NewsSchemes

Moulana Azad model school application : ಮೌಲಾನಾ ಆಜಾದ್ ಉಚಿತ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ 12 ಸಾವಿರ ಮಕ್ಕಳಿಗೆ ಅವಕಾಶ

WhatsApp Group Join Now
Telegram Group Join Now

Moulana Azad model school application : 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 6ನೇ ತರಗತಿಗೆ ಕರ್ನಾಟಕ ಸರ್ಕಾರದ ಮೌಲಾನ ಆಜಾದ್ ಮಾದರಿ ಶಾಲೆಗಳಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶಾತಿ ಪಡೆಯಲು ಒಟ್ಟು 12 ಸಾವಿರ ಸೀಟುಗಳಿಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಮತ್ತು ಸಹಾಯವಾಣಿ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: BPNL Recruitment 2024 : SSLC, PUC ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ 1125 ಹುದ್ದೆಗಳ ಬೃಹತ್ ನೇಮಕಾತಿ : ವೇತನ ₹43,500

ಅರ್ಜಿ ಸಲ್ಲಿಸಲು ಯಾರು ಅರ್ಹರು?

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೌಲಾನಾ ಆಜಾದ್ ಮಾದರಿ ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳ ವಯೋಮಿತಿಯು 09 ವರ್ಷದಿಂದ 13 ವರ್ಷದ ಒಳಗಿರಬೇಕು.

ಮೇಲ್ಕಾಣಿಸಿದ ಸಮುದಾಯಗಳ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಪ್ರಸ್ತುತ 5ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ₹2,50,000 ಒಳಗಿರಬೇಕು.

ಆಯ್ಕೆ ವಿಧಾನ? Selection procedure

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ 100 ಅಂಕಗಳ ಪ್ರವೇಶಾತಿ ಪರೀಕ್ಷೆ ನಡೆಸಲಾಗುವುದು. ಈ ಪ್ರವೇಶಾತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Farmers Loan Waiver : ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  • ವಿದ್ಯಾರ್ಥಿಯ ಭಾವಚಿತ್ರ
  • 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ SATS ಸಂಖ್ಯೆ
  • ಆದಾಯ ಪ್ರಮಾಣ ಪತ್ರ
  • ವ್ಯಾಸಂಗ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

ಅರ್ಜಿ ಸಲ್ಲಿಸುವುದು ಹೇಗೆ?

ನಾವು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಗದಿತ ದಿನಾಂಕದ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ, ನಿಖರವಾದ ಮಾಹಿತಿಯನ್ನು ಭರ್ತಿ ಮಾಡಿ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 15-03-2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14-04-2024

ಅರ್ಜಿ ಸಲ್ಲಿಕೆ ಪ್ರಮುಖ ಲಿಂಕುಗಳು

  • ಪ್ರವೇಶಾತಿ ಅಧಿಸೂಚನೆ : Download
  • ಅರ್ಜಿ ಸಲ್ಲಿಸುವ ಜಾಲತಾಣದ ಲಿಂಕ್ : Apply Now

ಇದನ್ನೂ ಓದಿ: krushi bhagya scheme 2024 : ಕೃಷಿಭಾಗ್ಯ ಯೋಜನೆ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

Related Posts

error: Content is protected !!