Health Department Recruitment 2024 : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (Karnataka Department of Health and Family Welfare) ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ಹೇಳಿದೆ.
‘ಡಿ’ ಗ್ರೂಪ್ ನೌಕರರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ, ನರ್ಸಿಂಗ್ ಅಧಿಕಾರಿಗಳು, ವೈದ್ಯಾಧಿಕಾರಿಗಳು, ತಜ್ಞರು, ದಂತ ವೈದ್ಯರು ಸೇರಿದಂತೆ ಒಟ್ಟು 34,967 ಹುದ್ದೆಗಳು ಮಂಜೂರಾಗಿವೆ. ಇವುಗಳಲ್ಲಿ 20,444 ಹುದ್ದೆಗಳು ಈಗಾಗಲೇ ಭರ್ತಿಯಾಗಿವೆ. 14,523 ಹುದ್ದೆಗಳು ಖಾಲಿ ಇದ್ದು; ಈ ಎಲ್ಲಾ ಹುದ್ದೆಗಳನ್ನು ಹಂತಹAತವಾಗಿ ಭರ್ತಿ ಮಾಡುವುದಾಗಿ ಸರ್ಕಾರ ಹೈಕೋರ್ಟ್’ಗೆ ತಿಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾಲಿ ಹುದ್ದೆಗಳ ವಿವರ
ಕರ್ನಾಟಕ ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ (Health Department) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್’ಗೆ ಒದಗಿಸಿದ ಮಾಹಿತಿ ಕೆಳಗಿನಂತಿದೆ:
- ಒಟ್ಟು ಖಾಲಿ ಹುದ್ದೆಗಳು : 14,523
- ಖಾಲಿ ಇರುವ ‘ಡಿ’ ಗ್ರೂಪ್ ಹುದ್ದೆಗಳು : 10,253
- ಹೊರಗುತ್ತಿಗೆ, ಸರ್ಕಾರಿ ಗುತ್ತಿಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಕಾರ್ಯನಿರ್ವಣೆಯಲ್ಲಿರುವ ಹುದ್ದೆಗಳು : 16,501
- ಗ್ರಾಮೀಣ ಕಡ್ಡಾಯ ಸೇವೆಯಡಿ ಕಾರ್ಯನಿರ್ವಣೆಯಲ್ಲಿರುವ ಹುದ್ದೆಗಳು : 2,371 ವೈದ್ಯರು
- ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿರುವ ಹುದ್ದೆಗಳು : 204 ಕಿರಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳು
- ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿರುವ ಹುದ್ದೆಗಳು : 413+705 ಹುದ್ದೆಗಳು
- ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿರುವ ಹುದ್ದೆಗಳು : 498 ಫಾರ್ಮಸಿ ಅಧಿಕಾರಿಗಳ ಹುದ್ದೆಗಳು
ಹಾವೇರಿ ಜಿಲ್ಲೆಯಲ್ಲಿ 120 ಹುದ್ದೆಗಳ ನೇಮಕಾತಿ : SSLC, PUC ಪಾಸಾದವರಿಗೂ ಅವಕಾಶ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (National Health Mission) ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ.
ಈ ನೇಮಕಾತಿಯಲ್ಲಿ 10ನೇ ತರಗತಿ 12ನೇ ತರಗತಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರೆಗೂ ಅವಕಾಶವಿದ್ದು, ಈ ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರವನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
ನರ್ಸ್ ಹುದ್ದೆಗಳು, ಕಿರಿಯ ಆರೋಗ್ಯ ರಕ್ಷಣಾಧಿಕಾರಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಆರೋಗ್ಯ ತಪಾಸಣೆ ಅಧಿಕಾರಿಗಳು, ನೇತ್ರ ಸಹಾಯಕ, ಅರೆ ಕಾಲಿಕ ಯೋಗ ತರಬೇತುದಾರರು ಸೇರಿದಂತೆ ವಿವಿಧ 120 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ಅರ್ಜಿ ಸಲ್ಲಿಕೆ ಹೇಗೆ?
ಹಾವೇರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಸಂದರ್ಶನ ನಡೆಯುವ ದಿನದಂದು ಆ ಸ್ಥಳದಲ್ಲಿಯೇ ಅರ್ಜಿಗಳನ್ನು ನೀಡಲಾಗುತ್ತದೆ. ಆದರೆ ಖಾಲಿ ಇರುವಂತಹ ಅರವಳಿಕೆ ತಜ್ಞರು ಹುದ್ದೆಗಳು ಹಾಗೂ ಎಂಬಿಬಿಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಪ್ರತಿದಿನ ಕಚೇರಿಯಲ್ಲಿ ನೀಡಲಾಗುತ್ತಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಸಂಪೂರ್ಣ ದಾಖಲೆ ಪರಿಶೀಲಿಸಿದ ನಂತರ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವಯೋಮಿತಿ ಮತ್ತು ವೇತನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ಹುದ್ದೆಗಳಿಗೆ ವಿವಿಧ ವಯೋಮಿತಿ ಮತ್ತು ವೇತನವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ಪರಿಶೀಲಿಸಿಕೊಳ್ಳಬೇಕು.
ಸಂದರ್ಶನದ ನಡೆಯುವ ದಿನಾಂಕ ಹಾಗೂ ವಿಳಾಸ
ಈ ನೇಮಕಾತಿಯ ಸಂದರ್ಶನವು ‘ಆರೋಗ್ಯ ಭವನ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಆವರಣ, ಹಾವೇರಿ – 581110’ ವಿಳಾಸದಲ್ಲಿ ಆಗಸ್ಟ್ 12ನೇ ತಾರೀಖಿನಿಂದ 14ನೇ ತಾರೀಕಿನ ವರೆಗೆ ನಡೆಯಲಿದೆ.
ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ…
- ಅಧಿಕೃತ ಜಾಲತಾಣ : haveri.nic.in/
- ಸಹಾಯವಾಣಿ : 9449843113
- ಅಧಿಸೂಚನೆ : Download