Jobs

KPSC Recruitement 2024 : ಕೆಪಿಎಸ್‌ಸಿ ನೇಮಕಾತಿ ಹಂಗಾಮ | ವಿವಿಧ ಇಲಾಖೆಗಳಲ್ಲಿ 2500ಕ್ಕೂ ಹೆಚ್ಚು ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

KPSC Recruitement 2024 : ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2500ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಕೆಪಿಎಸ್‌ಸಿ ಇಂದ ನೇಮಕಾತಿಗೆ ಬಿಡುಗಡೆಯಾದ ಈ ಎಲ್ಲಾ ಇಲಾಖೆಯ ಹುದ್ದೆಗಳ ವಿವರ ಇಲ್ಲಿದೆ…

ಕರ್ನಾಟಕ ಲೋಕಸೇವಾ ಆಯೋಗವು ಕಳೆದ ಕೆಲವು ತಿಂಗಳುಗಳಿAದ ಉದ್ಯೋಗ ಆಕಾಂಕ್ಷಿಗಳಿಗೆ ಮತ್ತು ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಎರಡುವರೆ ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಪ್ರಕಟಿಸಿದೆ. ಈ ಲೇಖನದಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುತ್ತಿರುವ ವಿವಿಧ ಇಲಾಖೆಗಳ ನೇಮಕಾತಿಯ ಹುದ್ದೆಗಳ ವಿವರ ನೀಡಲಾಗಿದೆ.

ಸಾರಿಗೆ ಇಲಾಖೆಯ ನೇಮಕಾತಿ RTO inspector recruitment

RTO inspector recruitment ಕರ್ನಾಟಕ ಲೋಕಸೇವಾ ಆಯೋಗವು, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಇಲಾಖೆಯಲ್ಲಿ ಒಟ್ಟು 76 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಟೋಮೊಬೈಲ್ ವಿಷಯದಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿAಗ್ ಪದವಿ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 22 ರಿಂದ ಮೇ 21 ರವರೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Grama Panchayat PDO recruitment 2024 karnataka : ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ | ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ

ಕಂದಾಯ ಇಲಾಖೆ ನೇಮಕಾತಿ land surveyor recruitment

land surveyor recruitment ಕರ್ನಾಟಕ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತಹ ಒಟ್ಟು 364 ಭೂಮಾಪಕರ (land surveyor) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಪಡಿಸಲಾದ ಕನಿಷ್ಠ ವಿದ್ಯಾರ್ಹತೆಯು ದ್ವಿತೀಯ ಪಿಯುಸಿ ಸೈನ್ಸ್. ಈ ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಮಾರ್ಚ್ 11, 2024 ರಿಂದ ಏಪ್ರಿಲ್ 10, 2024ರ ವರೆಗೆ ಅವಕಾಶ ನೀಡಲಾಗಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇಮಕಾತಿ PDO Recruitement

PDO Recruitement ಬರೋಬ್ಬರಿ ಏಳು ವರ್ಷಗಳ ನಂತರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಕಲ್ಯಾಣ ಕರ್ನಾಟಕ ಸೇರಿ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿ ನಡೆಯಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಏಪ್ರಿಲ್ 15, 2024 ರಿಂದ ಮೇ 15, 2024ರ ವರೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Pradhan Mantri Awas Yojana 2024 : ಪ್ರಧಾನ ಮಂತ್ರಿ ಆವಾಸ್ ಯೋಜನೆ | ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ನೆರವು

400ಕ್ಕೂ ಅಧಿಕ ಗ್ರೂಪ್ ಸಿ ಹುದ್ದೆಗಳ ನೇಮಕಾತಿ Group C posts Recruitement

Group C posts Recruitement ಜಲ ಸಂಪನ್ಮೂಲ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 400ಕ್ಕೂ ಅಧಿಕ ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು (ಏPSಅ) ಪ್ರತ್ಯೇಕ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಏಪ್ರಿಲ್ 29, 2024 ರಿಂದ ಮೇ 28, 2024ರವರೆಗೆ ಅವಕಾಶ ನೀಡಲಾಗಿದೆ.

ಲೆಕ್ಕಪತ್ರ ಇಲಾಖೆಯಲ್ಲಿ 97 ಹುದ್ದೆಗಳ ನೇಮಕಾತಿ Accounts Department Recruitment

Accounts Department Recruitment ಕರ್ನಾಟಕ ಲೋಕಸೇವಾ ಆಯೋಗವು, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವಂತಹ Group A ಮತ್ತು Group B ಹುದ್ದೆಗಳನ್ನು ಸೇರಿ ಒಟ್ಟು 97 ಹುದ್ದೆಗಳಿಗೆ ನಿಮ್ ಕಥೆ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಸಹಾಯಕ ನಿಯಂತ್ರಕರು (Group A) 43 ಹುದ್ದೆಗಳು ಹಾಗೂ ಲೆಕ್ಕಪರಿಶೋಧನಾಧಿಕಾರಿ (Group B) 54 ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಮಾರ್ಚ್ 18 2024 ರಿಂದ ಏಪ್ರಿಲ್ 17 2024ರ ವರೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: 7th Pay Commission Basic Salary Increment Details : ಸರಕಾರಿ ನೌಕರರ ಸಂಬಳ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ Gazetted Probationer posts Recruitment

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದಾದರೂ ಅಂಗಿಕೃತ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು. ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಏಪ್ರಿಲ್ 4, 2024 ರಿಂದ ಅವಕಾಶ ನೀಡಲಾಗಿದೆ.

300ಕ್ಕೂ ಹೆಚ್ಚು ಗ್ರೂಪ್ ಬಿ ಹುದ್ದೆಗಳ ನೇಮಕಾತಿ Group B posts Recruitement

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ 327 ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಏಪ್ರಿಲ್ 15, 2024 ರಿಂದ ಮೇ 15, 2024 ರವರೆಗೆ ಅವಕಾಶ ನೀಡಲಾಗಿದೆ.

…ಈ ಮೇಲಿನ ಮಾಹಿತಿಯು ಕೇವಲ ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿದ ಖಾಲಿ ಹುದ್ದೆಗಳ ವಿವರ, ನೇಮಕಾತಿ ಇಲಾಖೆ ಮತ್ತು ಪ್ರಮುಖ ದಿನಾಂಕಗಳ ಸಂಕ್ಷಿಪ್ತ ಮಾಹಿತಿಯಾಗಿದೆ. ಅರ್ಜಿ ಸಲ್ಲಿಸುವಂತಹ ಅರ್ಹ ಅಭ್ಯರ್ಥಿಗಳು ನೇಮಕಾತಿಯ ಸಂಪೂರ್ಣ ವಿವರಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಕೆಪಿಎಸ್‌ಸಿ ಅಧಿಕೃತ ಜಾಲತಾಣ ಲಿಂಕ್ : https://kpsc.kar.nic.in

ಇದನ್ನೂ ಓದಿ: Farmers Loan Waiver : ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ

WhatsApp Group Join Now
Telegram Group Join Now

Related Posts

error: Content is protected !!