Jobs

Grama Panchayat PDO recruitment 2024 karnataka : ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ | ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ

WhatsApp Group Join Now
Telegram Group Join Now

Grama Panchayat PDO recruitment 2024 karnataka : ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದರಾಬಾದ್ ಕರ್ನಾಟಕಕ್ಕೆ ಮೀಸಲಿಟ್ಟ 97 ಹುದ್ದೆಗಳು ಸೇರಿದಂತೆ ಒಟ್ಟು 247 ಹುದ್ದೆಗಳನ್ನು ಈ ವರ್ಷ ಭರ್ತಿ ಮಾಡಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ. ಕೆಪಿಎಸ್‌ಸಿ ಈ ನೇಮಕಾತಿಗೆ ಕುರಿತ ಮಹತ್ವದ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಿದೆ. ಅವುಗಳ ವಿವರಗಳು ಇಲ್ಲಿವೆ…

ಪಿಡಿಒ ಹುದ್ದೆಗಳಿಗೆ ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು?

ಭಾರತದ ಕಾನೂನಿ ರೀತ್ಯ ಸ್ಥಾಪಿತವಾದ ಅಂಗಿಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: 7th Pay Commission Basic Salary Increment Details : ಸರಕಾರಿ ನೌಕರರ ಸಂಬಳ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಯಾವ ವಯಸ್ಸಿನವರಿಗೆ ಅವಕಾಶವಿದೆ?

ಕೆಪಿಎಸ್‌ಸಿ ಅಧಿಸೂಚನೆಯ ಪ್ರಕಾರ ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ನಿಗಧಿಪಡಿಸಲಾಗಿದೆ. ಪೂರೈಸಿರಬೇಕು. ಗರಿಷ್ಠ ವಯಸ್ಸನ್ನು ಆಯಾಯ ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
  • ಪ್ರವರ್ಗ 2a, 2b, 3a, 3b ವರ್ಗದ ಅಭ್ಯರ್ಥಿಗಳಿಗೆ 38 ವರ್ಷ
  • ಎಸ್‌ಸಿ, ಎಸ್‌ಟಿ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವೆಷ್ಟು? PDO Monthly Salary

ಕರ್ನಾಟಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹37,900 ರಿಂದ ₹70,850ರ ವರೆಗೆ ಸಂಬಳ ಇರಲಿದೆ. ಸಂಬಳದ ಜೊತೆಗೆ ಸರ್ಕಾರ ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಸವಲತ್ತುಗಳು ಸಿಗುತ್ತವೆ.

ಇದನ್ನೂ ಓದಿ: Karnataka Rain News 2024 : ಮಳೆಭಾಗ್ಯ ತಂದ ಮಾರ್ಚ್ ತಿಂಗಳು | ವಾರದಿಂದ ಈ ಜಿಲ್ಲೆಗಳಲ್ಲಿ ಮಳೆ ಸಂಭ್ರಮ

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವೆಷ್ಟು?

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ (GEN) : 600 ರೂಪಾಯಿ
  • ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ (OBC) : 300 ರೂಪಾಯಿ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ (Ex-ser) : 50 ರೂಪಾಯಿ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ Kannada language test is compulsory

ಪಿಡಿಒ ಹುದ್ದೆಗಳಿಗೆ ನೇಮಕವಾಗಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಸದರಿ ಪರೀಕ್ಷೆಯು 150 ಅಂಕಗಳ ಒಂದು ಪ್ರಶ್ನೆಪತ್ರಿಕೆಯನ್ನು ಹೊಂದಿದ್ದು; ಪಿಡಿಒ ಹುದ್ದೆಗೆ ಅರ್ಹತೆ ಹೊಂದಲು ಅಭ್ಯರ್ಥಿಯು ಈ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನು ಗಳಿಸಲೇಬೇಕು. ಕನ್ನಡ ಭಾಷಾ ಪ್ರಶ್ನೆಪತ್ರಿಕೆಯನ್ನು ಎಸ್ಸೆಸ್ಸೆಲ್ಸಿ ಹಂತದ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಸಿದ್ದಪಡಿಸಲಾಗುತ್ತದೆ.

ಸದರಿ ಪಿಡಿಒ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಹಿಂದೆ ಅಂದರೆ 2022ರ ನವೆಂಬರ್ 29ರಂದು ಹಾಗೂ ನಂತರದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಿದ್ದಲ್ಲಿ ಅದೇ ಫಲಿತಾಂಶವನ್ನು ಈಗಿನ ಪಿಡಿಒ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೆ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Farmers Loan Waiver : ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ

ಪಿಡಿಒ ಹುದ್ದೆಗಳ ಆಯ್ಕೆ ವಿಧಾನ PDO Selection procedure

ಸ್ಪರ್ಧಾತ್ಮಕ ಪರೀಕ್ಷೆಯು ತಲಾ 100 ಅಂಕಗಳ ಎರಡು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿರುತ್ತದೆ. ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಎರಡೂ ಪ್ರಶ್ನೆ ಪತ್ರಿಕೆಗಳು ಇರಲಿವೆ. ಅಭ್ಯರ್ಥಿಗಳು ಈ ಎರಡೂ ಪತ್ರಿಕೆಗಳ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿದೆ.

ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಸ್ಪಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: New Ration Card Application : ಹೊಸ ರೇಷನ್ ಕಾರ್ಡ್ ಗ್ಯಾರಂಟಿ ಯಾವಾಗ? ರೇಷನ್ ಕಾರ್ಡ್ ಅರ್ಜಿಗೆ ತಡೆಗೋಡೆಯಾದ ಲೋಕಸಭಾ ಚುನಾವಣೆ

ಅರ್ಜಿ ಸಲ್ಲಿಕೆ ಆರಂಭ ಮತ್ತು ಅಂತ್ಯ ಯಾವಾಗ?

ಇದೇ ಏಪ್ರಿಲ್ 15, 2024ರಿಂದ ಗ್ರಾಮ ಪಂಚಾಯತಿ ಪಿಡಿಒ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಕೆಪಿಎಸ್‌ಸಿ ಅಧಿಕೃತ ಜಾಲತಾಣದ ಮೂಲಕ ನಿಗಧಿತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮೇ 15, 2024ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಈ ಒಂದು ತಿಂಗಳ ಅವಧಿಯಲ್ಲಿ ಅರ್ಜಿ ಸಲ್ಲಿಸುವ ಮೂಲಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅವಕಾಶ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾಗಿರುವ ಪ್ರಮುಖ ಲಿಂಕುಗಳು

  • ಅಧಿಸೂಚನೆ (ಆರ್‌ಪಿಸಿ): Download
  • ಅಧಿಸೂಚನೆ (ಎಚ್‌ಕೆ) : Download
  • ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ : Click here

ಇದನ್ನೂ ಓದಿ: Gruhalakshmi money and Lok Sabha Election 2024 : ಲೋಕಸಭೆ ಚುನಾವಣೆ ಗೃಹಲಕ್ಷ್ಮಿ 7ನೇ ಕಂತಿನ ಹಣಕ್ಕೆ ಕುತ್ತು ತರುತ್ತಾ? ನಿಮ್ಮ ಹಣ ಜಮಾ ವಿವರ ಚೆಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!