JobsNews

10ನೇ ತರಗತಿ ಪಾಸಾದವರಿಂದ ಹೋಮ್‌ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ Home Guard Recruitment Belagavi 2024

WhatsApp Group Join Now
Telegram Group Join Now

Home Guard Recruitment Belagavi 2024 : ಒಟ್ಟು 154 ಹೋಮ್‌ಗಾರ್ಡ್ ಹುದ್ದೆಗಳಿಗೆ (Home Guard Job) 10ನೇ ತರಗತಿ ಪಾಸಾದ (SSLC) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಕುರಿತ ಸಂಕ್ಷಿಪ್ತ ವಿವರ

  • ನೇಮಕಾತಿ ಸಂಸ್ಥೆ : ಗೃಹರಕ್ಷಕ ದಳ, ಬೆಳಗಾವಿ
  • ಹುದ್ದೆಗಳ ಹೆಸರು : ಗೃಹರಕ್ಷಕ (Home Guard)
  • ಒಟ್ಟು ಖಾಲಿ ಹುದ್ದೆಗಳು : 154 ಹುದ್ದೆಗಳು
  • ಅರ್ಜಿ ಸಲ್ಲಿಕೆ : ಆಫ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳು

ಇದನ್ನೂ ಓದಿ: ಮಹಿಳೆಯರಿಗೆ ಉಜ್ವಲ ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ… Pradhan Mantri Ujjwala Yojana

Home Guard Recruitment Belagavi 2024

ವಯೋಮಿತಿ ಮತ್ತು ವಿದ್ಯಾರ್ಹತೆ

ಗೃಹರಕ್ಷಕ ಹುದ್ದೆಗಳಿಗೆ 18 ರಿಂದ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು; ಈ ವಯಸ್ಸಿನೊಳಗಿರುವ 10ನೇ ತರಗತಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಿರುದ್ಧ ಯಾವುದೇ ಪೊಲೀಸ್ ಪ್ರಕರಣ ಇರಬಾರದು ಮತ್ತು ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷ-ಸಂಘ ಸಂಸ್ಥೆಗಳ ಸದಸ್ಯರು, ಕಾರ್ಯಕರ್ತರು ಆಗಿರಬಾರದು.

ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ವಿಶೇಷ ವೃತ್ತಿ ಕೌಶಲ್ಯ ಹೊಂದಿದವರಿಗೆ ಪ್ರಮುಖ ಆದ್ಯತೆ ನೀಡಲಾಗುವುದು. ನೆರೆ ರಕ್ಷಣೆ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ, ರೈಫಲ್ ಟ್ರೈನಿಂಗ್, ಸಂಚಾರ ನಿಯಂತ್ರಣ, ಶಸ್ತ್ರಾಸ್ತ್ರ ತರಬೇತಿ ಮೊದಲಾದ ತರಬೇತಿ ನೀಡಿ ತುರ್ತು ಸಂದರ್ಭಗಳಲ್ಲಿ ಅವರನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: SSLC ಪಾಸಾದವರಿಗೆ ಕೆಕೆಆರ್‌ಟಿಸಿ ಚಾಲಕ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | 150 ಹುದ್ದೆಗಳು KKRTC Driver and Technical Assistant Recruitment 2024

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅಭ್ಯರ್ಥಿಗಳು ಇದೇ ಡಿಸೆಂಬರ್ 12 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ನಮೂನೆಯನ್ನು ಬೆಳಗಾವಿಯ ಸಮಾದೇಷ್ಟರವರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಿಲ್ಲಾ ಗೃಹರಕ್ಷಕದಳ ಚನ್ನಮ್ಮ ಹೌಸಿಂಗ್ ಸೊಸೈಟಿಯ ಸಮಾದೇಷ್ಟರವರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಚನ್ನಮ್ಮ ಹೌಸಿಂಗ್ ಸೊಸೈಟಿಯ ಸಮಾದೇಷ್ಟ ಅವರ ಕಚೇರಿಯ ದೂರವಾಣಿ: 0831-2420451 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 12-12-2024

ಇದನ್ನೂ ಓದಿ: ಮನೆಮನೆಗೂ ಸೋಲಾರ್ ವಿದ್ಯುತ್ | ಬೆಸ್ಕಾಂ ಸೂಪರ್ ಸ್ಕೀಮ್ | ಕೂತಲ್ಲೇ ಗಳಿಸಿ ಭರ್ಜರಿ ಆದಾಯ Bescom Solar Rooftop Scheme

WhatsApp Group Join Now
Telegram Group Join Now

Related Posts