Mysore District Granthalaya Melvicharakara Nemakati 2024 : ರಾಜ್ಯದ ವಿವಿಧ ಜಿಲ್ಲಾ ಪಂಚಾಯತಿ ವತಿಯಿಂದ ಆಯಾ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ (Library Supervisor) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಿದೆ.
ಇದೀಗ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾ (Mysore Zilla Panchayat) ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪಿಯುಸಿ (PUC) ಪೂರ್ಣಗೊಳಿಸಿರುವವರು, ಕನಿಷ್ಠ 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ, ವೇತನ ವಿವರ
ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಇದೇ ಅಕ್ಟೋಬರ್ 30, 2024ಕ್ಕೆ ಅನ್ವಯವಾಗುವಂತೆ 18 ವರ್ಷದಿಂದ 35 ವರ್ಷದೊಳಗಿರಬೇಕು. ಎಸ್ಸಿ/ಎಸ್ಟಿ/ಕ್ಯಾಟಗರಿ-1 ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಸಂಸ್ಥೆಯ ನಿಯಮಾನುಸಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಪಿಯುಸಿ ಹಾಗೂ ಲೈಬ್ರರಿ ಸೈನ್ಸ್’ನಲ್ಲಿ ಪ್ರಮಾಣೀಕರಣ ಕೋರ್ಸ್ ಪೂರ್ಣಗೊಳಿಸಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್’ನಲ್ಲಿ ಉತ್ತೀರ್ಣರಾಗಿರಬೇಕು.
ಹುದ್ದೆ ವಿವರಗಳ ವಿವರ
ಮೈಸೂರು ಜಿಲ್ಲೆಯ ಒಟ್ಟು 19 ಗ್ರಾಮ ಪಂಚಾಯತಿಗಳ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಮೈಸೂರು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಗ್ರಾಮ ಪಂಚಾಯತಿಗಳ ವಿವರ ಈ ಕೆಳಗಿನಂತಿದೆ:
ಆಲನಹಳ್ಳಿ, ಆವರ್ತಿ, ಚಿಕ್ಕಬೀಚನಹಳ್ಳಿ, ಚಿಲ್ಕುಂದ, ದೊಡ್ಡಕಮರವಳ್ಳಿ, ಗಾವಡಗೆರೆ, ಹನಸೋಗೆ, ಹರದನಹಳ್ಳಿ, ಹಿಟ್ಟೆಹೆಬ್ಬಾಗಿಲು, ಹೊಮ್ಮರಗಳ್ಳಿ, ಹೊಸಹೊಳಲು, ಕಡೇಮನುಗನಹಳ್ಳಿ, ಕಿರಂಗೂರು, ಕುಪ್ಯಾ, ಮೋದೂರು, ಮುಂಜನಹಳ್ಳಿ, ಎನ್.ಶೆಟ್ಟಿಹಳ್ಳಿ, ಪಡುಕೋಟೆಕಾವಲ್ ಗ್ರಾ.ಪಂಗಳಲ್ಲಿ ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಕೆ ಹೇಗೆ?
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಬುಲೇಯಾರ್ಡ್ ರಸ್ತೆ, ಚಾಮರಾಜಪುರಂ, ಮೈಸೂರು ಇವರ ಕಚೇರಿಯ ವೆಬ್‌ಸೈಟ್ ವಿಳಾಸದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರಲಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಕೆಯ ವೆಬ್‌ಸೈಟ್ ಲಿಂಕ್ ಕೆಳಗಿದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
30-10-2024
ಅಧಿಸೂಚನೆ : Download
ಅರ್ಜಿ ಸಲ್ಲಿಕೆ ಲಿಂಕ್ : Apply Now