HAL Non Executive Cadre Recruitment 2024 : ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited -HAL) ಸಂಸ್ಥೆಯ ಬೆಂಗಳೂರಿನ ಎಲ್‌ಸಿಎ ತೇಜಸ್ (hal tejas) ವಿಭಾಗದಲ್ಲಿ ಖಾಲಿ ಇರುವ ವಿವಿಧ ನಾನ್ ಎಕ್ಸಿಕ್ಯೂಟಿವ್ ಕೇಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 166 ಹುದ್ದೆಗಳಿದ್ದು, 10ನೇ ತರಗತಿ ಹಾಗೂ ಐಟಿಐ ಪಾಸಾದವರು ಅರ್ಜಿ ಸಲ್ಲಸಬಹುದಾಗಿದೆ.
ಗರಿಷ್ಠ ನಾಲ್ಕು ವರ್ಷಗಳ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಮೂಲದ ವಿಭಾಗಗಳಿಗೆ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ ದೇಶದ ವಿವಿಧೆಡೆ ವರ್ಗಾವಣೆ ಮಾಡಬಹುದು.
ಇದನ್ನೂ ಓದಿ: ಮಹಿಳೆಯರಿಗೆ ₹3 ಲಕ್ಷ ಬಡ್ಡಿ ಇಲ್ಲದ ಸಾಲಕ್ಕೆ ಮಹಿಳಾ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ kswdc karnataka Schemes 2024
ವಿದ್ಯಾರ್ಹತೆ ಏನು?
ಮೊದಲೇ ಹೇಳಿದಂತೆ ಅಭ್ಯರ್ಥಿಗಳು 10ನೇ ತರಗತಿ ಮತ್ತು ಹುದ್ದೆಗೆ ಅನುಗುಣವಾದ ಐಟಿಐ ಉತ್ತೀರ್ಣರಾಗಿರಬೇಕು. ಜತೆಗೆ ನ್ಯಾಷನಲ್ ಅಪ್ಲೆಂಟೀಸ್ ಪ್ರಮಾಣಪತ್ರ ಹೊಂದಿರಬೇಕು. ಅಥವಾ ಮೂರು ವರ್ಷಗಳ ನ್ಯಾಷನಲ್ ಅಫ್ರೆಂಟೀಸ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಎಲ್ಲ ಪರೀಕ್ಷೆಗಳಲ್ಲಿ ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ.50 ಮತ್ತು ಇತರ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇ.60 ಅಂಕ ಗಳಿಸಿರಬೇಕು. ಅಗತ್ಯಕ್ಕಿಂತ ಹೆಚ್ಚು ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೆಂಗಳೂರಿನ ಕಚೇರಿಯಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪ್ರವೇಶ ಪತ್ರ ಇನ್ನಿತರ ಸೂಚನೆಗಳನ್ನು ಅಭ್ಯರ್ಥಿಗಳ ಇ-ಮೇಲ್‌ಗೆ ಕಳುಹಿಸಲಾಗುತ್ತದೆ ಅಥವಾ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳ ಮಾಹಿತಿಯನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗುತ್ತದೆ.
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಸಂಖ್ಯೆಯ ಆಧಾರದಲ್ಲಿ ಕಟ್‌ಆಫ್ ನಿರ್ಧರಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯ ಕುರಿತು ಇ-ಮೇಲ್ ಮೂಲಕ ಸೂಚನೆ ನೀಡಲಾಗುತ್ತದೆ. ಬಳಿಕ ವೈದ್ಯಕೀಯ ಪರೀಕ್ಷೆ ಇರಲಿದೆ.
ವಯೋಮಿತಿ ವಿವರ
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10ರಿಂದ 15 ವರ್ಷ ಹಾಗೂ ತತ್ಸಮಾನ ಹುದ್ದೆಗಳಲ್ಲಿ ಕೆಲಸದ ಅನುಭವ ಇರುವವರಿಗೆ 7 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಸರ್ಕಾರದ ನಿಯಮಾನುಸಾರ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಶುಲ್ಕದ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 200 ರೂ. ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಪಿ, ಅಂಗವಿಕಲ ಅಭ್ಯರ್ಥಿಗಳು ಹಾಗೂ ಎಚ್‌ಎಎಲ್ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಫ್ರೆಂಟೀಸ್ ಆಗಿದ್ದವರು ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ ಮತ್ತು ಅರ್ಜಿ ಸಲ್ಲಿಕೆ ವಿವರ
ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲ ಭತ್ಯೆಗಳನ್ನು ಒಳಗೊಂಡು ಕನಿಷ್ಠ 44,795 ರೂ. ಯಿಂದ 46,764 ರೂ. ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ https://haltejas.formflix.com/apply-onlineಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:
28-08-2024
ಅರ್ಜಿ ಲಿಂಕ್ : Apply Now
ಅಧಿಸೂಚನೆ: Download
ಇದನ್ನೂ ಓದಿ: ರಾಷ್ಟ್ರೀಕೃತ ಬ್ಯಾಂಕುಗಳ 5,351 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ IBPS Recruitment 2024