AgricultureNews

ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಆರ್ಭಟ | ಹವಾಮಾನ ಮುನ್ಸೂಚನೆ Karnataka Weather Bhari Male

WhatsApp Group Join Now
Telegram Group Join Now

Karnataka Weather Bhari Male : ಮಳೆ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕೊಯ್ಲಿಗೆ ಬಂದಿರುವ ಹಲವು ಬೆಳೆಗಳು ಮಳೆಗೆ ನೆಲಕಚ್ಚಿವೆ. ರಾಜ್ಯದಲ್ಲಿ ಮುಂಗಾರು ಅವಧಿಯಲ್ಲಿ ಬಿತ್ತನೆಯಾದ ಬೆಳೆಗಳ ಪೈಕಿ ಅರ್ಧದಷ್ಟು ಫಸಲು ರೈತರ ಕೈ ಸೇರುವುದು ಅನುಮಾನ ಎನ್ನಲಾಗುತ್ತಿದೆ.

ಪೂರ್ವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ.

ಅಕ್ಟೋಬರ್ 19 ಮತ್ತು 20ರ ಶನಿವಾರ ಹಾಗೂ ಭಾನುವಾರಗಳಂದು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಅಕ್ಟೋಬರ್ 19ರಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಇನ್ನು ಅಕ್ಟೋಬರ್ 21 ಹಾಗೂ 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ksndmc) ಭಾರತೀಯ ಹವಾಮಾನ ಇಲಾಖೆ ಮಾಹಿತಿ ಆಧರಿಸಿ ನೀಡಿದ ಮಳೆ ಮಾಹಿತಿ ಈ ಕೆಳಗಿನಂತಿದೆ:

Karnataka Weather Bhari Male

ಅಕ್ಟೋಬರ್ 19 : ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹಲವೆಡೆ ಮಳೆಗುಡುಗು ಸಹಿತ ಮಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು, ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ.

ಅಕ್ಟೋಬರ್ 20 : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆ.

ಅಕ್ಟೋಬರ್ 21 : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ. ಶಿವಮೊಗ್ಗ, ದಾವಣಗೆರೆ, ಹಾಸನ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆ.

ಅಕ್ಟೋಬರ್ 22 : ಈ ದಿನ ಕರಾವಳಿ ಭಾಗದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ.

ಅಕ್ಟೋಬರ್ 23-24 : ಈ ದಿನ ಕರಾವಳಿ ಕರ್ನಾಟಕ ಭಾಗ ಹಾಗೂ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

WhatsApp Group Join Now
Telegram Group Join Now

Related Posts