ಉದ್ಯೋಗ

Anganwadi Teacher Job Karnataka : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

Anganwadi Teachers Job Karnataka

ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದು.

ವಯೋಮಿತಿ ಎಷ್ಟಿರಬೇಕು? : ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ವಿದ್ಯಾರ್ಹತೆ ಎಷ್ಟು? : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ PUC ತೇರ್ಗಡೆ ಹೊಂದಿರಬೇಕು. SSLCಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

ಇದನ್ನೂ ಓದಿ: Home Guards Karnataka : 247 ಸ್ವಯಂ ಸೇವಕ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ ಪಾಸಾಗಿದ್ದರೆ ಅರ್ಜಿ ಸಲ್ಲಿಸಿ…

ಇವರಿಗೆ ಪ್ರಥಮ ಆದ್ಯತೆ

ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ‘ಸರ್ಕಾರದ ಅಂಗೀಕೃತ ಸಂಸ್ಥೆಗಳಿ೦ದ DSERT ಯಿಂದ ECCE ಡಿಪ್ಲೊಮಾ ಕೋರ್ಸ್ JOC ಕೋರ್ಸ್, NTT  ಕೋರ್ಸ್’ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬ೦ಧಿಸಿದ೦ತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡಲಾಗುತ್ತದೆ.

ಇದರ ಜತೆಗೆ ಇಲಾಖೆಯ ಸುಧಾರಣಾ ಸಂಸ್ಥೆ / ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು, ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ವಿಧವೆಯರು, ಶೇ.40ಕ್ಕಿಂತ ಕಡಿಮೆ ದೈಹಿಕ ಅಂಗವಿಕಲತೆ ಹೊಂದಿದವರಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ +5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: 10ನೇ ತರಗತಿ ಪಾಸಾದವರಿಗೆ ₹50 ಸಾವಿರಕ್ಕೂ ಹೆಚ್ಚು ಸಂಬಳದ ಸರ್ಕಾರಿ ನೌಕರಿ | ಈಗಲೇ ಅರ್ಜಿ ಸಲ್ಲಿಸಿ | Yadgiri district court recruitment 2024

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು

 • ನಿಗದಿತ ಅರ್ಜಿ ನಮೂನೆ (ಆನ್‌ಲೈನ್)
 • ಜನನ ಪ್ರಮಾಣ ಪತ್ರ
 • ಜನ್ಮ ದಿನಾಂಕ ಇರುವ SSLC ಅಂಕಪಟ್ಟಿ
 • ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
 • ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
 • ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
 • ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ
 • ಅಂಗವಿಕಲತೆ ಪ್ರಮಾಣಪತ್ರ
 • ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
 • ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
 • ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಮ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
 • ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
 • ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ/ ರೇಷನ್ ಕಾರ್ಡ್/ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ

ಇದನ್ನೂ ಓದಿ: Indian airforce agniveer recruitment 2024 : PUC ಪಾಸಾದವರಿಗೆ ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಆಹ್ವಾನ | 40,000 ರೂಪಾಯಿ ಸಂಬಳ | 3,500ಕ್ಕೂ ಹೆಚ್ಚು ಹುದ್ದೆಗಳು

ಈ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನ

ಸದ್ಯ ಬೀದರ್ ವ್ಯಾಪ್ತಿಯಲ್ಲಿ 31 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 65 ಅಂಗನವಾಡಿ ಸಹಾಯಕಿಯರು ಸೇರಿ ಒಟ್ಟು 96 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಮಹಿಳೆಯರು ಫೆಬ್ರವರಿ 5, 2024ರ ಸಂಜೆ 5ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬೀದರ್ ಬ್ಯಾಂಕ್ ಕಾಲೊನಿ ರಸ್ತೆ, ರಾಂಪೂರೆ ಕಾಲೊನಿ, ಬೀದರ್, ದೂರವಾಣಿ: 08482-233115 ಅವರನ್ನು ಸಂಪರ್ಕಿಸಬಹುದಾಗಿದೆ.

ಇತ್ತ ತುಮಕೂರು ಜಿಲ್ಲೆ ಕೊರಟಗೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿವಿಧ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆ, ಮಿನಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೊರಟಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರವಾಣಿ : 08138-232315 ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಹೇಗೆ? : ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 👉 ಇಲ್ಲಿ ಕ್ಲಿಕ್ ಮಾಡಿ…

ಇದನ್ನೂ ಓದಿ: Government Business Loan Schemes : ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು | 10 ಲಕ್ಷದಿಂದ 1 ಕೋಟಿ ತನಕ ಸಾಲ

ಇದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಸ್ಥಳೀಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕ ಪ್ರಕ್ರಿಯೆ ಕುರಿತ ಸಂಪೂರ್ಣ ಗೈಡ್‌ಲೈನ್ ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಲೇಬರ್ ಕಾರ್ಡ್ ಅರ್ಜಿ ಆರಂಭ | ಈ ಕಾರ್ಡ್ ಇದ್ದರೆ ಸಿಗಲಿವೆ ಹಲವು ಸೌಲಭ್ಯ Karnataka Labour card application online 2024

WhatsApp Group Join Now
Telegram Group Join Now

Related Posts

error: Content is protected !!