ಸರಕಾರಿ ಯೋಜನೆ

ಈ ಕಾರ್ಡ್ ಇದ್ದರೆ 3 ಲಕ್ಷ ರೂಪಾಯಿ ಸಾಲ ಗ್ಯಾರಂಟಿ | Kisan Credit Card Loan Scheme

WhatsApp Group Join Now
Telegram Group Join Now

ಸಣ್ಣ ರೈತರಿಗೆ ಸಾಲ ನೀಡಲು ಕೇಂದ್ರ ಸರ್ಕಾರ ಬ್ಯಾಂಕ್‌ಗಳ ಮೂಲಕ ಕೊಡುವ ಈ ಕಾರ್ಡ್ ಮೇಲೆ ಕೃಷಿಗಾಗಿ 3 ಲಕ್ಷ ರೂಪಾಯಿ ಹೈನುಗಾರಿಕೆ, ಕುರಿ-ಮೇಕೆ, ಕೋಳಿ, ಮೀನು ಸಾಕಣೆಗಾಗಿ 2 ಲಕ್ಷ ರೂಪಾಯಿ ವರೆಗೆ ಸಾಲ ಪಡೆಯಬಹುದು. ಈ ಕಾರ್ಡ್ ಪಡೆಯುವ ಕುರಿತ ಮಾಹಿತಿ ಇಲ್ಲಿದೆ…

ರೈತರನ್ನು ಸಾಧ್ಯವಾದಷ್ಟು ಮಟ್ಟಿಗೆ ಸಾಲದಿಂದ ಸಂರಕ್ಷಿಸುವ ಸದುದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳು ಹಲಬಗೆಯ ಸಾಲ ಯೋಜನೆಗಳನ್ನು ಜಾರಿಗೊಳಿಸಿವೆ. ಇತ್ತೀಚೆಗೆ ಇಂತಹ ಸಾಲ ಯೋಜನೆಗಳ ಪಟ್ಟಿಗೆ ಕಿಸಾನ್ ಕ್ರೇಡಿಟ್ ಕಾರ್ಡ್ ಕೂಡ ಸೇರ್ಪಡೆಯಾಗಿದೆ. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಸಾಲ ನೀಡಲು ಕೇಂದ್ರ ಸರ್ಕಾರ ಈ ಕ್ರೆಡಿಟ್ ಕಾರ್ಡ್ ನೀಡುತ್ತದೆ. ಈ ಕಾರ್ಡ್ ಅಡಿಯಲ್ಲಿ ಒಬ್ಬ ರೈತ ಕೃಷಿಗಾಗಿ 3 ಲಕ್ಷ ರೂಪಾಯಿ ವರೆಗೆ ಸಾಲವನ್ನು ಪಡೆಯಬಹುದು. ಈ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುವುದು.

ಇದನ್ನೂ ಓದಿ: SSLC ಪಾಸಾದವರಿಗೆ 4,237 ಸರಕಾರಿ ಬಸ್ ಕಂಡಕ್ಟರ್ ಹುದ್ದೆಗಳು | BMTC And KKRTC Bus Conductor Recruitment 2024

ರೈತರ ಜೊತೆಗೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಮಾಡುವವರು ಸಹ ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕೃಷಿ ಭೂಮಿ ಹೊಂದಿರುವುದು ಕೂಡ ಕಡ್ಡಾಯವಲ್ಲ. ಪಶುಸಂಗೋಪನೆ ಅಥವಾ ಮೀನುಗಾರಿಕೆಗಾಗಿ ಶೇಕಡಾ 4ರ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿ ವರೆಗೆ ಸಾಲವನ್ನು ಪಡೆಯಬಹುದು.

ರೈತರು ಈ ಕ್ರೆಡಿಟ್ ಕಾರ್ಡ್ ಅನ್ನು ಯಾವುದೇ ಬ್ಯಾಂಕಿನಿಂದ ತೆಗೆದುಕೊಂಡು ಕೃಷಿ ಸಾಲ ಪಡೆದು ಮರುಪಾವತಿ ಮಾಡಬಹುದು. ಮಾಲೀಕರು ಅಥವಾ ಜಂಟಿಯಾಗಿ ಕೃಷಿ ಹೊಂದಿರುವ ರೈತರು, ಹಿಡುವಳಿದಾರ ರೈತರು, ಸ್ವಸಹಾಯ ಗುಂಪುಗಳು, ಜಂಟಿ ಹೊಣೆಗಾರಿಕೆ ಗುಂಪುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳಬಹುದು. ಸಾಲಗಾರನ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು. ಗರಿಷ್ಠ ವಯಸ್ಸು 75 ವರ್ಷಗಳು. ಹಿರಿಯ ನಾಗರಿಕರು ತಮ್ಮ ಕಾನೂನುಬದ್ಧ ಉತ್ತರಾಧಿಕಾರಿಗಳನ್ನು ಸಹ-ಸಾಲಗಾರರನ್ನಾಗಿ ಸೇರಿಸಿಕೊಳ್ಳಬೇಕು.

ಇದನ್ನೂ ಓದಿ: Cylinder booking offer : ಕಮ್ಮಿ ಬೆಲೆಗೆ ಗ್ಯಾಸ್ ಸಿಲಿಂಡರ್ ಬೇಕೆ? ಹೀಗೆ ಬುಕ್ ಮಾಡಿದರೆ ಸಿಗಲಿದೆ ರಿಯಾಯಿತಿ Amazon pay offer

ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವ ಬ್ಯಾಂಕುಗಳು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಎಲ್ಲಾ ಬ್ಯಾಂಕ್‌ಗಳು ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ನೀಡುತ್ತವೆ. ಬಡ್ಡಿ ದರಗಳು ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಬದಲಾಗುತ್ತವೆ. ಸಂಸ್ಕರಣಾ ಶುಲ್ಕಗಳು ಮತ್ತು ವಿಮಾ ಪ್ರೀಮಿಯಂ ಸಹ ಅನ್ವಯಿಸುತ್ತದೆ.

ಸಾಲ ಪಡೆದ ರೈತರಿಗೆ ಬ್ಯಾಂಕ್‌ಗಳು ಮರುಪಾವತಿಯ ಗಡುವನ್ನು ಸೂಚಿಸುತ್ತವೆ. ಬೆಳೆ ಕಟಾವು ಮತ್ತು ಮಾರುಕಟ್ಟೆಯಂತಹ ಅಂಶಗಳನ್ನು ಪರಿಗಣಿಸಿ ಬ್ಯಾಂಕುಗಳು ಮರುಪಾವತಿ ಅವಧಿಯನ್ನು ನಿರ್ಧರಿಸುತ್ತವೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ವಿಮೆ ಕೂಡ ಲಭ್ಯವಿದೆ. ಸಾಲಗಾರರು ವೈಯಕ್ತಿಕ ಅಪಘಾತ ವಿಮೆ ಮತ್ತು ಆರೋಗ್ಯ ವಿಮೆಯನ್ನು ಸಹ ತೆಗೆದುಕೊಳ್ಳಬಹುದು.

ಇದನ್ನೂ ಓದಿ:  PhonePe, Google pya, Paytm ಮೂಲಕ ಬೇರೆಯವರಿಗೆ ತಪ್ಪಾಗಿ ಹಣ ಕಳಿಸಿದರೆ ವಾಪಾಸು ಪಡೆಯುವುದು ಹೇಗೆ? Online Money Transaction

ಕಿಸಾನ್ ಕ್ರೆಡಿಟ್ ಅನುಕೂಲಗಳೇನು?

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರು 1.60 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿ ತನಕ ಸಾಲ ಪಡೆಯಬಹುದು. ಸಾಲ ಪಡೆದವರಿಗೆ ಅಪಘಾತ ವಿಮೆ ಹಾಗೂ ಆರೋಗ್ಯ ವಿಮೆ ಸೌಲಭ್ಯವಿದೆ. ಅಪಘಾತದಿಂದ ಅಂಗವೈಕಲ್ಯ ಅಥವಾ ಮೃತ್ಯುವಾದರೆ 50,000 ರೂಪಾಯಿ ಹಾಗೂ ಇತರ ಸಂದರ್ಭಗಳಲ್ಲಿ 25,000 ರೂಪಾಯಿ ವಿಮೆ ಸೌಲಭ್ಯವಿದೆ. ಬ್ಯಾಂಕಿನಿಂದ ನಗದು ವಿತ್ ಡ್ರಾಗೆ ಪಾಸ್ ಬುಕ್ ನೀಡಲಾಗುತ್ತದೆ.

25,000 ರೂಪಾಯಿ ನಗದು ಮಿತಿಯೊಂದಿಗೆ ಚೆಕ್ ಬುಕ್ ವಿತರಿಸಲಾಗುತ್ತದೆ. ರುಪೇ ಕ್ರೆಡಿಟ್ ಕಾರ್ಡ್ ಕೂಡ ನೀಡಲಾಗುತ್ತದೆ. ಸಾಲದ ಹಣದಲ್ಲಿ ರೈತರು ಬೀಜಗಳು, ರಾಸಾಯನಿಕಗಳು ಹಾಗೂ ಕೃಷಿ ಉಪಕರಣಗಳನ್ನು ಖರೀದಿಸಬಹುದು. ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಕ್ರೆಡಿಟ್ ಮಿತಿ ಹೆಚ್ಚಳ ಮಾಡಲಾಗುತ್ತದೆ. ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಬಡ್ಡಿದರಗಳ ಮೇಲೆ ಸಬ್ಸಿಡಿ ಕೂಡ ನೀಡಲಾಗುತ್ತದೆ. ಸಾಲ ಮೂರು ವರ್ಷಗಳ ಅವಧಿಗೆ ಲಭ್ಯವಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಬೇಕಾಗುವ ದಾಖಲೆಗಳು

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಆಧಾರ್ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್ ಮುಂತಾದ ದಾಖಲೆಗಳು ಕಡ್ಡಾಯವಾಗಿದೆ. ಕಂದಾಯ ಅಧಿಕಾರಿಗಳು ದೃಢೀಕರಿಸಿದ ದಾಖಲೆಗಳು, ಇತರ ಭದ್ರತಾ ದಾಖಲೆಗಳು, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಸಹ ಕಡ್ಡಾಯವಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಹೇಗೆ?

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವು ಮೇಲ್ಕಾಣಿಸಿದ ಬ್ಯಾಂಕ್‌ನ ವೆಬ್‌ಸೈಟ್‌ಗೆ ಭೇಟಿ ನೀಡಿ. ಆಯ್ಕೆಗಳ ಪಟ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಆರಿಸಿಕೊಳ್ಳಿ. ಅನ್ವಯಿಸು/apply ಕ್ಲಿಕ್ ಮಾಡಿ ಮತ್ತು ವೆಬ್‌ಸೈಟ್ ನಿಮ್ಮನ್ನು ಅಪ್ಲಿಕೇಶನ್ ಪುಟಕ್ಕೆ ಕರೆದೊಯ್ಯುತ್ತದೆ. ಅಗತ್ಯವಿರುವ ವಿವರಗಳೊಂದಿಗೆ ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು Submit ಮಾಡಿ. ಹಾಗೆ ಮಾಡಿದಾಗ ಅರ್ಜಿಯ ಉಲ್ಲೇಖ ಸಂಖ್ಯೆಯನ್ನು ಕಳುಹಿಸಲಾಗುತ್ತದೆ. ನೀವು ಅರ್ಹರಾಗಿದ್ದರೆ, ಮುಂದಿನ ಪ್ರಕ್ರಿಯೆಗಾಗಿ 3-4 ಕೆಲಸದ ದಿನಗಳಲ್ಲಿ ಬ್ಯಾಂಕ್‌ನಿಂದ ನಿಮಗೆ ಕರೆ ಬರುತ್ತದೆ.

ಇದನ್ನೂ ಓದಿ: ಹೈನುಗಾರಿಕೆ, ಮೀನುಗಾರಿಕೆ, ಕುರಿ-ಮೇಕೆ-ಕೋಳಿ ಸಾಕಣೆಗೆ ಗರಿಷ್ಠ ₹3 ಲಕ್ಷ ಸಾಲ | Pashu Kisan Credit Card Yojana (PKCC)

ಕೃಷಿ, ಪಶುಪಾಲನೆ, ತೋಟಗಾರಿಕೆ, ಕೃಷಿ ಸಂಬಂಧಿತ ಯೋಜನೆಗಳ ನಿರಂತರ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!