ಸರಕಾರಿ ಯೋಜನೆ

ಸ್ವಯಂ ಉದ್ಯೋಗಕ್ಕೆ 2 ಲಕ್ಷ ರೂಪಾಯಿ ಸಾಲ ಸೌಲಭ್ಯ | ಜನವರಿ 17ರ ಒಳಗೆ ಅರ್ಜಿ ಸಲ್ಲಿಸಿ | Self Employed Personal Loan Scheme

WhatsApp Group Join Now
Telegram Group Join Now

ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸುವ ಮಹತ್ವಾಕಾಂಕ್ಷೆಯುಳ್ಳ ನಿರುದ್ಯೋಗಿಗಳಿಗೆ ಸರಕಾರವು ಸಾಲ ಒದಗಿಸುತ್ತಿದೆ. ಈ ಸಾಲಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸಬ್ಸಿಡಿ ಎಷ್ಟು? ಸಾಲ ಪಡೆಯುವುದು ಹೇಗೆ? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ…

ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸುವ ಮಹತ್ವಾಕಾಂಕ್ಷೆಯುಳ್ಳ ನಿರುದ್ಯೋಗಿಗಳಿಗೆ ಸರಕಾರ ಹಲವು ಸಾಲ ಯೋಜನೆಗಳನ್ನು ಹಮ್ಮಿಕೊಂಡಿದೆ. ವಿವಿಧ ನಿಗಮಗಳ ಮೂಲಕ ಈ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು; ನಿರುದ್ಯೋಗಿ ಯುವಕರು ಇದನ್ನು ಸದ್ಭಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಿನ್ನಲೆಯಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಅರ್ಹ ನಿರುದ್ಯೋಗಿಗಳು ಎರಡು ಲಕ್ಷ ರೂಪಾಯಿ ವರೆಗೂ ಸಾಲ ಪಡೆಯಬಹುದು.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸದರಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ತಾವು ಕೈಗೊಳ್ಳುವ ಸ್ವಯಂ ಉದ್ಯೋಗದ ಘಟಕ ವೆಚ್ಚಕ್ಕೆ ಅನುಗುಣವಾಗಿ 50,000 ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಆರ್ಥಿಕ ನೆರವು ಪಡೆಯಬಹುದು. ಇದರಲ್ಲಿ ಗರಿಷ್ಠ ಶೇ.೧೫ ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಾಲ ಮರುಪಾವತಿಸಬಹುದು.

ಯಾರೆಲ್ಲ ಅರ್ಹರು?

ಹೆಸರೇ ಹೇಳುವಂತೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯು ಹಿಂದುಳಿದ ವರ್ಗಗಳ ಉದ್ಯೋಗಾಕಾಂಕ್ಷಿಗಳಿಗೆ ಮೀಸಲಾಗಿದ್ದು; ಈ ಯೋಜನೆಯಡಿ ಸಾಲ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಳ್ಳ, ಹಟ್ಟಿಗೊಲ್ಲ, ಮರಾಠ ಮತ್ತು ಇವುಗಳ ಉಪ ಸಮುದಾಯಗಳು ಈ ಯೋಜನೆಗೆ ಅರ್ಹವಲ್ಲ.

ಬಹುಮುಖ್ಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಈ ಹಿಂದೆ ಈಗಾಗಲೇ ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು. ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000, ಪಟ್ಟಣ ಪ್ರದೇಶದವರಿಗೆ ರೂ.1,20,000ಗಳ ಮಿತಿಯಲ್ಲಿರಬೇಕು. ಮೇಲ್ಕಾಣಿಸಿದ ಪ್ರವರ್ಗ ಹಾಗೂ ವಾರ್ಷಿಕ ವರಮಾನವುಳ್ಳ 18 ರಿಂದ 55 ವರ್ಷಗಳ ವಯೋಮಿತಿಯ ಅಭ್ಯರ್ಥಿಗಳು ಈ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: SSLC ಪಾಸಾದವರಿಂದ ರೈಲ್ವೇ ಇಲಾಖೆಯ 4,103 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಎಲ್ಲಿ?

ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು, ಎರಡಕ್ಕೂ ಹೊಂದಾಣಿಕೆಯಾಗಬೇಕು.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 17 ಕೊನೆಯ ದಿನವಾಗಿದೆ.

ಡಿ.ದೇವರಾಜ ಅರಸು ನಿಗಮದ ವೆಬ್‌ಸೈಟ್ https://dbcdc.karnataka.gov.in/ ಅಥವಾ ನಿಗಮದ ಕೇಂದ್ರ ಕಚೇರಿ ಸಹಾಯವಾಣಿ ಸಂಖ್ಯೆ: 080-22374832 ಅಥವಾ ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಿ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಭಿಯಾನ ಶುರು

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!