JobsNews

2,400 ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ ನೇಮಕಾತಿ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಭರ್ಜರಿ ಅವಕಾಶ KSRP IRB Constable Recruitment 2025

WhatsApp Group Join Now
Telegram Group Join Now

KSRP IRB Constable Recruitment 2025 : ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಪೊಲೀಸ್ ಇಲಾಖೆಯು ಕೆಎಸ್‌ಆರ್‌ಪಿ (Karnataka State Reserve Police – KSRP) ಬೆಟಾಲಿಯನ್‌ನಲ್ಲಿ ಒಟ್ಟು 2,400 ಕಾನ್ಸ್‌ಟೇಬಲ್‌ (Constable) ನೇಮಕಾತಿಗೆ ಮುಂದಾಗಿದ್ದು; ಇದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಆದೇಶ ಹೊರಡಿಸಿದೆ.

ಎರಡು ಹೊಸ ಬೆಟಾಲಿಯನ್ ಸ್ಥಾಪನೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸದ್ಯಕ್ಕೆ ಒಟ್ಟು 12 ಸಶಸ್ತ್ರ ಮೀಸಲು ಪಡೆ (KSRP) ಹಾಗೂ 2 ಐಆರ್‌ಬಿ (IRB Battalion) ಬೆಟಾಲಿಯನ್‌ಗಳಿವೆ. ಆದರೆ, ಭದ್ರತೆ ಹಾಗೂ ಪ್ರಾಕೃತಿಕ ವಿಪತ್ತು ಸೇರಿದಂತೆ ತುರ್ತು ಸಂದರ್ಭಗಳನ್ನು ನಿಭಾಯಿಸಲು ಮತ್ತಷ್ಟು ಬೆಟಾಲಿಯನ್’ಗಳ ಅಗತ್ಯವಿದ್ದು; ಹೊಸ ಬೆಟಾಲಿಯನ್ ಸ್ಥಾಪನೆ ಕೋರಿ ಕೆಎಸ್‌ಆರ್‌ಪಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ (KSRP ADGP Umesh Kumar) ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದೀಗ ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದೆ. ಇದಕ್ಕಾಗಿ ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಸಮೀಪ 100 ಎಕರೆ ಹಾಗೂ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನಲ್ಲಿ 50 ಎಕರೆ ಸ್ಥಳವನ್ನು ಗುರುತಿಸಿ ಮೀಸಲಿಡಲಾಗಿದ್ದು; ಇಲ್ಲಿ ತರಬೇತಿ ಹಾಗೂ ವಸತಿ ಸೇರಿ ಇತರೆ ಸೌಲಭ್ಯಗಳನ್ನು ಸಿಬ್ಬಂದಿಗಳಿಗೆ ಕಲ್ಪಿಸಲಾಗುತ್ತದೆ ಎಂದು ಎಡಿಜಿಪಿ ಉಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: SSLC ಪಾಸಾದವರಿಗೆ ಕೆಕೆಆರ್‌ಟಿಸಿ ಚಾಲಕ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | 150 ಹುದ್ದೆಗಳು KKRTC Driver and Technical Assistant Recruitment 2024

KSRP IRB Constable Recruitment 2025

2,400 ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ ನೇಮಕ

ಹೀಗೆ ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ ಎರಡು ಬೆಟಾಲಿಯನ್’ಗಳ ಪೈಕಿ ತಲಾ ಒಂದೊ೦ದು ಬೆಟಾಲಿಯನ್’ಗೆ ಒಬ್ಬೊಬ್ಬ ಕಮಾಂಡೆ೦ಟ್ ಸೇರಿ 1,200 ಪೊಲೀಸರಂತೆ ಒಟ್ಟು 2,400 ಪೊಲೀಸರ ನೇಮಕಾತಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಪೊಲೀಸ್ ಇಲಾಖೆಯು ಹೊಸ ಬೆಟಾಲಿಯನ್‌ಗಳಿಗೆ ನೇಮಕಾತಿ ಪ್ರಕ್ರಿಯೆ ಶುರು ಮಾಡಲಿದ್ದು, ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟಿಸಲಿದೆ.

ಯಾರಿಗೆಲ್ಲ ಅವಕಾಶ ಸಿಗಲಿದೆ?

ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು; ಬಹುದಿನಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ರಾಜ್ಯದಲ್ಲಿ ಆಗಾಗ ನಡೆಯುವ ಬಂದ್‌ಗಳು, ಪ್ರತಿಭಟನೆಗಳು, ಚುನಾವಣೆಗಳು ಹಾಗೂ ಗಣ್ಯರ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಬಂದೋಬಸ್ತ್ ಕೆಲಸಗಳಿಗೆ ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ ಬೆಟಾಲಿಯನ್ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಮನೆಮನೆಗೂ ಸೋಲಾರ್ ವಿದ್ಯುತ್ | ಬೆಸ್ಕಾಂ ಸೂಪರ್ ಸ್ಕೀಮ್ | ಕೂತಲ್ಲೇ ಗಳಿಸಿ ಭರ್ಜರಿ ಆದಾಯ Bescom Solar Rooftop Scheme

WhatsApp Group Join Now
Telegram Group Join Now

Related Posts