Karnataka Lokayukta Clerk cum Typist Recruitment 2024 : ಕರ್ನಾಟಕ ಲೋಕಾಯುಕ್ತ (Karnataka Lokayukta) ಸಂಸ್ಥೆಯಲ್ಲಿ ಖಾಲಿಯಿರುವ ಗ್ರೂಪ್ ‘ಸಿ’ ವೃಂದದ ಕ್ಲರ್ಕ್-ಕಂ-ಟೈಪಿಸ್ಟ್ (Clerk cum Typist) ಹುದ್ದೆಗಳನ್ನು ನೇರ ನೇಮಕಾತಿಯಿಂದ ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯ https://lokayukta.kar.nic.in ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಪ್ರತ್ಯೇಕವಾಗಿ ಅಧಿಸೂಚನೆ ಪ್ರಕಟಿಸಲಾಗಿದ್ದು; ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ಉಳಿಕೆ ಮೂಲ ವೃಂದದ ಹುದ್ದೆಗಳು : 16
- ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಹುದ್ದೆಗಳು : 14
- ಒಟ್ಟು ಹುದ್ದೆಗಳು : 30
ವಿದ್ಯಾರ್ಹತೆ ಎಷ್ಟಿರಬೇಕು?
ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ನಿಗದಿಪಡಿಸಲಾಗಿದ್ದು; ಗರಿಷ್ಠ ವಯೋಮಿತಿಯನ್ಜ ಪ.ಜಾ/ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳು, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷಗಳು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳು 38 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕದ ವಿವರ
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕರಿಗೆ 250 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು; ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಪೂರ್ಣ ವಿವರ, ವರ್ಗವಾರು ವರ್ಗೀಕರಣ, ವೇತನ ಶ್ರೇಣಿ, ಅರ್ಜಿ ಶುಲ್ಕ ಪಾವತಿ, ಅರ್ಜಿ ಸಲ್ಲಿಕೆ ವಿವರಗಳ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 30-10-2024
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 29-11-2024
- ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ : 30-11-2024
ಅಧಿಸೂಚನೆ : Download
ಅಧಿಕೃತ ಜಾಲತಾಣ : lokayukta.kar.nic.in