KPSC Veterinary Officer Recruitment 2024 : ಕರ್ನಾಟಕ ರಾಜ್ಯ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರಿಗೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ…
ಕರ್ನಾಟಕ ರಾಜ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 342+58 ಬ್ಯಾಕ್ಲಾಗ್ ಸೇರಿ ಒಟ್ಟು 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಈ ಹುದ್ದೆಗಳ ನೇಮಕಾತಿ ನಡೆಸಲಿದ್ದು; ಅರ್ಹ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಬೇಕಾಗುವ ಅರ್ಹತೆಗಳು
ಕನಿಷ್ಠ ಶೇ.50 ಅಂಕಗಳೊ೦ದಿಗೆ ಬಿ.ವಿ.ಎಸ್.ಸಿ ಅಥವಾ ಬಿ.ವಿ.ಎಸ್.ಸಿ ಮತ್ತು ಎ.ಹೆಚ್ ಪದವಿ ಹೊಂದಿರಬೇಕು. ಜೊತೆಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984ರ ಅಡಿಯಲ್ಲಿ IಗಿS ಅಥವಾ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು.
ವಯಸ್ಸಿನ ಅರ್ಹತೆಯನ್ನು ನೋಡುವುದಾದರೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು; ಸಾಮಾನ್ಯ ಅಭ್ಯರ್ಥಿಗಳು 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳು 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು 40 ವರ್ಷ ಗರಿಷ್ಠ ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ ವಿವರ
ಕರ್ನಾಟಕ ರಾಜ್ಯ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿ, ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳಿಗೆ 35 ರೂಪಾಯಿ ಪ್ರೋಸೆಸಿಂಗ್ ಚಾರ್ಜ್ ವಿಧಿಸಲಾಗಿದೆ.
ಆಯ್ಕೆ ವಿಧಾನ ಮತ್ತು ಸಂಬಳದ ವಿವರ
ಕರ್ನಾಟಕ ರಾಜ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಪಶುವೈದ್ಯಾಧಿಕಾರಿ ಹುದ್ದೆಗಳು ಪೂರ್ಣಾವಧಿ ಉದ್ಯೋಗವಾಗಿದ್ದು; ಈ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಮಾಸಿಕ 52,650 ರೂಪಾಯಿಂದ 97,100 ರೂಪಾಯಿ ವರೆಗೂ ಸಂಬಳ ಇರುತ್ತದೆ.
ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಆನಂತರ ಮೂಲ ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ:
12-08-2024 - ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:
12-09-2024
ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಕೆಳಗೆ ನೀಡಲಾಗಿದೆ. ಅದನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಓದಬಹುದು.