ಉದ್ಯೋಗ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ನೇಮಕ | 10 ಮತ್ತು 8ನೇ ತರಗತಿ ಪಾಸಾದವರಿಗೆ ಅವಕಾಶ | ಸರಕಾರದ ತುರ್ತು ಆದೇಶ | Anganwadi Recruitment 2023

WhatsApp Group Join Now
Telegram Group Join Now

ರಾಜ್ಯದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು; ನೇಮಕಕ್ಕೆ ಸರಕಾರ ತುರ್ತು ಆದೇಶ ಹೊರಡಿಸಿದೆ. ನೇಮಕ ಪ್ರಕ್ರಿಯೆ ಹೇಗೆ? ನೇರ ಅರ್ಜಿ ಸಲ್ಲಿಕೆ ಹೇಗೆ? ವಿದ್ಯಾರ್ಹತೆ, ವಯೋಮಿತಿ ಏನು? ಸಂಬಳ, ಸೌಲತ್ತುಗಳೇನು?  ಸಮಗ್ರ ಮಾಹಿತಿ ಇಲ್ಲಿದೆ….

ರಾಜ್ಯದ ಅನೇಕ ಗ್ರಾಮಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಇನ್ನು ಕೆಲವು ಗ್ರಾಮಗಳಲ್ಲಿ ಹೊಸ ಅಂಗನವಾಡಿಗಳು ಆರಂಭವಾಗಿದ್ದು; ಅವುಗಳಿಗೆ ಸೂಕ್ತ ಸಿಬ್ಬಂದಿ ಇಲ್ಲದೇ ಸಕ್ರೀಯವಾಗಿ ನಡೆಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ತುರ್ತು ಆದೇಶ ಹೊರಡಿಸಿದೆ. ನೇರ ಅರ್ಜಿ ಸ್ವೀಕರಿಸಿ ನೇಮಕ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರಕಾರದ ಆಧೀನ ಕಾರ‍್ಯದರ್ಶಿ ಕಳೆದ ಫೆಬ್ರವರಿ 10, 2023ರಂದು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ವಿದ್ಯಾರ್ಹತೆ, ವಯೋಮಿತಿ ಏನು?

ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ಆಕಾಂಕ್ಷಿಗಳು ಕಡ್ಡಾಯವಾಗಿ SSLC ಅಥವಾ 10ನೇ ತರಗತಿ ತೇರ್ಗಡೆಯಾಗಿರಬೇಕು. ಅದೇ ರೀತಿ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 8ನೇ ಪಾಸಾಗಿರಬೇಕು. ಎರಡೂ ಹುದ್ದೆಗೂ ವಯಸ್ಸಿನ ಮಿತಿ 20 ರಿಂದ 35 ವರ್ಷವಾಗಿದ್ದು; ಈ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಂಬಳ, ಸೌಲತ್ತುಗಳೇನು?

ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 8,000 ರೂಪಾಯಿ ಸಂಬಳ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಪ್ರತಿ ತಿಂಗಳು 4,000 ರೂಪಾಯಿ ನಿಗದಿಪಡಿಸಲಾಗಿದೆ. ಆದರೆ ಈಚೆಗೆ ಮಂಡನೆಯಾದ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಈ ವೇತನ ಪರಿಷ್ಕರಣೆ ಮಾಡುವ ಬಗ್ಗೆ ಸರಕಾರ ಘೋಷಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಈಗ ನೀಡುವ ಮಾಸಿಕ ಗೌರವಧನವನ್ನು ಮಾಸಿಕ ತಲಾ 1,000 ರೂಪಾಯಿಯಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಅಷ್ಟೇ ಅಲ್ಲ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂಪಾಯಿಗಳ ಅನುದಾನ ಮೀಸಲಿಡಲಾಗಿದೆ. ಇನ್ನು, 25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂಪಾಯಿ ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂಪಾಯಿ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಗಡಪತ್ರದಲ್ಲಿ ತಿಳಿಸಿದ್ದಾರೆ.

ನೇಮಕ ಪ್ರಕ್ರಿಯೆ ಹೇಗೆ?

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಕ್ಕೆ ಸರಕಾರ ಈ ಹಿಂದೆ ಇದ್ದ ನಿಯಮ ಪರಿಷ್ಕರಿಸಿ ಆನ್‌ಲೈನ್ ಅರ್ಜಿ ಬದಲಾಗಿ ನೇರ ಅರ್ಜಿ ಮೂಲಕ ನೇಮಕಕ್ಕೆ ಆದೇಶ ಹೊರಡಿಸಿದೆ. ಆನ್‌ಲೈನ್ ಹೊಸ ತಂತ್ರಾಂಶ (ವೆಬ್‌ಸೈಟ್) ಅಳವಡಿಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ. ಹೊಸ ತಂತ್ರಾಂಶ ಸಿದ್ಧಪಡಿಸಲು ಕನಿಷ್ಠ ಮೂರ್ನಾಲ್ಕು ತಿಂಗಳ ಕಾಲಾವಕಾಶ ಬೇಕಿದೆ. ಜೊತೆಗೆ ಇಷ್ಟರಲ್ಲೇ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಪ್ರಕಟವಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಅರ್ಜಿ ಸ್ವೀಕರಿಸಲು ಸರಕಾರ ಅವಕಾಶ ಕಲ್ಪಿಸಿದೆ.

ಅರ್ಜಿ ಸ್ವೀಕಾರ ಸಂಬಂಧ ಕ್ರಮಬದ್ಧ ನಿಯಮಗಳನ್ನು ಅನುಸರಿಸಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ನೇಮಕ ಪ್ರಾಧಿಕಾರದಿಂದ ಅನುಮೋದನೆ ಪಡೆಯುವಂತೆ ಸೂಚಿಸಿದೆ. ಆದರೆ ಅನೇಕ ಜಿಲ್ಲೆಗಳಲ್ಲಿ ನೇರ ಅರ್ಜಿ ಸ್ವೀಕರಿಸಲು ಸಂಬಂಧಪಟ್ಟ ಆಡಳಿತ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ನೇಮಕ ಸಂದರ್ಭ ವಿಪರೀತ ರಾಜಕೀಯ ಒತ್ತಡ ಎದುರಾಗಬಹುದು ಎಂಬ ಆತಂಕದಲ್ಲಿ ನೇರ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ತಡೆ ಒಡ್ಡಲಾಗುತ್ತಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

15 ದಿನದಲ್ಲಿ ನೇಮಕ

ಹುದ್ದೆ ನೇಮಕ ಪ್ರಕ್ರಿಯೆಯಲ್ಲಿ ಪ್ರಥಮ ಅವಧಿಯಲ್ಲಿ 30 ದಿನ, 2ನೇ ಅವಧಿಗೆ 10 ದಿನ ಪತ್ರಿಕಾ ಪ್ರಕಟಣೆ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಿದ ಕುರಿತಂತೆ 15 ದಿನ ಸಾರ್ವಜನಿಕ ಪ್ರಕಟಣಾ ಫಲಕದಲ್ಲಿ ಪ್ರಕಟಿಸಬೇಕಿದೆ. 7 ದಿನದೊಳಗೆ ಸಾರ್ವಜನಿಕ ಆಕ್ಷೇಪಣೆ ಪಡೆಯಬೇಕು. ಜಿಲ್ಲಾಧಿಕಾರಿ ಅಧ್ಯಕ್ಷತೆಯ ನೇಮಕಾತಿ ಪ್ರಾಧಿಕಾರ 15 ದಿನದೊಳಗೆ ನೇಮಕಕ್ಕೆ ಅನುಮೋದನೆ ನೀಡಿ ಆದೇಶ ಹೊರಡಿಸಬೇಕಿದೆ. ನೇರ ಅರ್ಜಿ ಸ್ವೀಕರಿಸಿ ನೇಮಕ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರಕಾರದ ಆಧೀನ ಕಾರ್ಯದರ್ಶಿ 2023 ಫೆಬ್ರವರಿ 10ರಂದು ಆದೇಶ ಹೊರಡಿಸಿದ್ದಾರೆ.

ನೇಮಕ ಸಂಬಂಧ 2022 ಡಿಸೆಂಬರ್ 3ರಂದು ಸರಕಾರ ಪ್ರಕಟಿಸಿದ ಮಾರ್ಗಸೂಚಿ ನಿಯಮ ಪಾಲಿಸುವುದು ಕಡ್ಡಾಯ ಎಂದು ಆದೇಶದಲ್ಲಿ ಸೂಚಿಸಲಾಗಿದೆ. ನೇಮಕ ಪ್ರಕ್ರಿಯೆ ಪಾಲಿಸುವಾಗ ಮೀಸಲಾತಿ ನಿಯಮಗಳ ಉಲ್ಲಂಘಿಸದಂತೆ ಸರಕಾರ ಸೂಚನೆ ನೀಡಿದೆ. ಎಸ್ಸಿ, ಎಸ್ಟಿ ವರ್ಗಕ್ಕೆ ಮೀಸಲಾದ ಹುದ್ದೆಗಳನ್ನು ಕಡ್ಡಾಯವಾಗಿ ನೇಮಕ ಸಂದರ್ಭ ಪರಿಗಣಿಸಬೇಕಿದೆ. ನೇಮಕ ಕುರಿತಂತೆ ಸರಕಾರ ಈ ಹಿಂದೆ ವಿಧಿಸಿದ ಷರತ್ತುಗಳನ್ನು ಉಲ್ಲಂಘಿಸಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: 3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ವಿಶೇಷವೆಂದರೆ, ಸರಕಾರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅವಕಾಶ ಕಲ್ಪಿಸಿದ್ದರೂ ಸದ್ಯಕ್ಕೆ ಚುನಾವಣೆ ಹಿನ್ನಲೆಯಲ್ಲಿ ನೇರ ಅರ್ಜಿ ಸಲ್ಲಿಕೆ ಆದೇಶ ಬಹಿರಂಗಪಡಿಸದಂತೆ ತಡೆಯಲಾಗಿದೆ ಎನ್ನಲಾಗುತ್ತಿದೆ. ಆದರೆ ಯಾವುದೇ ಕ್ಷಣದಲ್ಲಾದರೂ ಅಧಿಕೃತ ನೇಮಕ ಆದೇಶ ಹೊರಬೀಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಹುದ್ದೆಗಳ ನೇಮಕ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಆಧಾರಿತವಾಗಿರುವುದರಿಂದ ಆಕಾಂಕ್ಷಿಗಳು ಸದಾ ಸನ್ನದ್ಧವಾಗಿರುವುದು ಉತ್ತಮ.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

Agriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!