Local Bank Officers Recruitment 2024 : ಯಾವುದೇ ವಿಷಯದಲ್ಲಿ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಇಂಡಿಯನ್ ಬ್ಯಾಂಕ್’ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿ ಇಲ್ಲಿದೆ…
ಚೆನ್ನೈ ನಗರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಇಂಡಿಯನ್ ಬ್ಯಾಂಕ್, ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿದೆ. ಈ ಬ್ಯಾಂಕಿನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (Local Bank Officers) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಅರ್ಜಿ ಕರೆಯಲಾಗಿದೆ. ವಿಶೇಷವೆಂದರೆ ಈ ನೇಮಕಾತಿಗೆ ಅಭ್ಯರ್ಥಿಗಳು ಯಾವ ರಾಜ್ಯಕ್ಕೆ ಅರ್ಜಿ ಸಲ್ಲಿಸುತ್ತಾರವೊ, ಅದೇ ರಾಜ್ಯದಲ್ಲಿ ಅಭ್ಯರ್ಥಿಗಳಿಗೆ ಪೋಸ್ಟಿಂಗ್ ನೀಡಲಾಗುತ್ತದೆ.
ದೇಶಾದ್ಯಂತ ನಡೆಯುವ ಈ ನೇಮಕಾತಿಯಲ್ಲಿ ಕರ್ನಾಟಕಕ್ಕೂ ಹಲವು ಹುದ್ದೆಗಳ ಮೀಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆ ಪ್ರಕ್ರಿಯೆ ಹೇಗಿರಲಿದೆ? ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಮಾಹಿತಿ ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ನೇಮಕಾತಿ ಹುದ್ದೆಗಳ ವಿವರ
ದೇಶ್ಯಾದ್ಯಂತ ಒಟ್ಟು 300 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದ್ದು, ಅದರಲ್ಲಿ ಕರ್ನಾಟಕ ರಾಜ್ಯಕ್ಕೆ 35 ಹುದ್ದೆಗಳನ್ನು ಮೀಸಲಿಡಲಾಗಿದೆ. ರಾಜ್ಯವಾರು ಖಾಲಿ ಇಗುವ ಹುದ್ದೆಗಳ ವಿವರ ಈ ಕೆಳಗಿನಂತಿದೆ.
- ತಮಿಳುನಾಡು / ಪುದುಚೆರಿ : 160 ಹುದ್ದೆಗಳು
- ಕರ್ನಾಟಕ : 35 ಹುದ್ದೆಗಳು
- ಆಂಧ್ರಪ್ರದೇಶ & ತೆಲಂಗಾಣ : 50 ಹುದ್ದೆಗಳು
- ಮಹಾರಾಷ್ಟ್ರ : 40 ಹುದ್ದೆಗಳು
- ಗುಜರಾತ್ : 15 ಹುದ್ದೆಗಳು
ಶೈಕ್ಷಣಿಕ ಅರ್ಹತೆಗಳು ಹಾಗೂ ಇತರೆ ಅರ್ಹತೆಗಳು
ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು ಹಾಗೂ ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯನ್ನು ತಿಳಿದವರಾಗಿರಬೇಕು.
ಇನ್ನು ವಯೋಮಿತಿ ಅರ್ಹತೆಗಳು, ಅರ್ಜಿ ಸಲ್ಲಿಸುವವರು ಕನಿಷ್ಠ 20 ವರ್ಷದಿಂದ ಗರಿಷ್ಠ 30 ವರ್ಷದ ಒಳಗಿರಬೇಕು. ಮೀಸಲಾತಿ ವ್ಯಾಪ್ತಿ ವರ್ಗದ ಅಡಿಯಲ್ಲಿ ಬರುವವರಿಗೆ ಈ ಕೆಳಗಿನಂತೆ ಗರಿಷ್ಟ ವಯೋಮಿತಿಯಲ್ಲಿ ವಯೋ ಸಡಿಲಿಕೆ ನೀಡಲಾಗುತ್ತದೆ.
- SC, ST ವರ್ಗದವರಿಗೆ : 05 ವರ್ಷ
- OBC ವರ್ಗದವರಿಗೆ : 03 ವರ್ಷ
- ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 05 ವರ್ಷ
ಮಾಸಿಕ ವೇತನ ಮತ್ತು ಆಯ್ಕೆ ಪ್ರಕ್ರಿಯೆ
ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ – ಸ್ಥಳೀಯ ಬ್ಯಾಂಕ್ ಅಧಿಕಾರಿಯಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನವು 48,480 ರೂ. ಯಿಂದ 85,920 ರೂ. ವರೆಗೆ ವೇತನ ಇರಲಿದೆ. ವೇತನದ ಜೊತೆಗೆ ಇತರೆ ಹಲವು ಸೌಲಭ್ಯಗಳನ್ನು ಕೂಡ ನೀಡಲಾಗುವುದು.
ಮೊದಲು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ತದನಂತರದಲ್ಲಿ ಅಭ್ಯರ್ಥಿಗಳಿಗೆ 200 ಅಂಕಗಳಿಗೆ ಲಿಖಿತ ಅಥವಾ ಆನ್ಲೈನ್ ಪರೀಕ್ಷೆಯನ್ನು ನಡೆಸಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಡಲಾಗುವುದು.
ಆನ್ಲೈನ್ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ ಬರೆಯಲು ಕನ್ನಡಿಗರಿಗೆ ಅವಕಾಶವಾಗುವಂತೆ ಪರೀಕ್ಷೆ ಕೇಂದ್ರಗಳನ್ನು ಕರ್ನಾಟಕದಲ್ಲಿ ಕೂಡ ಅವಕಾಶ ಮಾಡಿಕೊಡಲಾಗಿದ್ದು ಬೆಂಗಳೂರು ಮತ್ತು ಹುಬ್ಬಳ್ಳಿ ನಗರವನ್ನು ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು.
ಅರ್ಜಿ ಶುಲ್ಕ
- ಎಸ್.ಸಿ, ಎಸ್.ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : 175 ರೂ.
- ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ : 1,000 ರೂ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ :
13-08-2024 - ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಕೊನೆಯ ದಿನಾಂಕ :
02-09-2024
ಅಧಿಸೂಚನೆ : Download
ಅರ್ಜಿ ಸಲ್ಲಿಸುವ ಲಿಂಕ್ : Apply Now