group Join Now

1 thought on “ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಹಾಕಿ… Gram panchayat Library supervisors jobs 2024”

Leave a Comment

error: Content is protected !!