JobsNews

ಗ್ರಾಮ ಪಂಚಾಯತಿ PDO ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… karnataka PDO Recruitment 2024 Age Relaxation

WhatsApp Group Join Now
Telegram Group Join Now

karnataka PDO Recruitment 2024 Age Relaxation : ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (Panchayat Development Officer – PDO) ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನಿಸಿದೆ.

ಸಿವಿಲ್ ಸೇವೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ಸಡಿಲಿಕೆ (Age Relaxation) ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ 247 ಪಿಡಿಒ ನೇಮಕಾತಿಗೆ (PDO Recruitment 2024 ) ಕೆಪಿಎಸ್‌ಸಿ ಮತ್ತೊಮ್ಮೆ ಅರ್ಜಿ ಆಹ್ವಾನಿಸಿದೆ. ಈ ಹಿಂದೆ ವಿವಿಧ ಕಾರಣಗಳಿಂದ ಅರ್ಜಿಸಲ್ಲಿಸಲು ಸಾಧ್ಯವಾಗದವರು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಕರ್ನಾಟಕ ಪಿಡಿಒ ನೇಮಕಾತಿ ಸಂಕ್ಷಿಪ್ತ ವಿವರ
  • ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ (KPSC)
  • ಹುದ್ದೆ ಹೆಸರು : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)
  • ಒಟ್ಟು ಹುದ್ದೆಗಳ ಸಂಖ್ಯೆ : 150+97=247
  • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಕರ್ನಾಟಕ ರಾಜ್ಯಾದ್ಯಂತ
ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ

ಭಾರತದ ಕಾನೂನಿನ್ವಯ ಸ್ಥಾಪಿಸಲ್ಪಟ್ಟ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಪಡೆವರು ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ನಿಗದಿಪಡಿಸಲಾಗಿದೆ. ಹೊಸ ವಯೋಮಿತಿ ಸಡಿಲಿಕೆಯಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷ, 2ಎ, 2ಬಿ, 3ಎ, 3ಬಿ ವರ್ಗದವರಿಗೆ 41 ವರ್ಷ, ಎಸ್‌ಸಿ, ಎಸ್ಟಿ, ಪ್ರವರ್ಗ-1 ವರ್ಗಗಳಿಗೆ 43 ವರ್ಷವನ್ನು ಸೂಚಿಸಲಾಗಿದೆ.

ಮಾಸಿಕ ಸಂಬಳ, ಸವಲತ್ತುಗಳೇನು?

ಗ್ರಾಮ ಆಡಳಿತದ ಬಹಮುಖ್ಯ ಕೊಂಡಿಯಾಗಿರುವ ಪಿಡಿಒ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಸರಕಾರ ಪಿಂಚಣಿ, ವೇತನ ಸಹಿತ ವಿವಿಧ ಸವಲತ್ತುಗಳನ್ನು ನಿಗದಿಪಡಿಸಿದೆ. 37,900 ರಿಂದ 70,850 ವರೆಗೂ ಪಿಡಿಒ ವೇತನ ಶ್ರೇಣಿ ಇರುತ್ತದೆ. ಆಕರ್ಷಕ ಪಿಂಚಣಿ ಸೌಲಭ್ಯ ಕೂಡ ಇರಲಿದೆ.

ಅರ್ಜಿ ಶುಲ್ಕದ ವಿವರ

ಪಿಡಿಒ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿ ನಿಗದಿಪಡಿಸಲಾಗಿದೆ. ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕವಿದೆ.

ಆದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿ೦ಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ :
    18-09-2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
    03-10-2024

ಅರ್ಜಿ ಸಲ್ಲಿಕೆ ಲಿಂಕ್ : Apply Now

WhatsApp Group Join Now
Telegram Group Join Now

Related Posts

error: Content is protected !!