JobsNews

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 5,267 ಶಿಕ್ಷಕ ಹುದ್ದೆಗಳ ನೇಮಕಾತಿ | ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ… Kalyan Karnataka Govt School Teacher Recruitment 2024

WhatsApp Group Join Now
Telegram Group Join Now

Kalyan Karnataka Govt School Teacher Recruitment 2024 : ಸರ್ಕಾರಿ ಶಾಲಾ ಶಿಕ್ಷಕರ (Government School Teacher) ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಬರೋಬ್ಬರಿ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಏಕಕಾಲಕ್ಕೆ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪ್ರಾಥಮಿಕ) ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಎ ಮಹಾಲಕ್ಷ್ಮಿ ಅವರು ಸರ್ಕಾರದ ಅಧಿಕೃತ ನಡಾವಳಿಯನ್ನು ಹೊರಡಿಸಿದ್ದಾರೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಈ ನೇಮಕಾತಿ ನಡೆಯಲಿದ್ದು; ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.

ನೇರ ನೇಮಕಾತಿಗೆ ಸಕಾರದ ಅನುಮತಿ

ನೇಮಕಾತಿ ಕುರಿತು ಹೊರಡಿಸಲಾದ ಸರ್ಕಾರದ ನಡಾವಳಿ ಪ್ರಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಪೈಕಿ ಶೇ.80ರಷ್ಟು ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದರು.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6,584 ಶಿಕ್ಷಕರ ಹುದ್ದೆಗಳ ಪೈಕಿ ಶೇ.80 ರಷ್ಟು ಅಂದರೆ ಒಟ್ಟು 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಿದೆ.

Kalyan Karnataka Govt School Teacher Recruitment 2024

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ

ಸದ್ಯದಲ್ಲಿಯೇ ನಡೆಯಲಿರುವ 5,267 ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಅನ್ವಯವಾಗಿವೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರ, ಕೊಪ್ಪಳ, ಬಳ್ಳಾರಿ ಹಾಗೂ ನೂತನ ಜಿಲ್ಲೆ ವಿಜಯನಗರ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

5,267 ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ ಹುದ್ದೆಗಳಿಗೆ ಡಿ.ಇಡಿ, ಪದವಿ, ಬಿ.ಇಡಿ, ಬಿಪಿ.ಇಡಿ ಶಿಕ್ಷಣದ ಜತೆಗೆ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಅಥವಾ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಶಿಕ್ಷಕರ ಹುದ್ದೆಗಳ ವಿವರ

  • ಪಿಜಿಟಿ 1 ರಿಂದ 5ನೇ ತರಗತಿ ಶಿಕ್ಷಕರು : 4,424
  • ಜಿಪಿಟಿ 6 ರಿಂದ 8ನೇ ತರಗತಿ ಶಿಕ್ಷಕರು : 78
  • ಪಿಇಟಿ (ಗ್ರೇಡ್-2) ಶಿಕ್ಷಕರು : 380
  • ಎಸ್‌ಇಸಿ ಎಎಂ ಶಿಕ್ಷಕರು : 121
  • ಎಸ್‌ಇಸಿ ಪಿಇಟಿ ಶಿಕ್ಷಕರು : 216
  • ಎಸ್‌ಇಸಿ ಎಸ್‌ಪಿಎಲ್ ಶಿಕ್ಷಕರು : 48
  • ಒಟ್ಟು ಹುದ್ದೆಗಳು : 5,267

ಮೇಲ್ಕಾಣಿಸಿದ ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು, ಫಿಸಿಕಲ್ ಎಜುಕೇಷನ್ ಟೀಚರ್ (ಗ್ರೇಡ್-2) ಸೇರಿದಂತೆ ಒಟ್ಟು 5,267 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸದ್ಯದಲ್ಲಿಯೇ ಅಧಿಸೂಚನೆ ಬಿಡುಗಡೆ ಮಾಡಲಿದೆ.

ನೇಮಕಾತಿ ಕುರಿತ ಸರ್ಕಾರದ ನಡಾವಳಿ ಪ್ರತಿ : Download

WhatsApp Group Join Now
Telegram Group Join Now

Related Posts