JobsNews

ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಅಭ್ಯರ್ಥಿಗಳಿಂದ HAL ಫೈರ್‌ಮ್ಯಾನ್-ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ HAL Technician and Fireman Recruitment 2024

WhatsApp Group Join Now
Telegram Group Join Now

HAL Technician and Fireman Recruitment 2024 : ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಚ್‌ಎಎಲ್’ನಲ್ಲಿ (Hindustan Aeronautics Limited: HAL) ಖಾಲಿ ಇರುವ ತಂತ್ರಜ್ಞರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಕೇಂದ್ರ ಸ್ಥಾನ ಹೊಂದಿರುವ ಈ ಸಂಸ್ಥೆಯು ವಿಮಾನ, ಹೆಲಿಕಾಪ್ಟರ್ ಹಾಗೂ ರಕ್ಷಣಾ ಕ್ಷೇತ್ರದ ಸಾಮಗ್ರಿಗಳನ್ನು ಮತ್ತು ಬಿಡಿಭಾಗಗಳ ತಯಾರಿಕೆಯಲ್ಲಿ ತೊಡಗಿದ್ದು; ತಂತ್ರಜ್ಞ ಮತ್ತು ಫೈರ್‌ಮನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಟೆಕ್ನಿಷಿಯನ್ (ಡಿ6) 40 ಹಾಗೂ ಟೆಕ್ನಿಷಿಯನ್ (ಬಿ4) 02 ಹುದ್ದೆಗಳು ಸೇರಿ ಒಟ್ಟು 45 ಹುದ್ದೆಗಳ ನೇಮಕಾತಿ ನಡೆಯಲಿದ್ದು ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಮೆಕಾನಿಕಲ್ : 19
  • ಎಲೆಕ್ಟ್ರಿಕಲ್ : 19
  • ಇನ್‌ಸ್ಟ್ರುಮೆಂಟೇಷನ್/ಎಲೆಕ್ಟ್ರಾನಿಕ್ಸ್ : 02
  • ಏರೋಡ್ರೋಮ್ : 01
  • ಫೈರ್‌ಮನ್ : 01

ಇದನ್ನೂ ಓದಿ: ಪಿಯುಸಿ ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಕೌಶಲ್ಯ ತರಬೇತಿ | ಐಟಿ ಕಂಪನಿಗಳಲ್ಲಿ ಉದ್ಯೋಗ ಅವಕಾಶ TechBee KSDC Skill Training

ಶೈಕ್ಷಣಿಕ ಅರ್ಹತೆ

ಮೇಲ್ಕಾಣಿಸಿದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10ನೇ ತರಗತಿ, 12ನೇ ತರಗತಿ, ಮೆಕಾನಿಕಲ್ ಇಂಜಿನಿಯರಿ೦ಗ್, ಎಲೆಕ್ಟ್ರಿಕಲ್ ಇಂಜಿನಿಯರಿ೦ಗ್ ಹಾಗೂ ಇನ್‌ಸ್ಟ್ರುಮೆಂಟೇಷನ್/ಎಲೆಕ್ಟ್ರಾನಿಕ್ಸ್’ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಸಂಬ೦ಧಿಸಿದ ವಿಭಾಗದಲ್ಲಿ ಎರಡರಿಂದ ಮೂರು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

HAL Technician and Fireman Recruitment 2024

ವಯೋಮಿತಿ ಹಾಗೂ ವೇತನ ವಿವರ

ಅಭ್ಯರ್ಥಿಯ ಗರಿಷ್ಠ ವಯಸ್ಸು ಕಳೆದ ನವೆಂಬರ್ 21ಕ್ಕೆ ಅನ್ವಯವಾಗುವಂತೆ 28 ವರ್ಷದ ಒಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮತಿ ಸಡಿಲಿಕೆ ಇದೆ.

ಟೆಕ್ನಿಷಿಯನ್ (ಡಿ6) ಹುದ್ದೆಗಳಾದ ಮೆಕಾನಿಕಲ್, ಎಲೆಕ್ಟ್ರಿಕಲ್ ಹಾಗೂ ಇನ್‌ಸ್ಟ್ರುಮೆಂಟೇಷನ್/ಎಲೆಕ್ಟ್ರಾನಿಕ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,000 ರೂಪಾಯಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಇನ್ನು ಟೆಕ್ನಿಷಿಯನ್ (ಬಿ4) ಹುದ್ದೆಗಳಾದ ಏರೋಡ್ರೋಮ್ ಮತ್ತು ಫೈಯರ್ ಮನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,000 ರೂಪಾಯಿ ಮೂಲ ವೇತನವಿರಲಿದ್ದು, ಇತರ ಭತ್ಯೆಗಳು ಅನ್ವಯವಾಗಲಿವೆ.

ಇದನ್ನೂ ಓದಿ: 7ನೇ ತರಗತಿ ಪಾಸಾದವರಿಗೆ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ KSRTC Bus Driver Recruitment 2024 Contract Basis

ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ ಹೇಗೆ?

ಎಸ್ಸಿ/ಎಸ್ಟಿ, ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನುಳಿದಂತೆ ಇತರ ವರ್ಗದ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಅನ್‌ಲೈನ್ ಮೂಲಕ ಪಾವತಿಸಬೇಕು.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯೊಂದಿಗೆ hal-india.co.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್’ನಲ್ಲಿ ಅರ್ಜಿ ಸಲ್ಲಿಸಬೇಕು. ಸಂವಹನ ಉದ್ದೇಶಕ್ಕಾಗಿ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ ಇತ್ಯಾದಿ ದಾಖಲೆಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 09-12-2024

ಅಧಿಸೂಚನೆ : ಇಲ್ಲಿ ಡೌನ್‌ಲೋಡ್ ಮಾಡಿ

ಇದನ್ನೂ ಓದಿ: ಮನೆಮನೆಗೂ ಸೋಲಾರ್ ವಿದ್ಯುತ್ | ಬೆಸ್ಕಾಂ ಸೂಪರ್ ಸ್ಕೀಮ್ | ಕೂತಲ್ಲೇ ಗಳಿಸಿ ಭರ್ಜರಿ ಆದಾಯ Bescom Solar Rooftop Scheme

WhatsApp Group Join Now
Telegram Group Join Now

Related Posts